ಬೈಲಹೊಂಗಲ – ತಾಲೂಕಿನ ಚಿವಟಗುಂಡಿ ಗ್ರಾಮದ ವೀರು ಗೆಳೆಯರ ಬಳಗದ ವತಿಯಿಂದ ಸಮಾಜದಲ್ಲಿ ನಿಸ್ವಾರ್ಥದಿಂದ ಸೇವೆ ಸಲ್ಲಿಸುತ್ತಿರುವ ಪತ್ರಕರ್ತರಿಗೆ ಮಾಸ್ಕ್ ಹಾಗೂ ಸ್ಯಾನಿಟೈಸರ್ ಗಳನ್ನು ವಿತರಿಸಲಾಯಿತು.
ಪಟ್ಟಣ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿರುವ ಪ್ರೆಸ್ ಕ್ಲಬ್ ಕಾರ್ಯಾಲಯದಲ್ಲಿ ಶುಕ್ರವಾರ ಪತ್ರಕರ್ತರಿಗೆ ಮಾಸ್ಕ, ಸ್ಯಾನಿಟೈಸರ್ ವಿತರಿಸಿದ ಸಂದರ್ಭದಲ್ಲಿ ಗೆಳೆಯರ ಬಳಗದ ಗೌರವಾಧ್ಯಕ್ಷ ವೀರು ದೊಡ್ಡವೀರಪ್ಪನವರ ಮಾತನಾಡಿ, ಕೋವಿಡ್ ಸಂದರ್ಭದಲ್ಲಿ ಸಮಾಜದಲ್ಲಿ ಜೀವದ ಹಂಗು ತೊರೆದು ತಮ್ಮ ಸೇವೆ ಸಲ್ಲಿಸುತ್ತಿರುವ ಪತ್ರಕರ್ತರ ಕಾರ್ಯವನ್ನು ಶ್ಲಾಘಿಸಿ ನಿಸ್ವಾರ್ಥದಿಂದ ಸೇವೆ ಸಲ್ಲಿಸುತ್ತಿರುವ ಪತ್ರಕರ್ತರಿಗೆ ಸರ್ಕಾರ ವಿಶೇಷ ಪ್ಯಾಕೇಜ್ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು. ಕೋವಿಡ್ ಸಂದರ್ಭದಲ್ಲಿ ಗೆಳೆಯರ ಬಳಗದಿಂದ ತಾಲೂಕಿನಲ್ಲಿ ಸುಮಾರು 2000 ಹೆಚ್ಚು ಕಿಟ್ ಗಳನ್ನು ಕೋವಿಡ್ ಸಂದರ್ಭದಲ್ಲಿ ಗೆಳೆಯರ ಬಳಗದಿಂದ ಬಡವರಿಗೆ ರೋಗಿಗಳಿಗೆ ವಿತರಿಸಲಾಗಿದೆ ಎಂದರು.
ಸಂಘದ ಅಧ್ಯಕ್ಷ ಶಿವಾನಂದ ಕೆಂಚನಗೌಡರ, ಉಪಾಧ್ಯಕ್ಷ ನಾಗರಾಜ ಗುಂಡ್ಲೂರ, ಸದಸ್ಯರಾದ ಬಸವರಾಜ್ ಮಲ್ಲೂರ, ಆನಂದ ನಾಗನೂರ, ಶಿವು ಕಲ್ಲೂರ, ಪ್ರಕಾಶ ಕೆಂಚನಗೌಡರ, ಎಸ್ ಬಿ ಹೊನ್ನಾಪುರ ಸೇರಿದಂತೆ ಸ್ಥಳೀಯ ಪತ್ರಕರ್ತರು ಈ ಸಂದರ್ಭದಲ್ಲಿ ಹಾಜರಿದ್ದರು.