ಬಾಲಕಿಯರ ಅತ್ಯಾಚಾರ ಆರೋಪಿಗಳ ಗಲ್ಲಿಗೇರಿಸಲು ಮನವಿ

Must Read

ಸಂಚಾರಿ ವಿಜಯ್ ಬ್ರೇನ್ ಡೆಡ್ ; ನಾಳೆ “ನಿಧನ” ರಾಗಲಿರುವ ನಟ. ವಿಚಿತ್ರ ಪರಿಸ್ಥಿತಿ

ಬೆಂಗಳೂರು - ಯುವ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅಪಘಾತದ ಕಾರಣದಿಂದಾಗಿ ಬ್ರೇನ್ ಡೆಡ್ ಆಗಿ ನಿಧನ ಹೊಂದಿದರೆಂದು ಹೇಳುವ ವಿಚಿತ್ರ...

ಜನ ಸಾಮಾನ್ಯರ ತುರ್ತು ಸೇವೆಗಾಗಿ ಅರಭಾವಿ ಕ್ಷೇತ್ರದ ಎಲ್ಲ ಪಿಎಚ್‍ಸಿಗಳಿಗೆ ರಕ್ಷಾ ಕವಚ ವಾಹನ ಸೌಲಭ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿಯಲ್ಲಿ ಟಾಸ್ಕ್ ಫೋರ್ಸ್ ಸಭೆ ಮೂಡಲಗಿ : ಕೋವಿಡ್ ಎರಡನೆಯ ಅಲೆಯ ವಿರುದ್ದ ಹೋರಾಟ ಮಾಡಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿರುವ ಕೊರೋನಾ ವಾರಿಯರ್ಸ್‌ ಗಳ ಕಾರ್ಯ...

ಪುರಸಭೆಯ ಸಾಮಾನ್ಯ ಸಭೆ ಕರೆಯಲು ಮನವಿ

ಸಿಂದಗಿ: ಪಟ್ಟಣದ ಹಲವು ವಾರ್ಡುಗಳಲ್ಲಿ ನೀರಿನ ಸಮಸ್ಯೆ, ಗಟಾರಗಳ ಸಮಸ್ಯೆ ಸೇರಿದಂತೆ ಹಲವಾರು ಸಮಸ್ಯೆಗಳು ಉಲ್ಬಣ ಸೇರಿದಂತೆ ಹಲವಾರು ವಿಷಯಗಳ ಕುರಿತು ಚರ್ಚಿಸಲು ಸಾಮಾನ್ಯ ಸಭೆ...

ಸಿಂದಗಿ: ಬಸನಬಾಗೇವಾಡಿ ತಾಲೂಕಿನ ಕುದರಸಾಲೋಡಗಿ ಗ್ರಾಮದ ರೇಣುಕಾ ಹಾಗೂ ಪ್ರೀತಿ ಎಂಬ ಅಪ್ರಾಪ್ತ ಬಾಲಕಿಯರನ್ನು ಯಾವದೋ ದುಷ್ಕರ್ಮಿಯರು ಅತ್ಯಾಚಾರವೆಸಗಿ ಕೊಲೆ ಮಾಡಿದ ಆರೋಪಿಗಳನ್ನು ಬಂಧಿಸಿ ಸಾಮೂಹಿಕ ಗಲ್ಲಿಗೇರಿಸುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಸಾಗರಬಣ)ಯ ಪದಾಧಿಕಾರಿಗಳು ತಹಶೀಲ್ದಾರ ಕಾರ್ಯಾಲಯದ ಶಿರಸ್ತೆದಾರರ ಜಿ..ಎಸ್ ರೋಡಗಿ ಅವರ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ವಿದ್ಯಾರ್ಥಿ ಘಟಕದ ಸಂಚಾಲಕ ವೈ.ಸಿ.ಮಯೂರ ಮಾತನಾಡಿ, ಮಹಾತ್ಮಾ ಗಾಂಧೀಜಿಯವರು ದೇಶದಲ್ಲಿ ಹಾಗೂ ರಾಜ್ಯದಲ್ಲಿ ಮಹಿಳೆಯರು ಮಧ್ಯರಾತ್ರಿ ಸ್ವತಂತ್ರಳಾಗಿ ತಿರುಗಾಡುತ್ತಾಳೋ ಅಂದು ಈ ದೇಶಕ್ಕೆ ಸಂಪೂರ್ಣ ಸ್ವಾತಂತ್ರ್ಯ ದೊರೆತಂತೆ ಎಂದು ಹೇಳಿದ್ದಾರೆ.

ಇಂದು ದೇಶ ಹಾಗೂ ರಾಜ್ಯದಲ್ಲಿ ಬಿಜೆಪಿ ಸರಕಾರಗಳು ಅಧಿಕಾರಕ್ಕೆ ಬಂದಾಗಿನಿಂದ ದಲಿತರ ಕೊಲೆ, ಸುಲಿಗೆ ದಬ್ಬಾಳಿಕೆ, ಸಾಮಾಜಿಕ ಬಹಿಷ್ಕಾರ, ದಲಿತ ಮಹಿಳೆಯರ ಮೇಲೆ ಅತ್ಯಾಚಾರ ಹಾಗೂ ಸಾಮೂಹಿಕ ಅತ್ಯಾಚಾರಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದನ್ನು ನೋಡಿದರೆ ಸಂವಿಧಾನ ಬದ್ಧ ಮೂಲಭೂತ ಹಕ್ಕುಗಳು ಸಂಪೂರ್ಣವಾಗಿ ಮೊಟಕುಗೊಂಡಿವೆ ಎನ್ನುವುದು ಸಾಬೀತುಪಡಿಸಿದಂತಾಗಿ ಆಡಳಿತ ಸಂಪೂರ್ಣ ವಿಫಲಗೊಂಡಿದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ.

- Advertisement -

ಬಸನಬಾಗೇವಾಡಿ ತಾಲೂಕಿನ ಕುದರಸಾಲೋಡಗಿ ಗ್ರಾಮದಲ್ಲಿ ದಲಿತ ಇಬ್ಬರ ಅಪ್ರಾಪ್ತ ಬಾಲಕಿಯರನ್ನು ಅತ್ಯಾಚಾರ ವೆಸಗಿ ಕೊಲೆ ಮಾಡಿ ಯಾಳವಾರ ಗ್ರಾಮದ ಬಾವಿವೊಂದರಲ್ಲಿ ಶವಗಳನ್ನು ಬಿಸಾಕಿದ ಘಟನೆ ಮಾನವಕುಲ ತಲೆ ತಗ್ಗಿಸುವ ಕೃತ್ಯವಾಗಿದೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕೊಲೆ ಮಾಡಿದ ಆರೋಪಿಗಳಿಗೆ ಗಲ್ಲು ಶಿಕ್ಷೆಗೆ ಗುರಿಪಡಿಸಬೇಕು.

ಕೊಲೆಗೀಡಾದ ಬಾಲಕಿಯರ ಕುಟುಂಬಕ್ಕೆ ಪ್ರತ್ಯೇಕವಾಗಿ ರೂ.50ಲಕ್ಷ ರೂಪಾಯಿ ಸಹಾಯಧನ ಘೋಷಿಸಬೇಕು ಮತ್ತು ಇಬ್ಬರ ಕುಟುಂಬದ ಓರ್ವ ಸದಸ್ಯನಿಗೆ ಸರಕಾರಿ ನೌಕರಿ ಒದಗಿಸಿ ಸರಕಾರದಿಂದ ಸಿಗುವ ಸಹಾಯ ಸೌಲಭ್ಯಗಳನ್ನು ಮಂಜೂರು ಮಾಡಬೇಕು, ಅಲ್ಲದೆ ಸದರಿ ಕುಟುಂಬದ ಉಪಜೀವನಕ್ಕೆ 5 ಎಕರೆಯಂತೆ ಸರಕಾರಿ ಗೋಮಾಳ ಜಮೀನು ಮಂಜೂರು ಮಾಡಿ ಕೊಡಬೇಕು ಮತ್ತು ನೊಂದ ಕುಟುಂಬಕ್ಕೆ ಹಾಗೂ ದಲಿತರಿಗೆ ಸೂಕ್ತ ರಕ್ಷಣೆ ನೀಡಬೇಕು.

ಸರಕಾರ ಮಹಿಳೆಯರ ಮೇಲಿನ ದೌರ್ಜನ್ಯ ತಡೆಗೆ ಕಠಿಣ ಕಾನೂನು ರೂಪಿಸಬೇಕು ಇಲ್ಲದಿದ್ದರೆ ರಾಜ್ಯವ್ಯಾಪಿ ಉಗ್ರವಾದ ಹೋರಾಟ ರೂಪಿಸುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಶರಣು ಚಲವಾದಿ, ನೀಲಕಂಠ ಹೊಸಮನಿ, ಶಿವಪುತ್ರ ಮೇಲಿನಮನಿ, ಜೈಭೀಮ ತಳಕೇರಿ, ಗುಂಡು ಬಾಣಿ ಸೇರಿದಂತೆ ಅನೇಕರಿದ್ದರು.

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಸಂಚಾರಿ ವಿಜಯ್ ಬ್ರೇನ್ ಡೆಡ್ ; ನಾಳೆ “ನಿಧನ” ರಾಗಲಿರುವ ನಟ. ವಿಚಿತ್ರ ಪರಿಸ್ಥಿತಿ

ಬೆಂಗಳೂರು - ಯುವ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅಪಘಾತದ ಕಾರಣದಿಂದಾಗಿ ಬ್ರೇನ್ ಡೆಡ್ ಆಗಿ ನಿಧನ ಹೊಂದಿದರೆಂದು ಹೇಳುವ ವಿಚಿತ್ರ...
- Advertisement -

More Articles Like This

- Advertisement -
close
error: Content is protected !!