ಕಾಗವಾಡದಲ್ಲಿ ಜಿಲ್ಲಾ ಸಾಹಿತ್ಯ ಸಮ್ಮೇಳನ; ಕೋರೆಯವರೊಂದಿಗೆ ಚರ್ಚೆ

Must Read

ಜೆಡಿಎಸ್ ಗೆ ಗೆಲುವು ಕುಮಾರಸ್ವಾಮಿಗೆ ಬೇಕಿಲ್ಲ, ಬಿಜೆಪಿ ಗೆಲ್ಲಿಸಲು ಆಸಕ್ತಿ ಹೊಂದಿದ್ದಾರೆ – ಎಸ್ ಎಂ ಪಾಟೀಲ

ಸಿಂದಗಿ: ಈ ಕ್ಷೇತ್ರದ ಅಭಿವೃದ್ಧಿಗೆ ದಿ.ಮನಗೂಳಿ ಅವರು ತಮ್ಮ ಆಯುಷ್ಯವನ್ನೆ ಮುಡಿಪಾಗಿಟ್ಟು ದುಡಿದು ಅಗಲಿ ಹೋಗಿದ್ದಾರೆ ಅವರ ಮಗನಿಗೆ ಕೂಲಿ ಸಿಗಬೇಕು ಆದರೆ ಜೆಡಿಎಸ್ ಪಕ್ಷದ...

ಕಾಂಗ್ರೆಸ್ ಸರ್ಕಾರದ ಕೆಲಸಗಳು ಅದರ ಗೆಲುವಿಗೆ ಕಾರಣವಾಗುತ್ತದೆ – ಸುಜಾತಾ ಕಳ್ಳಿಮನಿ

ಸಿಂದಗಿ: ಸಿದ್ದರಾಮಯ್ಯನವರು ಐದು ವರ್ಷದ ಅಧಿಕಾರದ ಅವಧಿಯಲ್ಲಿ ಈ ಕರುನಾಡಿಗೆ ಬಡವರ ಪರ, ರೈತರ ಪರ ಜಾರಿಗೆ ತಂದ ಯೋಜನೆಗಳು ಈ ಸಿಂದಗಿ ಉಪಚುನಾವಣೆಯಲ್ಲಿ ಕಾಂಗ್ರೆಸ್...

ಬಿಜೆಪಿ ಅಲೆಮಾರಿ ಜನಾಂಗಕ್ಕೆ ಸುಳ್ಳು ಹೇಳಿ ಮತ ಪಡೆಯುತ್ತಿದೆ – ಮೇಘರಾಜ್ ಆರೋಪ

ಸಿಂದಗಿ: ಬಿಜೆಪಿಯ ಸರ್ಕಾರ  ಅಧಿಕಾರಕ್ಕೆ ಬಂದು ಎರಡು ವರ್ಷವಾದರೂ  ಅಲೆಮಾರಿ, ಅರೆ ಅಲೆಮಾರಿ ಸಮುದಾಯದ ಆಶ್ರಯ ಮನೆಗಳನ್ನು  ಮಂಜೂರು ಮಾಡದೆ ಕೇವಲ ಕಾಗದ ಪತ್ರದಲ್ಲಿ ಮಂಜೂರು...

ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಕಾಗವಾಡದಲ್ಲಿ ಜನವರಿ ಎರಡನೇ ವಾರದಲ್ಲಿ ಜರುಗಿಸುವ ಕುರಿತು ಕೆ.ಎಲ್.ಈ.ಅಧ್ಯಕ್ಷರೂ ರಾಜ್ಯಸಭೆಯ ಮಾಜಿ ಸದಸ್ಯರೂ ಆದ ಡಾ.ಪ್ರಭಾಕರ ಕೋರೆ ಅವರೊಂದಿಗೆ ಇಂದು ಬೆಳಗಾವಿಯಲ್ಲಿ ಚರ್ಚಿಸಿ ಮಾರ್ಗದರ್ಶನ ಪಡೆಯಲಾಯಿತು.

ಗಡಿಭಾಗದಲ್ಲಿ ಸಮ್ಮೇಳನ ನಡೆಸುವದೇ ಸೂಕ್ತವಂದು ಅಭಿಪ್ರಾಯಿಸಿದ ಕೋರೆ ಅವರು ಸಮ್ಮೇಳನದ ಯಶಸ್ಸಿಗೆ ಸಕಲ ವ್ಯವಸ್ಥೆ ,ಸಹಾಯ ಸಹಕಾರ ನೀಡಲು ಕಾಗವಾಡದ ಶಿವಾನಂದ ಕಾಲೇಜಿನ ಪ್ರಾಚಾರ್ಯರು ಮತ್ತಿತರರಿಗೆ ಸೂಚಿಸಿದರು.

ಕಸಾಪ ಜಿಲ್ಲಾಧ್ಯಕ್ಷೆ ಮಂಗಲಾ ಮೆಟಗುಡ್ಡ ಅವರ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಜಿಲ್ಲೆಯ ಎಲ್ಲ ತಾಲೂಕು ಅಧ್ಯಕ್ಷರು, ಗೌ.ಕಾರ್ಯದರ್ಶಿ ಎಮ್.ವೈ.ಮೆಣಸಿನಕಾಯಿ ಭಾಗವಹಿಸಿದ್ದರು.
ನೆನೆಗುದಿಗೆ ಬಿದ್ದಿರುವ ಕೆಲ ಕಸಾಪ ಭವನಗಳ ಕುರಿತು ಸಂಬಂಧಿಸಿದ ಅಧಿಕಾರಿಗಳಿಗೆ ಫೋನಾಯಿಸಿದ ಕೋರೆಯವರು ತಕ್ಷಣವೇ ಕಟ್ಟಡ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲು ಆದೇಶಿಸಿದ್ದು ಇಂದಿನ ಸಭೆಯ ವಿಶೇಷವಾಗಿತ್ತು.

- Advertisement -

ನಂತರ ಬೆಳಗಾವಿ ಜಿಲ್ಲಾಧಿಕಾರಿ ಎಮ್.ಜಿ.ಹಿರೇಮಠ ಅವರನ್ನು ಭೇಟಿಮಾಡಿ ಕಸಾಪ ನಿಯೋಗವು ಜಿಲ್ಲಾ ಹಾಗೂ ತಾಲೂಕು ಸಮ್ಮೇಳನಗಳನ್ನು ಮಾಡಲು ಅನುಮತಿಸುವಂತೆ ಮನವಿ ನೀಡಿದರು.

ಕೋವಿಡ್ ನಿಯಮಗಳನ್ನು ಪಾಲಿಸಿ ಜನವರಿಯಲ್ಲಿ ಸಮ್ಮೇಳನಗಳನ್ನು ಜರುಗಿಸುವಂತೆ ಜಿಲ್ಲಾಧಿಕಾರಿಗಳು ಸಲಹೆ ನೀಡದರು.

ಖಾನಾಪುರದಲ್ಲಿಯ ಕನ್ನಡ ಭವನಕ್ಕಾಗಿ ನೀಡಿರುವ ನಿವೇಶನದ ಖಾತಾ ಮಾಡುವ ಕಾರ್ಯ ನೆನೆಗುದಿಗೆ ಬಿದ್ದಿರುವದನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಾಗ ಅವರು ಕೂಡಲೇ ಸ್ಪಂದಿಸಿ ಖಾನಾಪುರ ಪುರಸಭೆಯ ಮುಖ್ಯಾಧಿಕಾರಿಗೆ ಕರೆ ಮಾಡಿ ತಕ್ಷಣವೇ ಖಾತಾ ಮಾಡಿಕೊಡಲು ಆದೇಶಿಸಿದರು.

- Advertisement -
- Advertisement -

Latest News

ಜೆಡಿಎಸ್ ಗೆ ಗೆಲುವು ಕುಮಾರಸ್ವಾಮಿಗೆ ಬೇಕಿಲ್ಲ, ಬಿಜೆಪಿ ಗೆಲ್ಲಿಸಲು ಆಸಕ್ತಿ ಹೊಂದಿದ್ದಾರೆ – ಎಸ್ ಎಂ ಪಾಟೀಲ

ಸಿಂದಗಿ: ಈ ಕ್ಷೇತ್ರದ ಅಭಿವೃದ್ಧಿಗೆ ದಿ.ಮನಗೂಳಿ ಅವರು ತಮ್ಮ ಆಯುಷ್ಯವನ್ನೆ ಮುಡಿಪಾಗಿಟ್ಟು ದುಡಿದು ಅಗಲಿ ಹೋಗಿದ್ದಾರೆ ಅವರ ಮಗನಿಗೆ ಕೂಲಿ ಸಿಗಬೇಕು ಆದರೆ ಜೆಡಿಎಸ್ ಪಕ್ಷದ...
- Advertisement -

More Articles Like This

- Advertisement -
close
error: Content is protected !!