ಪ್ರತಿಪಕ್ಷಗಳ ಚಿತಾವಣೆಗೆ ಬಲಿಯಾಗಿ ಬಂದ್ ಮಾಡಬೇಡಿ, ಸರ್ಕಾರ ರೈತರ ಜೊತೆಗಿದೆ – ಈರಣ್ಣ ಕಡಾಡಿ

Must Read

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...

ಗಾಣಿಗ ಸಮಾಜ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಸವದತ್ತಿ: ತಾಲೂಕಿನ ಗಾಣಿಗ ಸಮಾಜದ ಎಸ್..ಎಸ್.ಎಲ್.ಸಿ.ಹಾಗೂ ಪಿ.ಯು.ಸಿ .ಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುವುದು ಎಂದು ಸವದತ್ತಿ ತಾಲೂಕಿನ ಗಾಣಿಗ ಸಮಾಜದ ತಾಲೂಕು ಘಟಕದ ಪ್ರಧಾನ...

ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಸಮಾರಂಭ

ಬೆಳಗಾವಿ ಶಿವಬಸವನಗರದ ಶ್ರೀ ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ದಿ. ೨೫ ರಿಂದ ೨೯ ಅಕ್ಟೋಬರ್ ೨೦೨೧ ರವರೆಗೆ ಐದು ದಿನಗಳ...

ಕೃಷಿ ಮಸೂದೆಗಳಲ್ಲಿ ಲೋಪದೋಷಗಳಿದ್ದರೆ ತಿದ್ದಿಕೊಳ್ಳಲು ಸಿದ್ಧ ಎಂದು ಕೇಂದ್ರ ಗೃಹ ಸಚಿವರು, ವಿತ್ತ ಸಚಿವರು ಹೇಳಿದ್ದಾರೆ.

ಅದಕ್ಕಾಗಿ ರೈತರು ಡಿಸೆಂಬರ್ 8 ರಂದು ನಡೆಸಲು ಉದ್ದೇಶಿಸಿರುವ ಬಂದ್ ಕೈಬಿಡಬೇಕು, 9ರಂದು ನಡೆಸಲಿರುವ ಚಳವಳಿಯಿಂದ ಹಿಂದಕ್ಕೆ ಸರಿಯಬೇಕು ಎಂದು ರಾಜ್ಯಸಭೆ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾದ ಶ್ರೀ ಈರಣ್ಣ ಕಡಾಡಿ ಅವರು ಹೇಳಿದರು.

ದಿನಾಂಕ ೭ ರಂದು ಭಾರತೀಯ ಜನತಾ ಪಕ್ಷ ಬೆಳಗಾವಿ ಮಹಾನಗರ ಜಿಲ್ಲಾ ಕಾರ್ಯಾಲಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಅನೇಕ ಯೋಜನೆಗಳು ರೈತರ ಪರವಾಗಿವೆ. ರೈತರ ಆದಾಯ ದ್ವಿಗುಣಗೊಳಿಸಬೇಕು ಎನ್ನುವುದು ಸರ್ಕಾರದ ಉದ್ದೇಶವಾಗಿದೆ. ಪ್ರತಿಪಕ್ಷಗಳ ಚಿತಾವಣೆಯಿಂದ ಪ್ರತಿಭಟನೆಗಿಳಿಯದೇ ರೈತರು ಮಸೂದೆಯ ಒಳ್ಳೆಯ ಅಂಶಗಳತ್ತ ಗಮನ ಹರಿಸಬೇಕು.

- Advertisement -

ಪ್ರತಿಭಟನೆ ಕೈ ಬಿಡಬೇಕು. ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ಕೃಷಿ ಮಸೂದೆಗಳ ಕುರಿತಂತೆ ಪ್ರಗತಿಪರ ರೈತರೊಂದಿಗೆ ಈಗಾಗಲೇ ಚರ್ಚಿಸಿದ್ದೇವೆ. ಮಸೂದೆಗಳಲ್ಲಿ ಇರುವ ಒಳ್ಳೆಯ ಅಂಶಗಳ ಬಗ್ಗೆ ತಿಳಿವಳಿಕೆ ನೀಡಿದ್ದೇವೆ.

ಯಾವುದೇ ಲೋಪದೋಷಗಳಿದ್ದರೆ ತಿದ್ದಿಕೊಳ್ಳಲು ಸಿದ್ಧ ಎಂದು ಕೇಂದ್ರದ ಗೃಹ ಸಚಿವರು, ವಿತ್ತ ಸಚಿವರು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಕೇಂದ್ರ ಸರ್ಕಾರ ಚರ್ಚೆಗೆ ಮುಕ್ತವಾಗಿದ್ದು, ರೈತರು ರಾಜಕೀಯ ಪ್ರೇರಣೆಯಿಂದ ಬಂದ್ ನಡೆಸುವುದು ಬೇಡ ಎಂದರು.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಭಾರತೀಯ ಜನತಾ ಪಾರ್ಟಿ ಬೆಳಗಾವಿ ಮಹಾನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀ ದಾದಾಗೌಡ ಬಿರಾದಾರ ಮತ್ತು ಮುರುಘೇಂದ್ರಗೌಡಾ ಪಾಟೀಲ ಹಾಗೂ ಬೆಳಗಾವಿ ಮಹಾನಗರ ಜಿಲ್ಲಾ ವಕ್ತಾರರಾದ ಶ್ರೀ ಹನುಮಂತ ಅ ಕೊಂಗಾಲಿ ಹಾಗೂ ಬೆಳಗಾವಿ ಮಹಾನಗರ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರಾದ ಶ್ರೀ ಕಲ್ಲಪ್ಪಾ ಶಾಪುರಕರ ಹಾಗೂ ಬೆಳಗಾವಿ ಗ್ರಾಮಾಂತರ ರೈತ ಮೋರ್ಚಾ ಅಧ್ಯಕ್ಷರಾದ ಶ್ರೀ ಶ್ರೀಕರ್ ಕುಲಕರ್ಣಿ ಅವರು ಹಾಗೂ ಬೆಳಗಾವಿ ಮಹಾನಗರ ಕೋಶಾಧ್ಯಕ್ಷರಾದ ಶೇಖರ ಹಂಡೆ ಮತ್ತು ಮಹಾನಗರ ಸಾಮಾಜಿಕ ಜಾಲತಾಣ ಸಂಚಾಲಕರಾದ ಶ್ರೀ ಕೇದಾರ ಜೋರಾಪೂರ ಹಾಗೂ ಮಂಜುನಾಥ ಬಜಂತ್ರಿ ಉಪಸ್ಥಿತರಿದ್ದರು.

- Advertisement -
- Advertisement -

Latest News

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...
- Advertisement -

More Articles Like This

- Advertisement -
close
error: Content is protected !!