ಬೀದರ – ತಾಲೂಕು ಪಂಚಾಯತ್ ಸಭೆಯಲ್ಲಿ ಮಾಜಿ ಸಚಿವ ರಾಜಶೇಖರ್ ಪಾಟೀಲ್ ಅಧಿಕಾರಿಗಳಿಗೆ ಖಡಕ್ಕಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.
ಬೀದರ ಜಿಲ್ಲೆಯ ಹುಮನಾಬಾದ ತಾಲೂಕು ಪಂಚಾಯತ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಮಾಜಿ ಸಚಿವ ರಾಜಶೇಖರ್ ಪಾಟೀಲ್ ,ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಪಂಚಾಯತ ಅಭಿವೃದ್ಧಿ ಅಧಿಕಾರಿಗಳ ಸಭೆಯನ್ನು ತಾಲೂಕಾ ಪಂಚಾಯತ ಸಭಾಂಗಣದಲ್ಲಿ ನಡೆಸಿದರು.
ಅಧಿಕಾರಿಗಳು ಸಭೆಗೆ ಸರಿಯಾದ ಮಾಹಿತಿ ನೀಡದ ಕಾರಣ ತರಾಟೆಗೆ ತೆಗೆದುಕೊಂಡರು. ಗ್ರಾಮ ಪಂಚಾಯತ ಮಟ್ಟದ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರು, ರಸ್ತೆ, ಚರಂಡಿ ಹಾಗೂ ವಿದ್ಯುತ್ ಮತ್ತು ಮೂಲ ಸೌಕರ್ಯಗಳು ಸ್ಥಳೀಯ ಜನರಿಗೆ ಯಾವುದೇ ರೀತಿಯ ಸಮಸ್ಯೆಗಳಾಗದಂತೆ ನೂತನವಾಗಿ ಆಯ್ಕೆಯಾದ ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ ಹಾಗೂ ಪಂಚಾಯತ ಅಭಿವೃದ್ಧಿ ಅಧಿಕಾರಿಗಳಿಗೆ ಸಭೆಯಲ್ಲಿ ಪಕ್ಷ ಭೇದ ಮರೆತು ಒಳ್ಳೆಯ ರೀತಿಯಲ್ಲಿ ಕೆಲಸ ಮಾಡಬೇಕು ಎಂದು ತಾಕೀತು ಮಾಡಿದರು. ನಮ್ಮ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಒದಗಿಸುವುದು ನನ್ನ ಜವಾಬ್ದಾರಿ ಎಂದರು ಅಲ್ಲದೆ ಕರೋನಾದಿಂದ ಸಂಕಷ್ಟಕ್ಕೆ ಸಿಲುಕಿರುವ ಬಡ,ಕೂಲಿ ಕಾರ್ಮಿಕರಿಗೆ ಅನುಕೂಲವಾಗುವಂತೆ ಉದ್ಯೋಗ ಖಾತ್ರಿ ಯೋಜನೆ ಸಮರ್ಪಕವಾಗಿ ಅನುಷ್ಠಾನ ಮಾಡಿಕೊಂಡು ಜನರಿಗೆ ಉದ್ಯೋಗ ನೀಡುವಂತೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಬಳಿಕ ಹಳ್ಳಿಖೇಡ (ಕೆ) ಗ್ರಾಮದಲ್ಲಿನ ಕೆರೆಗೆ ಭೇಟಿ ನೀಡಿ, ಕೆರೆಯ ಅಭಿವೃದ್ಧಿ ಮತ್ತು ಸುಂದರೀಕರಣಕ್ಕೆ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಕಾಯ್ದೆಯಡಿ (ಮನರೇಗಾ) ಯೋಜನೆ ಅಡಿಯಲ್ಲಿ 1 ಕೋಟಿ ರೂಪಾಯಿ ಗಿಂತ ಹೆಚ್ಚು ಅನುದಾನದಲ್ಲಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು.
ಇದು ರಾಜ್ಯದಲ್ಲೆ ಪ್ರಪ್ರಥಮವಾಗಿ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಕಾಯ್ದೆಯಡಿ (ನರೇಗಾ) ಯೋಜನೆ ಅಡಿಯಲ್ಲಿ ಈ ಕಾಮಗಾರಿ ಕೈಗೊಂಡಂತಾಗಿದೆ.
ವರದಿ: ನಂದಕುಮಾರ ಕರಂಜೆ
Times of ಕರ್ನಾಟಕ, ಬೀದರ