ಕೊರೋನಾ; ಸೋಂಕು ಹಾಗೂ ಸಾವಿನ ಸಂಖ್ಯೆ ಇಳಿಮುಖ

Must Read

25 ಸಾವಿರ ಮತಗಳಿಂದ ಬಿಜೆಪಿ ಗೆಲ್ಲುತ್ತದೆ – ಜೊಲ್ಲೆ ವಿಶ್ವಾಸ

ಸಿಂದಗಿ: ಎರಡು ಬಾರಿ ಚುನಾಯಿತರಾದ ರಮೇಶ ಭೂಸನೂರ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲಿ ಭಾಜಪ ಅಧಿಕಾರದಲ್ಲಿದೆ ಕ್ಷೇತ್ರದ ಅಭಿವೃದ್ಧಿ ದಿಸೆಯಲ್ಲಿ...

“ಕಲಾಸೃಷ್ಟಿ” ಆರ್ಟ್ ವರ್ಕ್ ಗೆ ಚಾಲನೆ ನೀಡಿದ ಲೋಕಲ್ ಲೀಡರ್ ನಟ ಕಲ್ಮೇಶ್

ಬಾಗಲಕೋಟೆ: ಇದೆ ಅಕ್ಟೋಬರ್ ೧೫ ರಂದು, ಗದ್ದನಕೇರಿಯಲ್ಲಿ "ಕಲಾಸೃಷ್ಟಿ" ಆರ್ಟ್ ವರ್ಕ್ ಪ್ರಾರಂಭವಾಯಿತು. ಇದನ್ನು ನಟ ಕಲ್ಮೇಶ್, ಬಾಗಲಕೋಟೆಯ ನಟಿ ಅಂಕಿತಾ ನಾಯ್ಡು ಹಾಗೂ ಸಹ...

ಗೋವಿಂದಹಳ್ಳಿಯ ಪಂಚಲಿಂಗೇಶ್ವರ ; ಐದು ಶಿಖರಗಳ ಅಪರೂಪದ ಗುಡಿ

ಸ್ಥಳದ ಬಗ್ಗೆ ಕಿರು ಪರಿಚಯ: ಪ್ರಖ್ಯಾತ ಪ್ರವಾಸಿ ತಾಣವಾದ ಗೋವಿಂದನಹಳ್ಳಿಯ ಬ್ರಹ್ಮಲಿಂಗೇಶ್ವರ ಗುಡಿಯಿರುವುದು ಮಂಡ್ಯದಿಂದ 52 ಕಿ.ಮೀ ಹಾಗೂ ಕೃಷ್ಣರಾಜಪೇಟೆಯಿಂದ 20 ಕಿ.ಮೀ ಹಾಗು ಕಿಕ್ಕೇರಿಯಿಂದ...

ಹೊಸದಿಲ್ಲಿ – ಐದು ತಿಂಗಳ ನಂತರ ಭಾರತದಲ್ಲಿ ಕಡಿಮೆ ಕೊರೋನಾ ಸೋಂಕು ಪ್ರಕರಣಗಳು ದಾಖಲಾಗಿವೆ

ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 3.83 ಲಕ್ಷಕ್ಕೆ ಇಳಿದಿದ್ದು ಇದು, ಶೇಕಡಾ 4ಕ್ಕಿಂತ ಕಡಿಮೆ ಇದೆ.

ಕೊರೋನಾ ಸೋಂಕಿತರ ಮರಣ ಪ್ರಮಾಣದಲ್ಲೂ ಕುಸಿತವಾಗಿದ್ದು, ಪ್ರತಿ ದಿನ ಮರಣ ಪ್ರಮಾಣ 400ಕ್ಕಿಂತ ಕಡಿಮೆ ವರದಿಯಾಗಿವೆ.

- Advertisement -

ಕೋವಿಡ್ ವಿರುದ್ಧದ ಸಮರದಲ್ಲಿ ಭಾರತ ಮತ್ತೊಂದು ಮಹತ್ವದ ಮೈಲಿಗಲ್ಲು ಸ್ಥಾಪಿಸಿದೆ. ಕಳೆದ 24 ಗಂಟೆಗಳಲ್ಲಿ ಹೊಸದಾಗಿ ಪತ್ತೆಯಾಗಿರುವ ಸೋಂಕು ಪ್ರಕರಣಗಳ ಸಂಖ್ಯೆ 27,000 (26,567)ಕ್ಕಿಂತ ಕೆಳಗೆ ಇಳಿಕೆಯಾಗಿದ್ದು, 5 ತಿಂಗಳ ನಂತರ ಇದೇ ಮೊದಲ ಬಾರಿಗೆ ಇಷ್ಟು ಪ್ರಮಾಣದಲ್ಲಿ ಇಳಿಕೆ ಕಂಡುಬಂದಿದೆ. 2020ರ ಜುಲೈ 10ರಂದು 26,506 ಹೊಸ ಪ್ರಕರಣಗಳು ಪತ್ತೆಯಾಗಿದ್ದವು.

ಪ್ರತಿ ದಿನ ಗರಿಷ್ಠ ಸಂಖ್ಯೆಯ ಕೋವಿಡ್ ಸೋಂಕಿತರು ಗುಣಮುಖರಾಗುತ್ತಿರುವುದರಿಂದ ಸೋಂಕಿತರ ಸಾವಿನ ಪ್ರಮಾಣ ಕ್ರಮೇಣ ಇಳಿಕೆಯಾಗುತ್ತಿವೆ ಮತ್ತು ಭಾರತದಲ್ಲಿ ಸಕ್ರಿಯ ಪ್ರಕರಣಗಳ ಇಳಿಕೆ ಪ್ರವೃತ್ತಿ ಸ್ಥಿರವಾಗಿ ಮುಂದುವರಿದಿದೆ.

ಸಕ್ರಿಯ ಪ್ರಕರಣಗಳ ಸಂಖ್ಯೆ ಗಣನೀಯ ಇಳಿಕೆಯಾಗಿ 3.83 ಲಕ್ಷ

ದೇಶದಲ್ಲಿ ಒಟ್ಟು ಸೋಂಕಿತರ ಸಕ್ರಿಯ ಸಂಖ್ಯೆ 3,83,866 ಇದೆ. ಅಂದರೆ ಒಟ್ಟು ಪ್ರಕರಣಗಳಲ್ಲಿ ಆ ಪ್ರಮಾಣ(ಶೇ.3.96) ರಷ್ಟಿದೆ.

ಕಳೆದ 24 ಗಂಟೆಗಳಲ್ಲಿ ಹೊಸದಾಗಿ 39,045 ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು ಕಳೆದ 24 ಗಂಟೆಗಳಲ್ಲಿ ಒಟ್ಟು ಸಕ್ರಿಯ ಪ್ರಕರಣಗಳಲ್ಲಿ ನಿವ್ವಳವಾಗಿ 12,863 ಪ್ರಕರಣ ಇಳಿಕೆಯಾಗಿವೆ.

ಪ್ರತಿ ದಿನ ಹೊಸ ಪ್ರಕರಣಗಳಿಗಿಂತ ಗುಣಮುಖವಾಗುತ್ತಿರುವ ಪ್ರಕರಣಗಳೇ ಅಧಿಕವಾಗಿ ಮುಂದುವರಿದಿದ್ದು, ಇಂದು ಚೇತರಿಕೆ ಪ್ರಮಾಣ ಶೇ.94.59ಕ್ಕೆ ಏರಿಕೆಯಾಗಿದೆ. ಇದರಿಂದಾಗಿ ಒಟ್ಟು ಗುಣಮುಖರಾದವರ ಸಂಖ್ಯೆ ಇಂದು 91,78,946 ತಲುಪಿದೆ.

ಹೊಸದಾಗಿ ಗುಣಮುಖವಾಗಿರುವ ಪ್ರಕರಣಗಳಲ್ಲಿ ಶೇ.76.31 ಪ್ರಕರಣಗಳು ಹತ್ತು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸಂಬಂಧಿಸಿದವು.

ಮಹಾರಾಷ್ಟ್ರದಲ್ಲಿ ಒಂದೇ ದಿನ ಗರಿಷ್ಠ ಸಂಖ್ಯೆಯ 7,345 ಸೋಂಕಿತರು ಗುಣಮುಖರಾಗಿದ್ದಾರೆ. ಅಂತೆಯೇ ಕೇರಳದಲ್ಲಿ 4,705 ಮತ್ತು ದೆಹಲಿಯಲ್ಲಿ 3,818 ಸೋಂಕಿತರು ಕಳೆದ 24 ಗಂಟೆಗಳಲ್ಲಿ ಗುಣಮುಖರಾಗಿದ್ದಾರೆ.
(ಪಿಐಬಿ ವರದಿ )

- Advertisement -
- Advertisement -

Latest News

25 ಸಾವಿರ ಮತಗಳಿಂದ ಬಿಜೆಪಿ ಗೆಲ್ಲುತ್ತದೆ – ಜೊಲ್ಲೆ ವಿಶ್ವಾಸ

ಸಿಂದಗಿ: ಎರಡು ಬಾರಿ ಚುನಾಯಿತರಾದ ರಮೇಶ ಭೂಸನೂರ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲಿ ಭಾಜಪ ಅಧಿಕಾರದಲ್ಲಿದೆ ಕ್ಷೇತ್ರದ ಅಭಿವೃದ್ಧಿ ದಿಸೆಯಲ್ಲಿ...
- Advertisement -

More Articles Like This

- Advertisement -
close
error: Content is protected !!