- Advertisement -
ಬೀದರ – ಕ್ಷೇತ್ರಕ್ಕೆ ಸಂಬಂಧಿಸಿದ ಅಭ್ಯರ್ಥಿಗೆ ಕೊಡದೆ ಬೇರೆ ಜಿಲ್ಲೆಯ ಅಭ್ಯರ್ಥಿಗೆ ಟಿಕೆಟ್ ಕೊಟ್ಟಿದ್ದರಿಂದ ಪಕ್ಷದ ನಾಯಕರ ವಿರುದ್ಧ ಸಿಡಿದೆದ್ದಿರುವ ಕಾರ್ಯಕರ್ತರು ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕುವುದಿಲ್ಲ ಎಂದು ಶಪಥ ಮಾಡಿದ್ದಾರೆ.
ಬಸವಕಲ್ಯಾಣ ಕ್ಷೇತ್ರದ ಉಪಚುನಾವಣೆಗೆ ಸ್ಥಳೀಯ ಅಭ್ಯರ್ಥಿ ಮಲ್ಲಿಕಾರ್ಜುನ ಖೂಬಾಗೆ ಟಿಕೆಟ್ ಕೊಡದೆ ಬೇರೆ ಜಿಲ್ಲೆಯ ಶರಣು ಸಲಗರ ಅವರಿಗೆ ಟಿಕೆಟ್ ಕೊಟ್ಟಿದ್ದರಿಂದ ಆಕ್ರೋಶಗೊಂಡ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಒಂದು ಹಂತದಲ್ಲಿ ಸಂಸದ ಭಗವಂತ ಖೂಬಾ ಅವರ ಭಾವಚಿತ್ರವನ್ನು ಅವಮಾನಿಸುವ ಮಟ್ಟಕ್ಕೂ ಹೋದರು. ಇದರಿಂದ ಕ್ಷೇತ್ರದಲ್ಲಿ ಗೊಂದಲಕರ ವಾತಾವರಣ ನಿರ್ಮಾಣವಾಗಿದೆ.
ಈಗ ಬಿಜೆಪಿಯ ಕಾರ್ಯಕರ್ತರೆ ಆಕ್ರೋಶಗೊಂಡು ಸ್ವಂತ ಪಕ್ಷದ ವಿರುದ್ಧವೇ ಸಿಡಿದೆದ್ದು ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕುವುದಿಲ್ಲ. ನನಗೆ ಬೇಕಾದ ವ್ಯಕ್ತಿ ಅಥವಾ ಬೇರೆ ಪಕ್ಷಕ್ಕೆ ಮತ ಹಾಕುತ್ತೇನೆ ಎಂದು ವಿಶ್ವಗುರು ಬಸವಣ್ಣನವರ ಮೇಲೆ ಆಣೆ ಪ್ರಮಾಣ ಮಾಡಿದ್ದಾರೆ.