ಪೂಜ್ಯಶ್ರೀ ಡಾ. ಶಿವಬಸವ ಮಹಾಸ್ವಾಮಿಗಳ ೧೩೧ ನೆಯ ಜಯಂತಿ ಮಹೋತ್ಸವ

Must Read

25 ಸಾವಿರ ಮತಗಳಿಂದ ಬಿಜೆಪಿ ಗೆಲ್ಲುತ್ತದೆ – ಜೊಲ್ಲೆ ವಿಶ್ವಾಸ

ಸಿಂದಗಿ: ಎರಡು ಬಾರಿ ಚುನಾಯಿತರಾದ ರಮೇಶ ಭೂಸನೂರ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲಿ ಭಾಜಪ ಅಧಿಕಾರದಲ್ಲಿದೆ ಕ್ಷೇತ್ರದ ಅಭಿವೃದ್ಧಿ ದಿಸೆಯಲ್ಲಿ...

“ಕಲಾಸೃಷ್ಟಿ” ಆರ್ಟ್ ವರ್ಕ್ ಗೆ ಚಾಲನೆ ನೀಡಿದ ಲೋಕಲ್ ಲೀಡರ್ ನಟ ಕಲ್ಮೇಶ್

ಬಾಗಲಕೋಟೆ: ಇದೆ ಅಕ್ಟೋಬರ್ ೧೫ ರಂದು, ಗದ್ದನಕೇರಿಯಲ್ಲಿ "ಕಲಾಸೃಷ್ಟಿ" ಆರ್ಟ್ ವರ್ಕ್ ಪ್ರಾರಂಭವಾಯಿತು. ಇದನ್ನು ನಟ ಕಲ್ಮೇಶ್, ಬಾಗಲಕೋಟೆಯ ನಟಿ ಅಂಕಿತಾ ನಾಯ್ಡು ಹಾಗೂ ಸಹ...

ಗೋವಿಂದಹಳ್ಳಿಯ ಪಂಚಲಿಂಗೇಶ್ವರ ; ಐದು ಶಿಖರಗಳ ಅಪರೂಪದ ಗುಡಿ

ಸ್ಥಳದ ಬಗ್ಗೆ ಕಿರು ಪರಿಚಯ: ಪ್ರಖ್ಯಾತ ಪ್ರವಾಸಿ ತಾಣವಾದ ಗೋವಿಂದನಹಳ್ಳಿಯ ಬ್ರಹ್ಮಲಿಂಗೇಶ್ವರ ಗುಡಿಯಿರುವುದು ಮಂಡ್ಯದಿಂದ 52 ಕಿ.ಮೀ ಹಾಗೂ ಕೃಷ್ಣರಾಜಪೇಟೆಯಿಂದ 20 ಕಿ.ಮೀ ಹಾಗು ಕಿಕ್ಕೇರಿಯಿಂದ...

ಬೆಳಗಾವಿ– ಕಾಯಕಯೋಗಿ,ಮಹಾಪ್ರಸಾದಿ ಪೂಜ್ಯ ಶ್ರೀ ಡಾ.ಶಿವಬಸವ ಸ್ವಾಮಿಗಳ ೧೩೧ ನೆಯ ಜಯಂತಿ ಮಹೋತ್ಸವದ ಅಂಗವಾಗಿ ಶ್ರೀ ಸಿದ್ಧರಾಮೇಶ್ವರ ಶಿಕ್ಷಣ ಸಂಸ್ಥೆಯ ನೂತನ ಕಾರ್ಯಾಲಯ ಉದ್ಘಾಟನೆ ಹಾಗೂ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ದಿ.೭ ಹಾಗೂ ೮ ಡಿಶಂಬರ್ ದಂದು ರುದ್ರಾಕ್ಷಿ ಮಠದಲ್ಲಿ ನಡೆಯಲಿವೆ.

ಕಾರ್ಯಕ್ರಮ ದ ಸಾನ್ನಿಧ್ಯವನ್ನು ಎಡೆಯೂರು ಶ್ರೀ ಜಗದ್ಗುರು ತೋಂಟದಾರ್ಯ ಸಂಸ್ಥಾನಮಠ ಡಂಬಳ- ಗದಗದ ಡಾ.ತೋಂಟದ ಸಿದ್ಧರಾಮ ಸ್ವಾಮಿಗಳು ಹಾಗೂ ನಾಗನೂರ ರುದ್ರಾಕ್ಷಿ ಮಠ, ಬೆಳಗಾವಿಯ ಡಾ.ಅಲ್ಲಮಪ್ರಭು ಮಹಾಸ್ವಾಮಿಗಳವರು ವಹಿಸುವರು.

ಈ ಸಂದರ್ಭದಲ್ಲಿ ಎರಡು ಗ್ರಂಥಗಳು ಲೋಕಾರ್ಪಣೆ ಗೊಳ್ಳಲಿವೆ.ಒಂದು ಸ.ರಾ.ಸುಳಕೂಡೆಯವರ ಸಾದ್ಯಂತ ನಡೆ ನುಡಿಗಳು ಮತ್ತು ಮಹಾಂತ ದೇವರು ಅವರು ಸಂಪಾದಿಸಿರುವ ಶ್ರೀ ಶಿವಬಸವ ಚಿತ್ರಸಂಪುಟ ಗ್ರಂಥಗಳು.

- Advertisement -

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಷಣ್ಮುಖಾರೂಢಮಠ ವಿಜಯಪುರದ ಅಭಿನವ ಸಿದ್ಧರೂಢ ಮಹಾಸ್ವಾಮಿಗಳು ವಹಿಸುವರು. ಶ್ರೀ ಗುರುಸಿದ್ಧ ಮಹಾಸ್ವಾಮಿಗಳು ಕಾರಂಜಿಮಠ ಬೆಳಗಾವಿ ಇವರ ಸಮ್ಮುಖದಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಎಂ ಜಿ ಹಿರೇಮಠ ಅವರು ಕಾರ್ಯಕ್ರಮ ಉದ್ಘಾಟಿಸುವರು.

ಮುಖ್ಯ ಅತಿಥಿಗಳಾಗಿ ಬೆಳಗಾವಿಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗೂಳಪ್ಪ ಹೊಸಮನಿ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಪ್ರೀತಂ ನಸಲಾಪುರೆ ಆಗಮಿಸುನವರು.

ಈ ಸಂದರ್ಭದಲ್ಲಿ ರಾಜ್ಯಮಟ್ಟದ ಉತ್ತಮ ಉಪನ್ಯಾಸಕ ಪ್ರಶಸ್ತಿ ಪಡೆದಿರುವ ಯಮಕನಮರಡಿಯ ಸಿ ಜಿ ಮಠಪತಿಯವರನ್ನು ಸನ್ಮಾನಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

- Advertisement -
- Advertisement -

Latest News

25 ಸಾವಿರ ಮತಗಳಿಂದ ಬಿಜೆಪಿ ಗೆಲ್ಲುತ್ತದೆ – ಜೊಲ್ಲೆ ವಿಶ್ವಾಸ

ಸಿಂದಗಿ: ಎರಡು ಬಾರಿ ಚುನಾಯಿತರಾದ ರಮೇಶ ಭೂಸನೂರ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲಿ ಭಾಜಪ ಅಧಿಕಾರದಲ್ಲಿದೆ ಕ್ಷೇತ್ರದ ಅಭಿವೃದ್ಧಿ ದಿಸೆಯಲ್ಲಿ...
- Advertisement -

More Articles Like This

- Advertisement -
close
error: Content is protected !!