ಧರ್ಮಟ್ಟಿ ಪಿಕೆಪಿಎಸ್ ಪತ್ತು 2 ಕೋಟಿ ರೂ.ಗಳಿಂದ 3.50 ಕೋಟಿ ರೂ.ಗಳಿಗೆ ಏರಿಕೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

Must Read

ಜಿಲ್ಲಾ ಲೇಖಕಿಯರ ಸಂಘದ ವತಿಯಿಂದ ದತ್ತಿನಿಧಿ ಕಾರ್ಯಕ್ರಮ

ಇದೇ ದಿ. 9 ರಂದು ಗುರುವಾರ ಮಧ್ಯಾಹ್ನ 3 ಗಂಟೆಗೆ ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಬೆಳಗಾವಿ ಜಿಲ್ಲಾ ಲೇಖಕಿಯರ ವತಿಯಿಂದ ಶ್ರೀಮತಿ ಸುಮಿತ್ರಾ ಚರಂತಿಮಠ,ದಿ....

ಕೇಂದ್ರ ಸಚಿವ ಭಗವಂತ ಖೂಬಾ ಗುಪ್ತ ಸಭೆ: ಸಭೆಯ ಕೇಂದ್ರ ಬಿಂದು ನಾಯಕ ಯಾರು?

ಬೀದರ - ಗಡಿ ಜಿಲ್ಲೆ ಬೀದರ್ ನಲ್ಲಿ ವಿಧಾನ ಪರಿಷತ್ ಚುನಾವಣೆ ಕಾವು ದಿನೇ ದಿಏ ರಂಗೇರುತ್ತಿದೆ ಅಲ್ಲದೆ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಇಂದು ಕೇಂದ್ರ ಸಚಿವ...

ಸ್ಮಾರ್ಟ್ ಸಿಟಿ ಯೋಜನೆಗೆ ಕೇಂದ್ರದಿಂದ ಹಣ – ಕಡಾಡಿ ಮಾಹಿತಿ

ಮೂಡಲಗಿ: ಬೆಳಗಾವಿ ಸ್ಮಾಟ್ ಸಿಟಿ ಮಿಷನ್ ಯೋಜನೆಗೆ ನಗರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಕೇಂದ್ರ ಸರ್ಕಾರ 392 ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿದ್ದು, ಈಗಾಗಲೇ 294...

ಮೂಡಲಗಿ : ಧರ್ಮಟ್ಟಿ ಪಿಕೆಪಿಎಸ್‍ನಲ್ಲಿ ಈಗಾಗಲೇ 2 ಕೋಟಿ ರೂ.ಗಳ ಪತ್ತನ್ನು 3.50 ಕೋಟಿ ರೂ.ಗಳಿಗೆ ಹೆಚ್ಚಿಸಿ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲವನ್ನು ನೀಡಲಾಗುವುದು ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.

ತಾಲೂಕಿನ ಧರ್ಮಟ್ಟಿ ಗ್ರಾಮದ ಲಕ್ಷ್ಮೀ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದ ಬಳಿಕ ಸಾರ್ವಜನಿಕರನ್ನುದ್ಧೇಶಿಸಿ ಮಾತನಾಡಿದ ಅವರು, ರೈತರಿಗೆ ಪಿಕೆಪಿಎಸ್ ಗಳು ಜೀವನಾಡಿಯಾಗಿವೆ ಎಂದು ಹೇಳಿದರು.
ಧರ್ಮಟ್ಟಿ ಪಿಕೆಪಿಎಸ್‍ನಿಂದ ರೈತರಿಗೆ ಅನುಕೂಲವಾಗಲು ಸಾಲವನ್ನು ನೀಡಲು ಕ್ರಮ ಕೈಗೊಳ್ಳಲು ಆಡಳಿತ ಮಂಡಳಿಗೆ ಸೂಚಿಸಿದ್ದೇನೆ.

ಈಗಿರುವ ಪತ್ತಿನ ಜೊತೆಗೆ ಹೆಚ್ಚುವರಿಯಾಗಿ 1.50 ಕೋಟಿ ರೂ.ಗಳ ಪತ್ತನ್ನು ಬಿಡಿಸಿಸಿ ಬ್ಯಾಂಕ್‍ನಿಂದ ಸೊಸಾಯಿಟಿಗೆ ನೀಡಿ ರೈತ ಸಮುದಾಯಕ್ಕೆ ಶೂನ್ಯ ಬಡ್ಡಿದರದಲ್ಲಿ ಸಾಲವನ್ನು ನೀಡಲು ಸೂಚಿಸಲಾಗಿದೆ. ಖಾಸಗಿ ಬ್ಯಾಂಕುಗಳು ರೈತರಿಗೆ ಅಧಿಕ ಬಡ್ಡಿದರದಲ್ಲಿ ಸಾಲವನ್ನು ನೀಡುತ್ತಿವೆ. ಆದರೆ ಪಿಕೆಪಿಎಸ್ ಮಾತ್ರ ರೈತರಿಗೆ ಯಾವುದೇ ಬಡ್ಡಿ ಹಣ ಪಡೆಯದೇ ಸಾಲ ನೀಡುತ್ತಿವೆ. ಇದರ ಸದ್ಬಳಕೆಯನ್ನು ರೈತ ವೃಂದ ಪಡೆದುಕೊಳ್ಳುವಂತೆ ತಿಳಿಸಿದರು.

ಗುರ್ಲಾಪೂರ ಕ್ರಾಸದಿಂದ ಮೂಡಲಗಿವರೆಗೆ ನೀರಾವರಿ ಇಲಾಖೆಯಿಂದ ರಸ್ತೆ ಸುಧಾರಣೆಗೆ 4.90 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಟೆಂಡರ್ ಪ್ರಕ್ರಿಯೆ ಚಾಲನೆಯಲ್ಲಿದೆ. ಮೂಡಲಗಿಯಿಂದ ಮಸಗುಪ್ಪಿವರೆಗೆ ಪಿಎಂಜಿಎಸ್‍ವಾಯ್ ಯೋಜನೆಯಡಿ 10 ಕಿ.ಮೀ. ರಸ್ತೆ ಕಾಮಗಾರಿಗೆ 8.86 ಕೋಟಿ ರೂ. ಬಿಡುಗಡೆಯಾಗಿದ್ದು, ಇದೂ ಸಹ ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಹೇಳಿದರು.
ಗ್ರಾಮ ಪಂಚಾಯತಿ ಚುನಾವಣೆ ಬಳಿಕ ತಮ್ಮಲ್ಲಿಯ ಸಣ್ಣಪುಟ್ಟ ಮನಸ್ತಾಪಗಳನ್ನು ಮರೆತು ಗ್ರಾಮದ ಅಭಿವೃದ್ಧಿಗೆ ಒಗ್ಗಟ್ಟಾಗಿ ಶ್ರಮಿಸುವಂತೆ ಅವರು ತಿಳಿಸಿದರು.

ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರನ್ನು ಗ್ರಾಮಸ್ಥರು ಸತ್ಕರಿಸಿದರು.

ಈ ಸಂದರ್ಭದಲ್ಲಿ ಮುಖಂಡ ಬಿ.ಬಿ. ಪೂಜೇರಿ, ಪಿಕೆಪಿಎಸ್ ಮಾಜಿ ಅಧ್ಯಕ್ಷ ಪರಶುರಾಮ ಸನದಿ, ಗ್ರಾಪಂ ಅಧ್ಯಕ್ಷೆ ಮಕ್ತುಮಾ ಜಾತಗಾರ, ಉಪಾಧ್ಯಕ್ಷ ಕೆಂಚಪ್ಪ ತಿಗಡಿ, ಶ್ರೀಕಾಂತ ಮುತಾಲಿಕದೇಸಾಯಿ, ಪಿಕೆಪಿಎಸ್ ಅಧ್ಯಕ್ಷ ಶಿದ್ಲಿಂಗಪ್ಪ ಕೊರಕಪೂಜೇರಿ, ಲಕ್ಷ್ಮಣ ತೆಳಗಡೆ, ಲಕ್ಕಪ್ಪ ತೆಳಗಡೆ, ಲಗಮನ್ನಾ ಕುಟ್ರಿ, ಮಹಾದೇವ ಬಡ್ಡಿ, ಸದಾಶಿವ ಹಳ್ಳೂರ, ಬಸಪ್ಪ ಮನ್ನಿಕೇರಿ, ಗ್ರಾಪಂ ಸದಸ್ಯರು, ಪಿಕೆಪಿಎಸ್ ಸದಸ್ಯರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

- Advertisement -
- Advertisement -

Latest News

ಜಿಲ್ಲಾ ಲೇಖಕಿಯರ ಸಂಘದ ವತಿಯಿಂದ ದತ್ತಿನಿಧಿ ಕಾರ್ಯಕ್ರಮ

ಇದೇ ದಿ. 9 ರಂದು ಗುರುವಾರ ಮಧ್ಯಾಹ್ನ 3 ಗಂಟೆಗೆ ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಬೆಳಗಾವಿ ಜಿಲ್ಲಾ ಲೇಖಕಿಯರ ವತಿಯಿಂದ ಶ್ರೀಮತಿ ಸುಮಿತ್ರಾ ಚರಂತಿಮಠ,ದಿ....
- Advertisement -

More Articles Like This

- Advertisement -
close
error: Content is protected !!