ನದಾಫ, ಪಿಂಜಾರ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು ಎಂದು ಒತ್ತಾಯ

Must Read

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...

ಗಾಣಿಗ ಸಮಾಜ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಸವದತ್ತಿ: ತಾಲೂಕಿನ ಗಾಣಿಗ ಸಮಾಜದ ಎಸ್..ಎಸ್.ಎಲ್.ಸಿ.ಹಾಗೂ ಪಿ.ಯು.ಸಿ .ಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುವುದು ಎಂದು ಸವದತ್ತಿ ತಾಲೂಕಿನ ಗಾಣಿಗ ಸಮಾಜದ ತಾಲೂಕು ಘಟಕದ ಪ್ರಧಾನ...

ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಸಮಾರಂಭ

ಬೆಳಗಾವಿ ಶಿವಬಸವನಗರದ ಶ್ರೀ ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ದಿ. ೨೫ ರಿಂದ ೨೯ ಅಕ್ಟೋಬರ್ ೨೦೨೧ ರವರೆಗೆ ಐದು ದಿನಗಳ...

ಮೂಡಲಗಿ ತಹಶೀಲ್ದಾರ್ ಡಿ.ಜಿ. ಮಹಾತ್ ಅವರಿಗೆ ಮನವಿ

ಮೂಡಲಗಿ: ಕರ್ನಾಟಕ ರಾಜ್ಯದಲ್ಲಿ ನದಾಫ್, ಪಿಂಜಾರ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಬೇಕು ಎಂದು ಮೂಡಲಗಿ ತಾಲ್ಲೂಕು ನದಾಫ, ಪಿಂಜಾರ ಸಂಘದ ಪದಾಧಿಕಾರಿಗಳು ಮಂಗಳವಾರ ತಹಶೀಲ್ದಾರ್ ಅವರಿಗೆ ಮನವಿ ಅರ್ಪಿಸಿದರು.

ಕರ್ನಾಟಕ ರಾಜ್ಯದಲ್ಲಿರುವ ನದಾಫ, ಪಿಂಜಾರ ಸಮಾಜದ ಜನರು ಆರ್ಥಿಕ, ಸಾಮಾಜಿಕವಾಗಿ ಅತ್ಯಂತ ಹಿಂದುಳಿದವರಾಗಿದ್ದು, ಕೇಂದ್ರ ಸರ್ಕಾರವು ಒಬಿಸಿ ಪಟ್ಟಿಯಲ್ಲಿ ಸೇರ್ಪಡೆಗೊಳಿಸಿದೆ. ಹಿಂದುಳಿದ ಕಾಯ್ದೆಯಲ್ಲಿ ಸಹ ನದಾಫ ಸಮಾಜವು ಅತ್ಯಂತ ಹಿಂದುಳಿದಿರುವ ಬಗ್ಗೆ ಸ್ಪಷ್ಟವಾಗಿ ಗುರುತಿಸಿದ್ದಾರೆ.

- Advertisement -

ಕರ್ನಾಟಕ ಸರ್ಕಾರವು ಸಮಾಜದ ಅಭಿವೃದ್ಧಿಗೆ ನಿಗಮವನ್ನು ಸ್ಥಾಪಿಸಬೇಕು ಎಂದು ಮನವಿಯಲ್ಲಿ ವಿನಂತಿಸಿಕೊಂಡಿದ್ದಾರೆ.
ನದಾಫ, ಪಿಂಜಾರ ಜನರು ಗಾದಿ, ಗುಡಾರಗಳನ್ನು ತಹಾರಿಸುವ ಅಲೆಮಾರಿಗಳಾಗಿ ಬದುಕು ಸಾಗಿಸುತ್ತಿದ್ದಾರೆ.

ಸಮಾಜದ ಅಭಿವೃದ್ಧಿಗಾಗಿ ಪ್ರತ್ಯೇಕ ನಿಗಮ ಸ್ಥಾಪನೆಗಾಗಿ ಬಹು ದಿನಗಳ ಬೇಡಿಕೆಯಾಗಿದೆ. ಈ ಹಿಂದೆ ನಿಗಮ ಸ್ಥಾಪನೆಗಾಗಿ ಸಮಾಜದಿಂದ ಮನವಿಯನ್ನು ಸರ್ಕಾರಕ್ಕೆ ನೀಡಲಾಗಿದೆ ಎಂದು ತಾಲ್ಲೂಕಾ ಅಧ್ಯಕ್ಷ ಅನ್ವರ ನದಾಫ ಹೇಳಿದರು.

ನದಾಫ, ಪಿಂಜಾರ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ಬರೆದ ಮನವಿಯನ್ನು ನೀಡಿದರು. ತಹಶೀಲ್ದಾರ್ ಡಿ.ಜಿ. ಮಹಾತ್ ಅವರು ಮನವಿ ಸ್ವೀಕರಿಸಿ ಸರ್ಕಾರಕ್ಕೆ ಕಳಿಸಿಕೊಡುವುದಾಗಿ ತಿಳಿಸಿದರು.

ತಾಲ್ಲೂಕು ಸಂಘದ ಅಧ್ಯಕ್ಷ ಅನ್ವರ ನದಾಫ, ಮೀರಾಸಾಬ ನದಾಫ, ಮಲಿಕಜಾನ ನದಾಫ, ಇಸಾಕಅಹ್ಮದ ನದಾಫ, ದಸ್ತಗೀರ ನದಾಫ, ಮೀರಾಸಾಬ ನದಾಫ, ರಫೀಕ ನದಾಫ, ಅಪ್ಪಾಸಾಬ ನದಾಫ, ನೂರಸಾಬ ನದಾಫ, ಮಹ್ಮದ ನದಾಫ, ಮುಬಾರಕ ಪಿಂಜಾರ, ಶಬ್ಬೀರ ನದಾಫ, ಬಾಬುಸಾಬ ನದಾಫ, ಬಾಪು ನದಾಫ ಭಾಗವಹಿಸಿದ್ದರು.

- Advertisement -
- Advertisement -

Latest News

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...
- Advertisement -

More Articles Like This

- Advertisement -
close
error: Content is protected !!