ಪಕ್ಷಕ್ಕಾಗಿ ಯುವಕರು ಶ್ರಮಿಸಿ, ಸಂಘಟನೆಯತ್ತ ಒಲವು ತೋರಲಿ-ಡಾ: ಬಾಳಿಕಾಯಿ

Must Read

25 ಸಾವಿರ ಮತಗಳಿಂದ ಬಿಜೆಪಿ ಗೆಲ್ಲುತ್ತದೆ – ಜೊಲ್ಲೆ ವಿಶ್ವಾಸ

ಸಿಂದಗಿ: ಎರಡು ಬಾರಿ ಚುನಾಯಿತರಾದ ರಮೇಶ ಭೂಸನೂರ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲಿ ಭಾಜಪ ಅಧಿಕಾರದಲ್ಲಿದೆ ಕ್ಷೇತ್ರದ ಅಭಿವೃದ್ಧಿ ದಿಸೆಯಲ್ಲಿ...

“ಕಲಾಸೃಷ್ಟಿ” ಆರ್ಟ್ ವರ್ಕ್ ಗೆ ಚಾಲನೆ ನೀಡಿದ ಲೋಕಲ್ ಲೀಡರ್ ನಟ ಕಲ್ಮೇಶ್

ಬಾಗಲಕೋಟೆ: ಇದೆ ಅಕ್ಟೋಬರ್ ೧೫ ರಂದು, ಗದ್ದನಕೇರಿಯಲ್ಲಿ "ಕಲಾಸೃಷ್ಟಿ" ಆರ್ಟ್ ವರ್ಕ್ ಪ್ರಾರಂಭವಾಯಿತು. ಇದನ್ನು ನಟ ಕಲ್ಮೇಶ್, ಬಾಗಲಕೋಟೆಯ ನಟಿ ಅಂಕಿತಾ ನಾಯ್ಡು ಹಾಗೂ ಸಹ...

ಗೋವಿಂದಹಳ್ಳಿಯ ಪಂಚಲಿಂಗೇಶ್ವರ ; ಐದು ಶಿಖರಗಳ ಅಪರೂಪದ ಗುಡಿ

ಸ್ಥಳದ ಬಗ್ಗೆ ಕಿರು ಪರಿಚಯ: ಪ್ರಖ್ಯಾತ ಪ್ರವಾಸಿ ತಾಣವಾದ ಗೋವಿಂದನಹಳ್ಳಿಯ ಬ್ರಹ್ಮಲಿಂಗೇಶ್ವರ ಗುಡಿಯಿರುವುದು ಮಂಡ್ಯದಿಂದ 52 ಕಿ.ಮೀ ಹಾಗೂ ಕೃಷ್ಣರಾಜಪೇಟೆಯಿಂದ 20 ಕಿ.ಮೀ ಹಾಗು ಕಿಕ್ಕೇರಿಯಿಂದ...

ಗೋಕಾಕ: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವದಿಂದ ಇಡೀ ಪ್ರಪಂಚವೇ ನಮ್ಮ ರಾಷ್ಟ್ರದತ್ತ ನೋಡುತ್ತಿದೆ, ಹೀಗಾಗಿ ಮೋದಿ ಅವರು ಪ್ರಪಂಚದ ಶಕ್ತಿಶಾಲಿ ಪ್ರಧಾನಿಯಾಗಿದ್ದಾರೆ. ರಾಷ್ಟ್ರದ ಉದ್ದಗಲಕ್ಕೂ ಬಿಜೆಪಿ ಬೇರೂರಿದ್ದು, ರಾಷ್ಟ್ರದ ಸಮಗ್ರ ಪ್ರಗತಿ ಅದು ಬಿಜೆಪಿಯಿಂದ ಮಾತ್ರವೇ ಸಾಧ್ಯವೆಂದು ಬಿಜೆಪಿ ಯುವಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ಮಲ್ಲಿಕಾರ್ಜುನ ಬಾಳಿಕಾಯಿ ತಿಳಿಸಿದರು.

ಶುಕ್ರವಾರದಂದು ಸಂಜೆ ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಬಿಜೆಪಿ ಯುವ ಮೋರ್ಚಾ ಅರಭಾವಿ ಮಂಡಲದ ಕಾರ್ಯಕಾರಣಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಅತಿ ದೊಡ್ಡ ಪಕ್ಷವಾಗಿದ್ದು, ಈ ಪಕ್ಷದ ತತ್ವ ಸಿದ್ದಾಂತಗಳನ್ನು ಮೈಗೂಡಿಸಿಕೊಂಡು ಸಂಘಟನೆಯತ್ತ ಯುವಕರು ಒಲವು ತೋರುವಂತೆ ತಿಳಿಸಿದರು.

ಬಿಜೆಪಿ ತತ್ವಾಧಾರಿತ ಪಕ್ಷವಾಗಿದ್ದು, ಬೇರೆ ಪಕ್ಷಗಳಿಂತ ತೀರ ವಿಭಿನ್ನವಾಗಿದೆ. ಪಕ್ಷದ ಪದಾಧಿಕಾರಿಗಳು ತೋರಿಕೆಗಷ್ಟೇ ಮೀಸಲಾಗದೇ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಾಧನೆಗಳನ್ನು ಜನರ ಮುಂದಿಡುವಂತೆ ಸಂಘಟನೆಯ ಮೂಲಕ ನಮ್ಮಲ್ಲಿರುವ ಸಾಮರ್ಥ್ಯವನ್ನು ತೋರಿಸುವಂತೆ ಹೇಳಿದ ಅವರು, ಜವಾಬ್ದಾರಿಯನ್ನರಿತು ಶಿಸ್ತುಬದ್ಧವಾಗಿ ಶ್ರಮಿಸುವಂತೆ ತಿಳಿಸಿದರು.

- Advertisement -

ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಭಾಸ ಪಾಟೀಲ, ರಾಜ್ಯ ಯುವ ಮೋರ್ಚಾ ಕಾರ್ಯದರ್ಶಿ ಈರಣ್ಣ ಅಂಗಡಿ, ಅರಭಾವಿ ಮಂಡಲ ಅಧ್ಯಕ್ಷ ಮಹಾದೇವ ಶೆಕ್ಕಿ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಬಸವರಾಜ ನೇಸರಗಿ, ಯುವ ಮೋರ್ಚಾ ಅಧ್ಯಕ್ಷ ಪ್ರಮೋದ ನುಗ್ಗಾನಟ್ಟಿ, ಜಿಲ್ಲಾ ಉಪಾಧ್ಯಕ್ಷರಾದ ದುಂಡಪ್ಪ ನಂದಗಾಂವಿ, ಸತೀಶ ಹೂಗಾರ, ಜಿಲ್ಲಾ ಕಾರ್ಯದರ್ಶಿ ಗುರು ಹಿರೇಮಠ ಮುಂತಾದವರು ಉಪಸ್ಥಿತರಿದ್ದರು.

- Advertisement -
- Advertisement -

Latest News

25 ಸಾವಿರ ಮತಗಳಿಂದ ಬಿಜೆಪಿ ಗೆಲ್ಲುತ್ತದೆ – ಜೊಲ್ಲೆ ವಿಶ್ವಾಸ

ಸಿಂದಗಿ: ಎರಡು ಬಾರಿ ಚುನಾಯಿತರಾದ ರಮೇಶ ಭೂಸನೂರ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲಿ ಭಾಜಪ ಅಧಿಕಾರದಲ್ಲಿದೆ ಕ್ಷೇತ್ರದ ಅಭಿವೃದ್ಧಿ ದಿಸೆಯಲ್ಲಿ...
- Advertisement -

More Articles Like This

- Advertisement -
close
error: Content is protected !!