ಕೋವಿಡ್ ಲಸಿಕೆ ಹಾಕಿಸಿಕೊಂಡ ಈರಣ್ಣ ಕಡಾಡಿ

Must Read

ಅಧ್ಯಾತ್ಮ ವಿದ್ಯೆ ಮಕ್ಕಳ ಮೂಲ ಶಿಕ್ಷಣವಾಗಬೇಕು

ಭೂಮಿಯ ಮೇಲಿರುವ ಮಾಯೆ ಎಲ್ಲರಿಗೂ ಮಂಕು ಮಾಡುತ್ತದೆ ಎನ್ನುವುದಕ್ಕೆ ನಮ್ಮ ಅನುಭವವೇ ಸಾಕ್ಷಿ. ಇಲ್ಲಿ ಯಾರೋ ಹಿಂದೆ ಅನುಭವಿಸಿ, ಹೇಳಿ, ಬರೆದಿಟ್ಟ ಸತ್ಯವನ್ನು ನಾವು ಬಹಳ...

ಅರುಣ ಕಿರಣ ಪ್ರತಿದಿನ

. . .🕉. . . . || ಶ್ರೀ ಗುರುಭ್ಯೋ ನಮಃ || || ಓ೦ ಗ೦ ಗಣಪತಯೇ ನಮಃ || 🙏ಶುಭೋದಯ🙏 16: 06: 2021 ಬುಧವಾರ ಕಲಿಯುಗಾಬ್ದ...

ಟೈಮ್ಸ್ ಆಫ್ ಕರ್ನಾಟಕ ವರದಿಗೆ ಸ್ಪಂದನೆ ; ಅಕ್ರಮ ಮರಳು ದಂಧೆಯ ಬಗ್ಗೆ ಸ್ಪಷ್ಟೀಕರಣ ನೀಡಿದ ಎಸಿ

ಸಿಂದಗಿ: "ಅಕ್ರಮ ಮರಳು ಸಾಗಾಟ ನಿರಂತರ ; ಜಾಣ ಕುರುಡರಾದ ಅಧಿಕಾರಿಗಳು " ಎಂಬ ಶೀರ್ಷಿಕೆಯಲ್ಲಿ ನಮ್ಮ ಟೈಮ್ಸ ಆಫ್ ಕರ್ನಾಟಕ ವೆಬ್ ಪತ್ರಿಕೆಯಲ್ಲಿ ದಿ....

ಮೂಡಲಗಿ: ದೇಶದಲ್ಲಿ ಕರೋನಾ ಎರಡನೇ ಅಲೆ ತೀವ್ರತೆ ಹೆಚ್ಚುತ್ತಿರುವ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರ ಮೂರನೇ ಹಂತದ ಕೋವಿಡ್-19 ಲಸಿಕೆ ಅಭಿಯಾನಕ್ಕೆ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಲಾಗುತ್ತದೆ ಎಂದು ರಾಜ್ಯಸಭೆ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಹೇಳಿದರು.

ಗುರುವಾರ (ಏ.1) ರಂದು ಬೆಳಗಾವಿ ವಂಟಮೂರಿ ಕಾಲನಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೋವಿಡ್-19 ಲಸಿಕೆಯ ಮೊದಲನೇ ಹಂತದ ಡೋಸ್ ಪಡೆದು ಮಾತನಾಡಿದ ಈರಣ್ಣ ಕಡಾಡಿ ಅವರು, 650 ಖಾಸಗಿ ಮತ್ತು 4850 ಸರ್ಕಾರಿ ಸೇರಿದಂತೆ ರಾಜ್ಯಾದ್ಯಂತ ಒಟ್ಟು 5,500 ಕೇಂದ್ರಗಳಲ್ಲಿ ಲಸಿಕೆ ನೀಡಲಾಗುತ್ತಿದೆ ಎಂದರು.

ಜನವರಿ 16 ರಂದು ಆರಂಭವಾದ ಒಂದನೇ ಹಂತದಲ್ಲಿ ಆರೋಗ್ಯ ರಕ್ಷಣೆ ಸಿಬ್ಬಂದಿ ಮತ್ತು ಮೂಂಚೂಣಿ ಕಾರ್ಯಕರ್ತರಿಗೆ ಲಸಿಕೆ ಹಾಕಲಾಗಿತ್ತು. 2ನೇ ಹಂತದಲ್ಲಿ 60 ವರ್ಷ ಮೇಲ್ಪಟ್ಟವರು ಹಾಗೂ ಬೇರೆ ಆರೋಗ್ಯ ಸಮಸ್ಯೆಗಳಿರುವ 45 ವರ್ಷ ಮೇಲ್ಪಟ್ಟ ಎಲ್ಲರೂ ಲಸಿಕೆ ಪಡೆಯಲು ಅರ್ಹರಾಗಿದ್ದರು.

- Advertisement -

ಈಗ ಯಾವುದೇ ನಿರ್ದಿಷ್ಟ ಇತರ ರೋಗಗಳು ಇಲ್ಲದಿದ್ದರೂ 45 ವರ್ಷ ಮೇಲ್ಪಟ್ಟ ಎಲ್ಲರೂ ಮೂರನೇ ಹಂತದಲ್ಲಿ ಲಸಿಕೆ ಪಡೆಯಬೇಕೆಂದು ಸಾರ್ವಜನಿಕರಿಗೆ ಮನವಿ ಮಾಡಿದ ಅವರು ಸರ್ವ ನಾಗರಿಕರು ಆದಷ್ಟು ಬೇಗ ನೋಂದಣಿ ಮಾಡಿಕೊಂಡು, ಕೋವಿಡ್-19 ಲಸಿಕೆ ಪಡೆಯಬೇಕೆಂದರು.

ಒಗ್ಗಟ್ಟಾಗಿ ಕೊರೋನಾ ವಿರುದ್ಧ ಹೋರಾಡೋಣ. ಭಾರತವನ್ನು ಕೊರೊನಾ ಮುಕ್ತವಾಗಿಸಲು ನಾವೆಲ್ಲರೂ ಪಣ ತೊಡೋಣ ಎಂದರು. ಬಳಿಕ ಕೊರೊನಾ ವಾರಿಯರ್ಸ ಗಳಾಗಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ವೈದ್ಯರು, ದಾದಿಯರು, ಆಶಾ, ಅಂಗನವಾಡಿ ಕಾರ್ಯಕರ್ತರು ಹಾಗೂ ಸಿಬ್ಬಂದಿ ವರ್ಗಕ್ಕೆ ಧನ್ಯವಾದ ಸಲ್ಲಿಸಿದರು. ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ. ಜಯವಂತ ಧನ್ವಂತರಿ, ಸಿಬ್ಬಂದಿಗಳು ಉಪಸ್ಥಿತರಿದ್ದರು.

- Advertisement -
- Advertisement -

Latest News

ಅಧ್ಯಾತ್ಮ ವಿದ್ಯೆ ಮಕ್ಕಳ ಮೂಲ ಶಿಕ್ಷಣವಾಗಬೇಕು

ಭೂಮಿಯ ಮೇಲಿರುವ ಮಾಯೆ ಎಲ್ಲರಿಗೂ ಮಂಕು ಮಾಡುತ್ತದೆ ಎನ್ನುವುದಕ್ಕೆ ನಮ್ಮ ಅನುಭವವೇ ಸಾಕ್ಷಿ. ಇಲ್ಲಿ ಯಾರೋ ಹಿಂದೆ ಅನುಭವಿಸಿ, ಹೇಳಿ, ಬರೆದಿಟ್ಟ ಸತ್ಯವನ್ನು ನಾವು ಬಹಳ...
- Advertisement -

More Articles Like This

- Advertisement -
close
error: Content is protected !!