ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿ ಯುವಕನ ಬರ್ಬರ ಹತ್ಯೆ

Must Read

25 ಸಾವಿರ ಮತಗಳಿಂದ ಬಿಜೆಪಿ ಗೆಲ್ಲುತ್ತದೆ – ಜೊಲ್ಲೆ ವಿಶ್ವಾಸ

ಸಿಂದಗಿ: ಎರಡು ಬಾರಿ ಚುನಾಯಿತರಾದ ರಮೇಶ ಭೂಸನೂರ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲಿ ಭಾಜಪ ಅಧಿಕಾರದಲ್ಲಿದೆ ಕ್ಷೇತ್ರದ ಅಭಿವೃದ್ಧಿ ದಿಸೆಯಲ್ಲಿ...

“ಕಲಾಸೃಷ್ಟಿ” ಆರ್ಟ್ ವರ್ಕ್ ಗೆ ಚಾಲನೆ ನೀಡಿದ ಲೋಕಲ್ ಲೀಡರ್ ನಟ ಕಲ್ಮೇಶ್

ಬಾಗಲಕೋಟೆ: ಇದೆ ಅಕ್ಟೋಬರ್ ೧೫ ರಂದು, ಗದ್ದನಕೇರಿಯಲ್ಲಿ "ಕಲಾಸೃಷ್ಟಿ" ಆರ್ಟ್ ವರ್ಕ್ ಪ್ರಾರಂಭವಾಯಿತು. ಇದನ್ನು ನಟ ಕಲ್ಮೇಶ್, ಬಾಗಲಕೋಟೆಯ ನಟಿ ಅಂಕಿತಾ ನಾಯ್ಡು ಹಾಗೂ ಸಹ...

ಗೋವಿಂದಹಳ್ಳಿಯ ಪಂಚಲಿಂಗೇಶ್ವರ ; ಐದು ಶಿಖರಗಳ ಅಪರೂಪದ ಗುಡಿ

ಸ್ಥಳದ ಬಗ್ಗೆ ಕಿರು ಪರಿಚಯ: ಪ್ರಖ್ಯಾತ ಪ್ರವಾಸಿ ತಾಣವಾದ ಗೋವಿಂದನಹಳ್ಳಿಯ ಬ್ರಹ್ಮಲಿಂಗೇಶ್ವರ ಗುಡಿಯಿರುವುದು ಮಂಡ್ಯದಿಂದ 52 ಕಿ.ಮೀ ಹಾಗೂ ಕೃಷ್ಣರಾಜಪೇಟೆಯಿಂದ 20 ಕಿ.ಮೀ ಹಾಗು ಕಿಕ್ಕೇರಿಯಿಂದ...

ಬಿದರ: ಯುವಕನೊಬ್ಬನನ್ನು ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಹೃದಯ ವಿದ್ರಾವಕ ಘಟನೆ ನಡೆದಿದೆ.

ಬೀದರ್ ಜಿಲ್ಲೆಯ ಕಮಲನಗರ ತಾಲೂಕಿನ ಕೋಟಗ್ಯಾಳ ಗ್ರಾಮದ ವ್ಯಾಪ್ತಿಯ ತೊಗರಿ ಗದ್ದೆಯೊಂದರಲ್ಲಿ ಔರಾದ್ ತಾಲೂಕಿನ ನಾಗಮಾರಪಳ್ಳಿ ಗ್ರಾಮದ ಶಿವಕುಮಾರ್ ಹಾವಪ್ಪ(17) ಬರ್ಬರವಾಗಿ ಹತ್ಯೆಯಾದ ಸ್ಥೀತಿಯಲ್ಲಿ ಮೃತದೇಹ ಪತ್ತೆಯಾಗಿದೆ.

ಮಹಾರಾಷ್ಟ್ರದ ಲಾತೂರ್ ಜಿಲ್ಲೆಯ ದೇವಣಿ ಪಟ್ಟಣದಲ್ಲಿದ್ದ ಸಹೋದರಿ ಮನೆಯಿಂದ ಸ್ವಗ್ರಾಮ ನಾಗಮಾರಪಳ್ಳಿಗೆ ಹಿಂದುರುಗಿ ಬೈಕ್ ಮೇಲೆ ವಾಪಸ್ಸಾಗುವಾಗ ಕಮಲನಗರ ಸಮಿಪದ ಕೋಟಗ್ಯಾಳ ಬಳಿ ಈ ಘಟನೆ ನಡೆದಿದೆ ಎನ್ನಲಾಗಿದೆ.

- Advertisement -

ತಡರಾತ್ರಿವರೆಗೆ ಮಗ ಮನೆಗೆ ಬರಲಾಗದಕ್ಕೆ ಅನುಮಾನಪಟ್ಟ ಕುಟುಂಬಸ್ಥರು ಶಿವಕುಮಾರ ಹಾವಪ್ಪನ ಹುಡುಕಾಟಕ್ಕೆ ಮುಂದಾಗಿದ್ದು ಬೈಕ್ ಪತ್ತೆಯಾಗಿದೆ. ಈ ವೇಳೆಯಲ್ಲಿ ಪೊಲೀಸರ ಸಹಕಾರ ಪಡೆದು ಹುಡುಕಿದಾಗ ಮೃತದೇಹ ಪತ್ತೆಯಾಗಿದೆ. ನಮಗೆ ಇರೋನು ಒಬ್ಬನೆ ಮಗ ನಮ್ಮದು ಯಾರೊಂದಿಗೆ ಜಗಳ ಇರಲಿಲ್ಲ ಮಗ ಹೀಗೆ ಹೆಣವಾಗಿದ್ದು ನಮಗೆ ತಿಳಿಯುತ್ತಿಲ್ಲ ಎಂದು ಮೃತನ ತಾಯಿ ಅರುಣಾಬಾಯಿ ಆಕ್ರಂದನ ಹೊರ ಹಾಕಿದ್ದಾರೆ.

ಸ್ಥಳಕ್ಕೆ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಗೋಪಾಲ ಬ್ಯಾಕೋಡ್, ಡಿವೈ ಎಸ್ ಪಿ ಡಾ. ದೇವರಾಜ್ ಬಿ ಅವರು ಭೇಟಿ ನೀಡಿದ್ದು ಕಮಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
- Advertisement -

Latest News

25 ಸಾವಿರ ಮತಗಳಿಂದ ಬಿಜೆಪಿ ಗೆಲ್ಲುತ್ತದೆ – ಜೊಲ್ಲೆ ವಿಶ್ವಾಸ

ಸಿಂದಗಿ: ಎರಡು ಬಾರಿ ಚುನಾಯಿತರಾದ ರಮೇಶ ಭೂಸನೂರ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲಿ ಭಾಜಪ ಅಧಿಕಾರದಲ್ಲಿದೆ ಕ್ಷೇತ್ರದ ಅಭಿವೃದ್ಧಿ ದಿಸೆಯಲ್ಲಿ...
- Advertisement -

More Articles Like This

- Advertisement -
close
error: Content is protected !!