ಕೈ, ಕಮಲ ಅಭ್ಯರ್ಥಿಗಳು ಕೋಟ್ಯಧೀಶರು, ಜೆಡಿಎಸ್ ಅಭ್ಯರ್ಥಿ ಲಕ್ಷಾಧೀಶೆ!

Must Read

ಜೆಡಿಎಸ್ ಗೆ ಗೆಲುವು ಕುಮಾರಸ್ವಾಮಿಗೆ ಬೇಕಿಲ್ಲ, ಬಿಜೆಪಿ ಗೆಲ್ಲಿಸಲು ಆಸಕ್ತಿ ಹೊಂದಿದ್ದಾರೆ – ಎಸ್ ಎಂ ಪಾಟೀಲ

ಸಿಂದಗಿ: ಈ ಕ್ಷೇತ್ರದ ಅಭಿವೃದ್ಧಿಗೆ ದಿ.ಮನಗೂಳಿ ಅವರು ತಮ್ಮ ಆಯುಷ್ಯವನ್ನೆ ಮುಡಿಪಾಗಿಟ್ಟು ದುಡಿದು ಅಗಲಿ ಹೋಗಿದ್ದಾರೆ ಅವರ ಮಗನಿಗೆ ಕೂಲಿ ಸಿಗಬೇಕು ಆದರೆ ಜೆಡಿಎಸ್ ಪಕ್ಷದ...

ಕಾಂಗ್ರೆಸ್ ಸರ್ಕಾರದ ಕೆಲಸಗಳು ಅದರ ಗೆಲುವಿಗೆ ಕಾರಣವಾಗುತ್ತದೆ – ಸುಜಾತಾ ಕಳ್ಳಿಮನಿ

ಸಿಂದಗಿ: ಸಿದ್ದರಾಮಯ್ಯನವರು ಐದು ವರ್ಷದ ಅಧಿಕಾರದ ಅವಧಿಯಲ್ಲಿ ಈ ಕರುನಾಡಿಗೆ ಬಡವರ ಪರ, ರೈತರ ಪರ ಜಾರಿಗೆ ತಂದ ಯೋಜನೆಗಳು ಈ ಸಿಂದಗಿ ಉಪಚುನಾವಣೆಯಲ್ಲಿ ಕಾಂಗ್ರೆಸ್...

ಬಿಜೆಪಿ ಅಲೆಮಾರಿ ಜನಾಂಗಕ್ಕೆ ಸುಳ್ಳು ಹೇಳಿ ಮತ ಪಡೆಯುತ್ತಿದೆ – ಮೇಘರಾಜ್ ಆರೋಪ

ಸಿಂದಗಿ: ಬಿಜೆಪಿಯ ಸರ್ಕಾರ  ಅಧಿಕಾರಕ್ಕೆ ಬಂದು ಎರಡು ವರ್ಷವಾದರೂ  ಅಲೆಮಾರಿ, ಅರೆ ಅಲೆಮಾರಿ ಸಮುದಾಯದ ಆಶ್ರಯ ಮನೆಗಳನ್ನು  ಮಂಜೂರು ಮಾಡದೆ ಕೇವಲ ಕಾಗದ ಪತ್ರದಲ್ಲಿ ಮಂಜೂರು...

ಸಿಂದಗಿ: ಉಪ ಚುನಾವಣೆಯಲ್ಲಿ ಸ್ಪರ್ಧಿಸಿರುವ ಪ್ರಮುಖ ರಾಜಕೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಅಭ್ಯರ್ಥಿಗಳು ತಮ್ಮ ಆಸ್ತಿಯನ್ನು ಘೋಷಿಸಿಕೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ 7.37 ಕೋಟಿ ರೂ. ಆಸ್ತಿ ಹೊಂದಿದ್ದಾರೆ. ಬಿಜೆಪಿಯ ಅಭ್ಯರ್ಥಿ ರಮೇಶ ಭೂಸನೂರ ಬಳಿ 3.78 ಕೋಟಿ ರೂ.ಗಳ ಚರಾಸ್ತಿ ಹಾಗೂ ಸ್ಥಿರಾಸ್ತಿ ಹೊಂದಿದ್ದಾರೆ.

ಕಣದಲ್ಲಿ ಉಳಿದಿರುವ ಮೂವರು ಪ್ರಮುಖ ಪಕ್ಷಗಳ ಅಭ್ಯರ್ಥಿಗಳಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳು ಕೋಟ್ಯಾಧೀಶರಾದರೆ, ಜೆಡಿಎಸ್ ಅಭ್ಯರ್ಥಿ ಲಕ್ಷಾಧೀಶೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ಅವರು ನಾಮಪತ್ರ ಸಲ್ಲಿಸುವ ವೇಳೆ ಅವರು ತಮ್ಮ ಆಸ್ತಿ ವಿವರನ್ನು ಘೋಷಿಸಿಕೊಂಡಿದ್ದಾರೆ.

- Advertisement -

ತಮ್ಮ ಸ್ವಂತ ಹೆಸರಿನಲ್ಲಿ ಚರಾಸ್ತಿ 33,46,765 ರೂ. ಹಾಗೂ ಸ್ಥಿರಾಸ್ತಿ, 6.36 ಕೋಟಿ ರೂ., ಪತ್ನಿ ಹೆಸರಿನಲ್ಲಿ ಚರಾಸ್ತಿ 60,52,713 ಲಕ್ಷ ರೂ. ಹಾಗೂ ಸ್ಥಿರಾಸ್ತಿ 3.25 ಲಕ್ಷ ರೂ., ಅವರ ಅವಲಂಬಿತರು ಸೇರಿ ಒಟ್ಟು ರೂ. 7.37 ಕೋಟಿ ಆಸ್ತಿ ಹೊಂದಿದ್ದಾರೆ. ಇವರು ರೂ. 1.24 ಕೋಟಿ ಸಾಲ ಮಾಡಿದ್ದಾರೆ.

ಇನ್ನು ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಸಹ ಕೋಟಿ ಒಡೆಯರಾಗಿದ್ದಾರೆ. ಇವರಿಗಿಂತ ಇವರ ಪತ್ನಿಯ ಹೆಸರಿನಲ್ಲಿ ಹೆಚ್ಚು ಆಸ್ತಿ ಹೊಂದಿದ್ದಾರೆ. ಭೂಸನೂರ ಸ್ವಂತ ಹೆಸರಿನಲ್ಲಿ ರೂ. 52,35,000 ಲಕ್ಷಗಳ ಸ್ಥಿರಾಸ್ತಿ 92.32 ಲಕ್ಷ ರೂ., ಪತ್ನಿ ಹೆಸರಿನಲ್ಲಿ 32.70 ಲಕ್ಷ ರೂ. ಹಾಗೂ 1,07,74,000 ಕೋಟಿ ರೂ. ಸ್ಥಿರಾಸ್ತಿ ಹೊಂದಿದ್ದಾರೆ. ಇವರ ಅವಲಂಬಿತರು ಸೇರಿ 3.78 ಕೋಟಿ ಆಸ್ತಿ ಒಡೆಯರಾಗಿದ್ದಾರೆ. ಇವರು ಯಾವುದೇ ಸಾಲ ಪಡೆಯದಿರುವುದು ವಿಶೇಷವಾಗಿದೆ.

ಜೆಡಿಎಸ್ ಅಭ್ಯರ್ಥಿ ನಾಜಿಯಾ ಶಕೀಲಾ ಅಂಗಡಿ ಲಕ್ಷಾಧೀಶೆಯಾಗಿದ್ದಾರೆ. ಇವರ ಹೆಸರಿನಲ್ಲಿ 10.70 ಲಕ್ಷ ರೂ. ಚರಾಸ್ಥಿ ಇದೆ. 1 ಲಕ್ಷ ರೂ. ಸ್ಥಿರಾಸ್ತಿ ಹೊಂದಿದ್ದಾರೆ. ಇವರ ಪತಿ ಹೆಸರಿನಲ್ಲಿ ಯಾವುದೇ ಚರಾಸ್ಥಿ ಇಲ್ಲ. 9.60 ಲಕ್ಷ ರೂ. ಸ್ಥಿರಾಸ್ತಿ ಇದೆ. ಇವರ ಅವಲಂಬಿತರು ಸೇರಿ ಒಟ್ಟು 21.13 ಲಕ್ಷ ರೂ. ಆಸ್ತಿ ಹೊಂದಿದ್ದಾರೆ.

ಒಟ್ಟು 8 ಅಭ್ಯರ್ಥಿಗಳಿಂದ 12 ನಾಮಪತ್ರ ಸಲ್ಲಿಕೆಯಾಗಿದ್ದು, ನಾಮಪತ್ರ ಹಿಂಪಡೆಯಲು ಅ.13 ರವರೆಗೆ ಕಾಲಾವಕಾಶ ಇದೆ. ಅಂತಿಮವಾಗಿ ಕಣದಲ್ಲಿ ಉಳಿಯುವ ಅಭ್ಯರ್ಥಿಗಳು ಗೆಲುವಿಗಾಗಿ ಪೈಪೋಟಿ ನಡೆಸಲಿದ್ದಾರೆ.


ವರದಿ: ಪಂಡಿತ್ ಯಂಪೂರೆ, ಸಿಂದಗಿ

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಜೆಡಿಎಸ್ ಗೆ ಗೆಲುವು ಕುಮಾರಸ್ವಾಮಿಗೆ ಬೇಕಿಲ್ಲ, ಬಿಜೆಪಿ ಗೆಲ್ಲಿಸಲು ಆಸಕ್ತಿ ಹೊಂದಿದ್ದಾರೆ – ಎಸ್ ಎಂ ಪಾಟೀಲ

ಸಿಂದಗಿ: ಈ ಕ್ಷೇತ್ರದ ಅಭಿವೃದ್ಧಿಗೆ ದಿ.ಮನಗೂಳಿ ಅವರು ತಮ್ಮ ಆಯುಷ್ಯವನ್ನೆ ಮುಡಿಪಾಗಿಟ್ಟು ದುಡಿದು ಅಗಲಿ ಹೋಗಿದ್ದಾರೆ ಅವರ ಮಗನಿಗೆ ಕೂಲಿ ಸಿಗಬೇಕು ಆದರೆ ಜೆಡಿಎಸ್ ಪಕ್ಷದ...
- Advertisement -

More Articles Like This

- Advertisement -
close
error: Content is protected !!