ಕೊರೋನಾ ಜೊತೆ ವಕ್ಕರಿಸಿದ ವಿಚಿತ್ರ ಕಾಯಿಲೆ

Must Read

ಕೊರೋನಾ ಸಮರ್ಥವಾಗಿ ಎದುರಿಸಲು ಲಸಿಕೆ ಪಡೆಯಿರಿ – ಡಾ.ಶಾಂತವೀರ

ಸಿಂದಗಿ: ಕೋವಿಡ್ ಲಸಿಕೆ ಪಡೆಯುವುದರಿಂದ ಕೋವಿಡ್ ಸೋಂಕು ತಗುಲಿದರು ಯಾವುದೇ ಅಪಾಯವಾಗುವದಿಲ್ಲ ಲಸಿಕೆಯ ಬಗ್ಗೆ ತಪ್ಪು ಗ್ರಹಿಕೆ ಬಿಟ್ಟು 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ...

ಪ್ರಕೃತಿಯೇ ನಿಜವಾದ ದೇವರು – ಶಾಂತ ಗಂಗಾಧರ ಶ್ರೀಗಳು

ಸಿಂದಗಿ: ಪ್ರಕೃತಿಯೇ ನಿಜವಾದ ದೇವರು ನಿಸರ್ಗವೇ ಕೂಡಲ ಸಂಗಮ ಎಂದು ಹೇಳಿದ ಬಸವಣ್ಣನವರ ಹಾಗೂ ಶರಣೆ ಮಾತುಗಳು ಅಕ್ಷರಶಃ ಪ್ರಸ್ತುತವಾಗಿವೆ. ಎಂದು ಪಟ್ಟಣದ ಗುರುದೇವಾಶ್ರಮದ ಶ್ರೀ ಶಾಂತಗಂಗಾಧರ...

ಉತ್ತಮ ಸಮಾಜ ನಿರ್ಮಾಣದಲ್ಲಿ ಶರಣರ ಪಾತ್ರ ಕುರಿತು ಪ್ರವಚನ

ಸಿಂದಗಿ: ಪ್ರತಿಯೊಬ್ಬರಲ್ಲಿ ವಚನ ಸಾಹಿತ್ಯ ಭಂಡಾರವೇ ಅಡಗಿರುತ್ತದೆ ಅದನ್ನು ಪ್ರಸ್ತುತ ಪಡಿಸುವ ಸಾಮರ್ಥ್ಯ ಹೊಂದಿದವರಿಗೆ ಮಾತ್ರ ಸಂಗ್ರಹ ಮಾಡುವ ಧ್ಯೇಯ ಇರುತ್ತದೆ ಅಂಥವರ ಸಾಲಿನಲ್ಲಿ ಶ್ರೀ ಶಾಂತಗಂಗಾಧರ...

ಬೀದರ – ರಾಜ್ಯದಲ್ಲಿ ಕೊರೋನಾ ಎರಡನೆ ಅಲೆ ಭೀತಿಯ ನಡುವೆಯೇ ಗಡಿನಾಡಿನಲ್ಲಿ ಮತ್ತೊಂದು ವಿಚಿತ್ರ ಕಾಯಿಲೆ ಶುರುವಾಗಿದೆ.ಈಗಾಗಲೇ ಹಲವರು ಈ ಕಾಯಿಲೆಯಿಂದ ಬಳಲುತ್ತಿದ್ದಾರೆ. ಈ ವಿಚಿತ್ರ ಕಾಯಿಲೆಗೆ ಇಡಿ ಗ್ರಾಮವೇ ಭಯದಲ್ಲಿ ಮುಳುಗಿದೆ. ಗ್ರಾಮಕ್ಕೆ ವೈದ್ಯಾಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ

ಏನಿದು ವಿಚಿತ್ರ ಕಾಯಿಲೆ ?

ತೆಲಂಗಾಣ, ಮಹಾರಾಷ್ಟ್ರ ಗಡಿಭಾಗ ಕರ್ನಾಟಕದ ಮುಕುಟ ಬೀದರ್ ಜಿಲ್ಲೆಯ ಬಸವಕಲ್ಯಾಣದ ಜಾಫರವಾಡಿ ಗ್ರಾಮದಲ್ಲಿ ಕೆಲ ಜನರಿಗೆ ಒಂದೆ ಮಾದರಿಯಲ್ಲಿ ಕಾಯಿಲೆ ಕಾಣಿಸಿಕೊಂಡಿದ್ದದು ಇದು ಜನರನ್ನು ಚಿಂತೆಗೀಡು ಮಾಡಿದೆ.ಗ್ರಾಮದ ಕೆಲವರಲ್ಲಿ ಆವರಿಸಿದ ಚಿಕನ್‌ ಗುನ್ಯ ಮಾದರಿಯ ಜ್ವರದಿಂದ ಜನರು ತೀವ್ರ ಸಮಸ್ಯೆ ಎದುರಿಸುವಂತಾಗಿದ್ದು, ಕೇವಲ ಬಲ ಭಾಗದ ಕೈ ಕಾಲು ನೋವು ಜೊತೆಗೆ ತೀವ್ರ ಜ್ವರ ಕಾಣಿಸಿಕೊಳ್ಳುತ್ತಿದ್ದು, ಕಾಯಿಲೆಯ ಮೂಲ ತಿಳಿಯದಾಗಿದೆ.

- Advertisement -

ಇನ್ನು ಕಳೆದ ಒಂದು ತಿಂಗಳಿಂದ ಗ್ರಾಮದ ಕೆಲ ಕುಟುಂಬದ ಸದಸ್ಯರಲ್ಲಿ ಒಬ್ಬರ ನಂತರ ಮತ್ತೊಬ್ಬರಲ್ಲಿ ಕಾಣಿಸಿಕೊಳ್ಳುತ್ತಿದ್ದು, ಈ ಕಾಯಿಲೆಗೆ ತುತ್ತಾದವರು ಚಿಕಿತ್ಸೆ ಪಡೆದು ಗುಣಮುಖರಾಗುವಷ್ಟರಲ್ಲಿಯೇ ಅದೇ ಕುಟುಂಬದ ಮತ್ತೊಬ್ಬರಲ್ಲಿ ಇದು ಪ್ರತ್ಯಕ್ಷವಾಗಿ ಆಸ್ಪತ್ರೆ ಸೇರುವಂತೆ ಮಾಡುತ್ತಿದೆ. ತಾಲೂಕಾ ಆರೋಗ್ಯಾಧಿಕಾರಿ ಡಾ. ಪ್ರವೀಣ ಹೂಗಾರ ನೇತೃತ್ವದ ವೈದ್ಯರು ಮತ್ತು ಇಲಾಖೆ ಸಿಬ್ಬಂದಿಗಳ ತಂಡ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಗ್ರಾಮದಲ್ಲಿಯ ಕುಡಿಯುವ ನೀರಿನ ಮೂಲ ಪರೀಕ್ಷೆಗಾಗಿ ಸಿದ್ಧತೆ ನಡೆಸಿದೆ. ಈಗಾಗಲೇ ಕಾಯಿಲೆಯಿಂದ ಬಳಲಿ ಆಸ್ಪತ್ರೆ ಸೇರಿ ಚಿಕಿತ್ಸೆ ಪಡೆಯುತ್ತಿರುವ ಜನರು ಹಾಗೂ ಗುಣಮುಖರಾಗಿರುವ ಜನರ ರಕ್ತದ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ.ಲ್ಯಾಬ್ ವರದಿ ಬಂದ ಮೇಲೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಟಿಎಚ್‌ಓ ಡಾ: ಪ್ರವೀಣ ಹೂಗಾರ ತಿಳಿಸಿದ್ದಾರೆ.

ಈ ಹಿಂದೆ ಫೋರೈಡ್ ಮಿಶ್ರಿತ ನೀರು ಬರುತ್ತಿದೆ ಎಂದು ವರದಿ ಸಹ ಆಗಿದೆ ಎನ್ನಲಾಗಿದ್ದು, ಅದನ್ನು ಪರಿಶೀಲಿಸಲಾಗುತ್ತಿದೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ. ಸದ್ಯ ಈ ವಿಚಿತ್ರ ಕಾಯಿಲೆಗೆ ತುತ್ತಾದವರ ರಕ್ತದ ಮಾದರಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.ವರದಿ ಬಂದ ಬಳಿಕವಷ್ಟೆ ಯಾವ ರೋಗ ಎನ್ನುವುದು ಗೊತ್ತಾಗಲಿದೆ.

ವರದಿ: ನಂದಕುಮಾರ ಕರಂಜೆ
Times of ಕರ್ನಾಟಕ, ಬೀದರ

- Advertisement -
- Advertisement -

Latest News

ಕೊರೋನಾ ಸಮರ್ಥವಾಗಿ ಎದುರಿಸಲು ಲಸಿಕೆ ಪಡೆಯಿರಿ – ಡಾ.ಶಾಂತವೀರ

ಸಿಂದಗಿ: ಕೋವಿಡ್ ಲಸಿಕೆ ಪಡೆಯುವುದರಿಂದ ಕೋವಿಡ್ ಸೋಂಕು ತಗುಲಿದರು ಯಾವುದೇ ಅಪಾಯವಾಗುವದಿಲ್ಲ ಲಸಿಕೆಯ ಬಗ್ಗೆ ತಪ್ಪು ಗ್ರಹಿಕೆ ಬಿಟ್ಟು 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ...
- Advertisement -

More Articles Like This

- Advertisement -
close
error: Content is protected !!