ಕುವೆಂಪು ಜನ್ಮ ದಿನಾಚರಣೆ ಅಂಗವಾಗಿ ವಿವಿಧ ದತ್ತಿ ಉಪನ್ಯಾಸ, ದತ್ತಿ ಬಹುಮಾನ, ಕನ್ನಡ ಆದರ್ಶ ದಂಪತಿ ಹಾಗೂ ಕನ್ನಡ ಸೇವಾ ರತ್ನ ಪ್ರಶಸ್ತಿ ಪ್ರದಾನ

Must Read

25 ಸಾವಿರ ಮತಗಳಿಂದ ಬಿಜೆಪಿ ಗೆಲ್ಲುತ್ತದೆ – ಜೊಲ್ಲೆ ವಿಶ್ವಾಸ

ಸಿಂದಗಿ: ಎರಡು ಬಾರಿ ಚುನಾಯಿತರಾದ ರಮೇಶ ಭೂಸನೂರ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲಿ ಭಾಜಪ ಅಧಿಕಾರದಲ್ಲಿದೆ ಕ್ಷೇತ್ರದ ಅಭಿವೃದ್ಧಿ ದಿಸೆಯಲ್ಲಿ...

“ಕಲಾಸೃಷ್ಟಿ” ಆರ್ಟ್ ವರ್ಕ್ ಗೆ ಚಾಲನೆ ನೀಡಿದ ಲೋಕಲ್ ಲೀಡರ್ ನಟ ಕಲ್ಮೇಶ್

ಬಾಗಲಕೋಟೆ: ಇದೆ ಅಕ್ಟೋಬರ್ ೧೫ ರಂದು, ಗದ್ದನಕೇರಿಯಲ್ಲಿ "ಕಲಾಸೃಷ್ಟಿ" ಆರ್ಟ್ ವರ್ಕ್ ಪ್ರಾರಂಭವಾಯಿತು. ಇದನ್ನು ನಟ ಕಲ್ಮೇಶ್, ಬಾಗಲಕೋಟೆಯ ನಟಿ ಅಂಕಿತಾ ನಾಯ್ಡು ಹಾಗೂ ಸಹ...

ಗೋವಿಂದಹಳ್ಳಿಯ ಪಂಚಲಿಂಗೇಶ್ವರ ; ಐದು ಶಿಖರಗಳ ಅಪರೂಪದ ಗುಡಿ

ಸ್ಥಳದ ಬಗ್ಗೆ ಕಿರು ಪರಿಚಯ: ಪ್ರಖ್ಯಾತ ಪ್ರವಾಸಿ ತಾಣವಾದ ಗೋವಿಂದನಹಳ್ಳಿಯ ಬ್ರಹ್ಮಲಿಂಗೇಶ್ವರ ಗುಡಿಯಿರುವುದು ಮಂಡ್ಯದಿಂದ 52 ಕಿ.ಮೀ ಹಾಗೂ ಕೃಷ್ಣರಾಜಪೇಟೆಯಿಂದ 20 ಕಿ.ಮೀ ಹಾಗು ಕಿಕ್ಕೇರಿಯಿಂದ...

ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಅನಿಕೇತನ ಕನ್ನಡ ಬಳಗ ಸಹಯೋಗದಲ್ಲಿ ಕುವೆಂಪು ಜನ್ಮ ದಿನಾಚರಣೆ ಪ್ರಯುಕ್ತ ವಿವಿಧ ದತ್ತಿ ಉಪನ್ಯಾಸ, ದತ್ತಿ ಬಹುಮಾನ, ಕನ್ನಡ ಆದರ್ಶ ದಂಪತಿ ಹಾಗೂ ಕನ್ನಡ ಸೇವಾ ರತ್ನ ಪ್ರಶಸ್ತಿ ಪ್ರದಾನ ಸಮಾರಂಭವನ್ನು ನಗರದ ಚಾಮರಾಜಪೇಟೆ ಕನ್ನಡ ಸಾಹಿತ್ಯ ಪರಿಷತ್ತು ಆವರಣದ ಕುವೆಂಪು ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.

ರಾಷ್ಟ್ರ ಪ್ರಶಸ್ತಿ ಪುರಸ್ಕೃತ, ಜಾನಪದ ತಜ್ಞ ಡಾ.ಹನಿಯೂರು ಚಂದ್ರೇಗೌಡ ಸಮಾರಂಭ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ , ಡಾ.ಆರ್ ಗುರುಪ್ರಸಾದ್ ಉಪಸ್ಥಿತರಿದ್ದು, ಸಾಹಿತಿ ಗಿರಿಜಾ ಎಸ್.ದೇಶಪಾಂಡೆ ಮತ್ತು ಸ್ತ್ರೀ ರೋಗ ತಜ್ಞೆ ಡಾ. ರೇಖಾ ರಾಜೇಂದ್ರ ಕುಮಾರ್ ದತ್ತಿ ಉಪನ್ಯಾಸ ನೀಡಿದರು.

- Advertisement -

ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಅನಿಕೇತನ ಕನ್ನಡ ಬಳಗದ ಅಧ್ಯಕ್ಷ ಮಾಯಣ್ಣರವರು ಅಶಕ್ತ ಪೋಷಕ ಸಭಾದ ನಿರ್ವಾಹಕಿ ಹೆಚ್.ಸುಮತಿರವರಿಗೆ ವಿ. ರಾಣಿ ಗೋವಿಂದ ರಾಜು ದತ್ತಿ ಪ್ರಶಸ್ತಿ, ಲೇಖಕಿ ಸುಮ ಚಂದ್ರಶೇಖರ್ ರವರ ಗಾಂಧಿ ವ್ಯಕ್ತಿತ್ವ ದರ್ಶನದ ‘ಸತ್ಯ ಪಥದ ನಿತ್ಯ ಸಂತ’ ಪುಸ್ತಕಕ್ಕೆ ವೈಚಾರಿಕ ಕೃತಿಗೆ ನೀಡುವ ಪ್ರೊ.ಬಿ.ಕೃಷ್ಣಪ್ಪ ದತ್ತಿ ಪ್ರಶಸ್ತಿ ಹಾಗೂ ಕೃಷ್ಣಾಬಾಯಿ ಹಾಗಲವಾಡಿ ರವರ ನಾಟಕ ದಾನಚಿಂತಾಮಣಿ ಅತ್ತಿಮಬ್ಬೆ ಕೃತಿಗೆ ನಾಟಕಕಾರ ಕೈಲಾಸಂ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.

ಇದೇ ಸಂದರ್ಭದಲ್ಲಿ ಸಾಹಿತ್ಯ, ಸಂಸ್ಕೃತಿ, ಶಿಕ್ಷಣ, ಸಮಾಜಸೇವೆ, ಕನ್ನಡ ಪರ ಹೋರಾಟ, ಸಂಘಟನೆ, ಸಂಗೀತ, ನೃತ್ಯ, ವೈದ್ಯಕೀಯ ಕ್ಷೇತ್ರ ಮುಂತಾದ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯ ಸಾಧಕರನ್ನು ಕನ್ನಡ ಆದರ್ಶ ದಂಪತಿ ಪ್ರಶಸ್ತಿ ಮತ್ತು ಕನ್ನಡ ಸೇವಾರತ್ನ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು.

- Advertisement -
- Advertisement -

Latest News

25 ಸಾವಿರ ಮತಗಳಿಂದ ಬಿಜೆಪಿ ಗೆಲ್ಲುತ್ತದೆ – ಜೊಲ್ಲೆ ವಿಶ್ವಾಸ

ಸಿಂದಗಿ: ಎರಡು ಬಾರಿ ಚುನಾಯಿತರಾದ ರಮೇಶ ಭೂಸನೂರ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲಿ ಭಾಜಪ ಅಧಿಕಾರದಲ್ಲಿದೆ ಕ್ಷೇತ್ರದ ಅಭಿವೃದ್ಧಿ ದಿಸೆಯಲ್ಲಿ...
- Advertisement -

More Articles Like This

- Advertisement -
close
error: Content is protected !!