spot_img
spot_img

ಬಿಳಿಜೋಳಕ್ಕೆ ಬೆಂಬಲ ಬೆಲೆ ಹೆಚ್ಚಳಕ್ಕೆ ಮನವಿ

Must Read

ಮೂಡಲಗಿ: ಕೇಂದ್ರ ಸರ್ಕಾರದ ಕೃಷಿ ಮತ್ತು ರೈತ ಕಲ್ಯಾಣ ಸಚಿವರಾದ ನರೇಂದ್ರ ಸಿಂಗ್ ತೋಮರ ಅವರನ್ನು ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕರ ವ್ಯವಹಾರಗಳ ಸಚಿವರಾದ ಉಮೇಶ ಕತ್ತಿ ಹಾಗೂ ರಾಜ್ಯ ಭಾರತೀಯ ಆಹಾರ ನಿಗಮ ಅಧ್ಯಕ್ಷರು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಜಂಟಿಯಾಗಿ ಭೇಟಿಯಾದ ಸಂದರ್ಭದಲ್ಲಿ ಬಿಳಿ ಜೋಳಕ್ಕೆ ನಿಗದಿ ಪಡಿಸಿದ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸುವಂತೆ ಮನವಿ ಮಾಡಲಾಯಿತು.

ಶುಕ್ರವಾರ (ಮಾ 12) ರಂದು ನವದೆಹಲಿಯ ಸಚಿವರ ಅಧಿಕೃತ ನಿವಾಸಕ್ಕೆ ಭೇಟಿ ನೀಡಿದ ಅವರು ಹೈಬ್ರೀಡ್ ಬಿಳಿ ಜೋಳಕ್ಕೆ ₹4,154 ಮತ್ತು ಮಾಲ್ದಂಡಿ ಬಿಳಿ ಜೋಳಕ್ಕೆ ₹4,785 ದರವನ್ನು ನಿಗದಿ ಪಡಿಸುವಂತೆ ಮನವಿ ಸಲ್ಲಿಸಿದರು. ಕೃಷಿ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈಗಿನ ಬೆಲೆ ಸಾಕಾಗುತ್ತಿಲ್ಲ. ರೈತರ ಆರ್ಥಿಕ ಹಿತ ಕಾಪಾಡಲು ಬೆಲೆ ಹೆಚ್ಚಳ ಅವಶ್ಯ ಎಂದು ಸಚಿವರಲ್ಲಿ ಮನವರಿಕೆ ಮಾಡಿದರು.

- Advertisement -
- Advertisement -

Latest News

ಸುಣಧೋಳಿ ಮಹಿಳಾ ಕ್ರೆಡಿಟ್ ಸೌಹಾರ್ದಗೆ ೭೬.೦೭ ಲಕ್ಷ ರೂ ಲಾಭ

ಮೂಡಲಗಿ: ಸುಣಧೋಳಿ ಮಹಿಳಾ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ೨೦೨೩ರ ಮಾರ್ಚ ಅಂತ್ಯಕ್ಕೆ ರೂ.೭೬.೦೭ ಲಕ್ಷ ಲಾಭವನ್ನು ಗಳಿಸಿ ಪ್ರಗತಿಯಲ್ಲಿ  ಸಾಗುತ್ತಿದೆ ಎಂದು ಸಹಕಾರಿಯ ಅಧ್ಯಕ್ಷೆ...
- Advertisement -

More Articles Like This

- Advertisement -
close
error: Content is protected !!