ಅಂಬೇಡ್ಕರ್ ತತ್ವಗಳು ಅನುಕರಣೀಯ – ರಮೇಶ ಸಣ್ಣಕ್ಕಿ

Must Read

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...

ಗಾಣಿಗ ಸಮಾಜ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಸವದತ್ತಿ: ತಾಲೂಕಿನ ಗಾಣಿಗ ಸಮಾಜದ ಎಸ್..ಎಸ್.ಎಲ್.ಸಿ.ಹಾಗೂ ಪಿ.ಯು.ಸಿ .ಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುವುದು ಎಂದು ಸವದತ್ತಿ ತಾಲೂಕಿನ ಗಾಣಿಗ ಸಮಾಜದ ತಾಲೂಕು ಘಟಕದ ಪ್ರಧಾನ...

ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಸಮಾರಂಭ

ಬೆಳಗಾವಿ ಶಿವಬಸವನಗರದ ಶ್ರೀ ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ದಿ. ೨೫ ರಿಂದ ೨೯ ಅಕ್ಟೋಬರ್ ೨೦೨೧ ರವರೆಗೆ ಐದು ದಿನಗಳ...

ಮೂಡಲಗಿ : ಪ್ರಪಂಚದಲ್ಲಿ ಅಭೂತ ಪೂರ್ವ ಕೊಡುಗೆಯಾದ ಪ್ರಜಾಪ್ರಭುತ್ವ ವ್ಯವಸ್ಥೆ ಎತ್ತಿ ಹಿಡಿಯುವ ನಿಟ್ಟಿನಲ್ಲಿ ಯಶಸ್ವಿಯಾದ ಸಂವಿಧಾನ ನಿರ್ಮಾತೃ ಡಾ ಬಾಬಾಸಾಹೇಬ ಅಂಬೇಡ್ಕರ ಅವರ ತತ್ವಾದರ್ಶಗಳು ಹಾಗೂ ಅವರು ನಡೆದುಕೊಂಡ ಜೀವನ ಶೈಲಿ ನಿಜಕ್ಕೂ ಮಾದರಿಯಾಗಿದೆ ಎಂದು ಜಿಲ್ಲಾ ಡಿ.ಎಸ್.ಎಸ್ ಸಂಚಾಲಕ ಹಾಗೂ ಮಾಜಿ ಪುರಸಭೆ ಸದಸ್ಯ ರಮೇಶ ಸಣ್ಣಕ್ಕಿ ಹೇಳಿದರು.

ಪಟ್ಟಣದ ರಾಜೀವಗಾಂಧಿ ನಗರದ ಅಂಬೇಡ್ಕರ್ ಭವನದಲ್ಲಿ ಮಹಾಪರಿನಿರ್ವಾಣ ದಿನದ ಅಂಗವಾಗಿ ಜರುಗಿದ ಕಾರ್ಯಕ್ರಮದಲ್ಲಿ ಮಾತನಾಡಿ, ಭಾರತದಲ್ಲಿ ಅಷ್ಟೇ ಅಲ್ಲದೆ ವಿಶ್ವದಾದ್ಯಂತ ಸಂವಿಧಾನ ನಿರ್ಮಾತೃ ಡಾ ಬಾಬಾಸಾಹೇಬ ಅಂಬೇಡ್ಕರ ಅವರ ಮಹಾಪರಿನಿರ್ವಾಣ ದಿನದ ಅಂಗವಾಗಿ ಶ್ರೀಸಾಮಾನ್ಯರು ಅವರನ್ನು ಸ್ಮರಿಸಿ ಗೌರವ ಸಲ್ಲಿಸುತ್ತಾರೆ.

ಅಂಬೇಡ್ಕರ ಅವರ ಆಲೋಚನೆ ಮತ್ತು ಅಭಿಪ್ರಾಯಗಳು ಲಕ್ಷಾಂತರ ಜನರಿಗೆ ಶಕ್ತಿ ನೀಡುತ್ತದೆ. ದೇಶದ ಬಗ್ಗೆ ಇಟ್ಟಿರುವ ಕನಸುಗಳನ್ನು ಸಕಾರಗೊಳಿಸುವ ನಿಟ್ಟಿನಲ್ಲಿ ಅವಿರತವಾಗಿ ಶ್ರಮಿಸಬೇಕೆಂದು ಹೇಳಿದರು.

- Advertisement -

ವಿಲ್ಸನ್ ಖಾನಟ್ಟಿ ಮಾತನಾಡಿ, ಮೌಡ್ಯತೆ, ದಾರಿದ್ರ್ಯ, ಅನಿಷ್ಠ ಪದ್ದತಿಗಳು ಸಮಾಜದಲ್ಲಿರದೆ ಪ್ರತಿಯೊಬ್ಬರು ಶ್ರೇಷ್ಠಮಯವಾಗಿ ಬದುಕ ಬೇಕು. ಶಿಕ್ಷಣ, ಸಂಘಟನೆ, ಹೋರಾಟದ ಮೂಲಕ ಪ್ರತಿಯೊಂದನ್ನು ನಾವು ಪಡೆಯಲು ಸಾದ್ಯವಾಗುವದು ಎಂದರು.

ಈ ಸಂದರ್ಭದಲ್ಲಿ ಟಿಎಪಿಎಮ್‍ಸಿ ಸದಸ್ಯ ಪ್ರಭು ಭಂಗೆನ್ನವರ, ಪುರಸಭೆ ಮಾಜಿ ಸದಸ್ಯ ಮರೆಪ್ಪ ಮರೆಪ್ಪಗೋಳ, ವಿಲಾಸ ಸಣ್ಣಕ್ಕಿ ಅಶೋಕ ಮರೆನ್ನವರ, ಹಣಮಂತ ಹವಳೇವ್ವಗೋಳ, ರಾಜು ಪರಸನ್ನವರ, ಚನ್ನಪ್ಪ ಢವಳೇಶ್ವರ, ಜಯವಂತ ನಾಗನ್ನವರ, ಸುಂದರ ಬಾಲಪ್ಪನ್ನವರ, ಸುಂದರ ಹವಳೇವ್ವಗೋಳ, ಬಾಬು ಮೇತ್ರಿ ಮತ್ತು ದಲಿತ ಸಂಘರ್ಷ ಸಮೀತಿಯ ಕಾರ್ಯಕರ್ತರು ಮತ್ತಿತರರು ಉಪಸ್ಥಿತರಿದ್ದರು.

ಜಿಲ್ಲಾ ಕಛೇರಿ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ(ಸಂಯೋಜಕ) ಇಲ್ಲಿಯ ಜಿಲ್ಲಾ ಕಚೇರಿಯಲ್ಲಿ ರವಿವಾರದಂದು ಡಾ.ಬಾಬಾ ಸಾಹೇಬ್ ಅಂಬೇಡ್ಕರ ಅವರ ಮಹಾಪರಿನಿರ್ವಾಣ ದಿನದಂದು ಡಾ.ಬಾಬಾಸಾಹೇಬ್ ಅಂಬೇಡ್ಕರ ಅವರ ಭಾವಚಿತ್ರಕ್ಕೆ ಸಮಿತಿಯ ಜಿಲ್ಲಾ ಅದ್ಯಕ್ಷ ಯಶವಂತ ಮಂಟೂರ ಪೂಜೆ ಸಲ್ಲಿಸಿ ಮಾತನಾಡಿದರು.

ಸಮಿತಿಯ ತಾಲೂಕಾ ಸಂಚಾಲಕ ದುರ್ಗಪ್ಪ ದಂಡಿನ್ನವರ, ಚಿಂತಪ್ಪ ಭರಮನ್ನವರ, ಶಿವಾನಂದ ಹುಣಶಿಗಿಡ್ಡದ, ಶಿವಾಜಿ ಸಾವಳಂಕಿ, ಪವನ ಮಾದರ, ಸಂಜು ಶಿಡ್ಲೆಪ್ಪಗೋಳ, ಮಹಾದೇವ ಕೊಳವಿ, ಮಲೀಕ್ ಬಾಗವಾನ ಮತ್ತಿತರರು ಇದ್ದರು.

- Advertisement -
- Advertisement -

Latest News

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...
- Advertisement -

More Articles Like This

- Advertisement -
close
error: Content is protected !!