ನ್ಯಾಯಾಲಯಗಳಲ್ಲಿ ಕನ್ನಡ ಬಳಕೆಗೆ ಹಕ್ಕೊತ್ತಾಯ

Must Read

ಜಿಲ್ಲಾ ಲೇಖಕಿಯರ ಸಂಘದ ವತಿಯಿಂದ ದತ್ತಿನಿಧಿ ಕಾರ್ಯಕ್ರಮ

ಇದೇ ದಿ. 9 ರಂದು ಗುರುವಾರ ಮಧ್ಯಾಹ್ನ 3 ಗಂಟೆಗೆ ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಬೆಳಗಾವಿ ಜಿಲ್ಲಾ ಲೇಖಕಿಯರ ವತಿಯಿಂದ ಶ್ರೀಮತಿ ಸುಮಿತ್ರಾ ಚರಂತಿಮಠ,ದಿ....

ಕೇಂದ್ರ ಸಚಿವ ಭಗವಂತ ಖೂಬಾ ಗುಪ್ತ ಸಭೆ: ಸಭೆಯ ಕೇಂದ್ರ ಬಿಂದು ನಾಯಕ ಯಾರು?

ಬೀದರ - ಗಡಿ ಜಿಲ್ಲೆ ಬೀದರ್ ನಲ್ಲಿ ವಿಧಾನ ಪರಿಷತ್ ಚುನಾವಣೆ ಕಾವು ದಿನೇ ದಿಏ ರಂಗೇರುತ್ತಿದೆ ಅಲ್ಲದೆ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಇಂದು ಕೇಂದ್ರ ಸಚಿವ...

ಸ್ಮಾರ್ಟ್ ಸಿಟಿ ಯೋಜನೆಗೆ ಕೇಂದ್ರದಿಂದ ಹಣ – ಕಡಾಡಿ ಮಾಹಿತಿ

ಮೂಡಲಗಿ: ಬೆಳಗಾವಿ ಸ್ಮಾಟ್ ಸಿಟಿ ಮಿಷನ್ ಯೋಜನೆಗೆ ನಗರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಕೇಂದ್ರ ಸರ್ಕಾರ 392 ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿದ್ದು, ಈಗಾಗಲೇ 294...

ಮೈಸೂರು – ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಕನ್ನಡ ಕಾಯಕ ವರ್ಷಾಚರಣೆ ಹೆಸರಿನಲ್ಲಿ ಒಂದು ವರ್ಷದ ಯೋಜನೆಯನ್ನು  ಹಮ್ಮಿಕೊಂಡಿದೆ. ಇದರ ಅಂಗವಾಗಿ ನ್ಯಾಯಾಲಯಗಳಲ್ಲಿ ಕನ್ನಡ ಬಳಕೆಗೆ ಹಕ್ಕೊತ್ತಾಯ ಮಂಡಿಸಲಾಯಿತು.

ಭಾರತ ಸಂವಿಧಾನ ಸಮಿತಿಯ ಸಾಂವಿಧಾನಿಕ ಸಲಹೆಗಾರರಾಗಿದ್ದ ಮಂಗಳೂರಿನ ಸರ್‌ ಬೆನೆಗಲ್‌ ನರಸಿಂಗರಾವ್‌ ಅವರ ಜನ್ಮದಿನದ ಪ್ರಯುಕ್ತ ದಿ:೨೬ ರಂದು ಕನ್ನಡ ಕಾಯಕ ವರ್ಷ ೨೦೨೦-೨೧ ಅಭಿಯಾನಗಳ ಸರಣಿ ‘ ಬಾರಿಸು ಕನ್ನಡ ಡಿಂಡಿಮವ ‘ ದ ನಾಲ್ಕನೇ ಅಭಿಯಾನ ಅಧೀನ ನ್ಯಾಯಾಲಯಗಳಲ್ಲಿ ಕನ್ನಡ ಬಳಕೆ ಅಭಿಯಾನ ವನ್ನು ನಡೆಸಲು ಜಿಲ್ಲೆಗಳ ನ್ಯಾಯಾಲಯ ಸಂಕೀರ್ಣಗಳಿಗೆ ಭೇಟಿ ನೀಡಿ ಅಲ್ಲಿನ ಅಧಿಕಾರಿಗಳಿಗೆ ಹಕ್ಕೊತ್ತಾಯ ವನ್ನು ಸಲ್ಲಿಸಿ,ನ್ಯಾಯಾಲಯದಲ್ಲಿ ಸಂಪೂರ್ಣ ಕನ್ನಡ ಅನುಷ್ಠಾನ ಮಾಡಲು ಹಾಗೂ ಕನ್ನಡದಲ್ಲಿ ನ್ಯಾಯಾಲಯದಲ್ಲಿ ನಡೆಸುವ ಹಕ್ಕೊತ್ತಾಯ ಹಮ್ಮಿಕೊಳ್ಳಲಾಗಿದ್ದು ಜಿಲ್ಲಾ ನ್ಯಾಯಾಧೀಶರಿಗೆ ಮತ್ತು ಮುಖ್ಯ ಆಡಳಿತ ಅಧಿಕಾರಿಗಳಿಗೆ ನೀಡಿ ನಂತರ ಮೈಸೂರು ವಕೀಲ ಸಂಘದ ಕಚೇರಿಗೆ ಭೇಟಿ ನೀಡಿ ಅಧ್ಯಕ್ಷರಿಗೆ ಹಕ್ಕೊತ್ತಾಯ ನೀಡಲಾಯಿತು

ಚರ್ಚಿಸಿದ ವಿಷಯಗಳು

  1. ವಕೀಲರ ಸಂಘದಲ್ಲಿ ಪ್ರತೀ ವರ್ಷ ಕನ್ನಡ ರಾಜ್ಯೋತ್ಸವದಲ್ಲಿ ಕನ್ನಡದಲ್ಲಿ ತೀರ್ಪು ನೀಡಿದ ನ್ಯಾಯಾಧೀಶರಿಗೆ ಹಾಗೂ ಕನ್ನಡದಲ್ಲಿ ವಾದ ಮಂಡಿಸಿದ ವಕೀಲರಿಗೆ ಅಭಿನಂದನಾ ಸನ್ಮಾನ ಮಾಡಲಾಗುತ್ತದೆ ಎಂದು ವಕೀಲರ ಸಂಘದವರು ತಿಳಿಸಿದರು
  2. ನ್ಯಾಯಾಲಯಕ್ಕೆ ಬರುವ ಕಕ್ಷಿದಾರರಿಗೆ ನ್ಯಾಯಾಲಯದ ಒಳಾಂಗಣದಲ್ಲಿ ೨೦೦ ಅಡಿಯ ಜಾಗದಲ್ಲಿ ಗ್ರಂಥಾಲಯ ತೆರೆಯುವ ಯೋಜನೆ ಇದ್ದು ಕಾಫಿ ವಿತ್ ರೀಡಿಂಗ್ ಎಂಬ ಯೋಜನೆಯನ್ನು ಅನುಷ್ಠಾನ ಮಾಡುತ್ತಿದ್ದು ಅದರಲ್ಲಿ ಕನ್ನಡದ ಆಡಳಿತದ ಪುಸ್ತಕಗಳು ಹಾಗೂ ಕನ್ನಡ ಸಾಹಿತ್ಯದ ಪುಸ್ತಕಗಳು ಮತ್ತು ದಿನಪತ್ರಿಕೆಗಳನ್ನು ಓದಲು ಮುಂದಿನ ದಿನಗಳಲ್ಲಿ ಅವಕಾಶ ಮಾಡುವ ಉದ್ದೇಶವನ್ನು ವಕೀಲರ ಸಂಘದ ಅಧ್ಯಕ್ಷರು ತಿಳಿಸಿದರು.

ಈ ಸಂಧರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷರಾದ  ಆನಂದ್ ಕುಮಾರ್.ಎಸ್,ವಕೀಲರ ಸಂಘದ ಉಪಾಧ್ಯಕ್ಷರಾದ ಶಿವಣ್ಣೇ ಗೌಡ , ವಕೀಲರ ಸಂಘದ ಕಾರ್ಯದರ್ಶಿಯಾದ ಬಿ.ಶಿವಣ್ಣ  ವಕೀಲರಗೃಹನಿರ್ಮಾಣ ಸಂಘದ ಅಧ್ಯಕ್ಷರಾದ ಲೋಕೇಶ್ ಗೌಡ , ಹಿರಿಯ ಕಾರ್ಯಕಾರಿ ಸಮಿತಿಯ ಸದಸ್ಯರಾದ ಅನಿತಾ ಎ ಜೋಷಿ ಮತ್ತು ಮೈಸೂರು ಮಹಾನಗರ ಪಾಲಿಕೆ  ಕನ್ನಡ ಜಾಗೃತಿ ಸಮಿತಿಯ ಸದಸ್ಯರಾದ ಎ.ಎಸ್ ನಾಗರಾಜ್ , ಅರವಿಂದ್ ಶರ್ಮ , ಸಾತನೂರು ದೇವರಾಜ್ , ಡಾ.ಮುಳ್ಳೂರು ನಂಜುಂಡಸ್ವಾಮಿ , ಎನ್.ಜಿ ಗಿರೀಶ್ , ಸೌಗಂಧಿಕಾ ವಿ ಜೋಯಿಸ್ ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಡಾ. ಭೇರ್ಯ ರಾಮಕುಮಾರ್ ಉಪಸ್ಥಿತರಿದ್ದರು

- Advertisement -
- Advertisement -

Latest News

ಜಿಲ್ಲಾ ಲೇಖಕಿಯರ ಸಂಘದ ವತಿಯಿಂದ ದತ್ತಿನಿಧಿ ಕಾರ್ಯಕ್ರಮ

ಇದೇ ದಿ. 9 ರಂದು ಗುರುವಾರ ಮಧ್ಯಾಹ್ನ 3 ಗಂಟೆಗೆ ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಬೆಳಗಾವಿ ಜಿಲ್ಲಾ ಲೇಖಕಿಯರ ವತಿಯಿಂದ ಶ್ರೀಮತಿ ಸುಮಿತ್ರಾ ಚರಂತಿಮಠ,ದಿ....
- Advertisement -

More Articles Like This

- Advertisement -
close
error: Content is protected !!