ಬೀದರನಲ್ಲೂ ಟ್ರಾಕ್ಟರ್ ರ್ಯಾಲಿ

Must Read

ಬೀದರ – ಕೃಷಿ ಕಾಯ್ದೆ ವಿರೋಧಿಸಿ ಹಾಗೂ ಕಾಯ್ದೆಯನ್ನು ಕೂಡಲೇ ಹಿಂಪಡೆಯುವಂತೆ ಆಗ್ರಹಿಸಿ ಗಡಿ ಜಿಲ್ಲೆ ಬೀದರ್ ನಲ್ಲೂ ರೈತರು ಟ್ರ್ಯಾಕ್ಟರ್ ರ್ಯಾಲಿ ನಡೆಸಿದರು.

ಭಾಲ್ಕಿ ಪಟ್ಟಣದ ಅಂಬೇಡ್ಕರ್ ಪ್ರತಿಮೆ, ಗಾಂಧಿ ಪ್ರತಿಮೆ ಸೇರಿದಂತೆ ಮಹಾತ್ಮರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡುವ ಮೂಲಕ ರ್ಯಾಲಿ ಆರಂಭಿಸಿ ಬೀದರ ಜಿಲ್ಲಾಧಿಕಾರಿ ಕಚೇರಿಯವರೆಗೆ ಟ್ರಾಕ್ಟರ್ ರ್ಯಾಲಿ ಹಾಗೂ ಪಾದಯಾತ್ರೆಯ ಮೂಲಕ ಪ್ರತಿಭಟನೆ ಸಲ್ಲಿಸಲಾಯಿತು.

ರೈತ ಟ್ರಾಕ್ಟರ್ ರ್ಯಾಲಿಗೆ ವಿವಿಧ ಸಂಘಟನೆಗಳು ಸಾಥ್ ನೀಡಿದ್ದವು ಕೂಡಲೇ ಕೇಂದ್ರ ಸರ್ಕಾರ ಮಂಡಿಸಿರುವ ಕೃಷಿ ಕಾಯ್ದೆಗಳು ಹಿಂಪಡಯುವಂತೆ ಈ ಸಂದರ್ಭದಲ್ಲಿ ಆಗ್ರಹಿಸಲಾಯಿತು. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದರು.

ವರದಿ: ನಂದಕುಮಾರ ಕರಂಜೆ, ಬೀದರ

Latest News

ಕವನ : ಶ್ರದ್ಧೆ

ಶ್ರದ್ಧೆಶ್ರದ್ಧೆ ಎಂದರೆ ಕೇವಲ ನಂಬಿಕೆ ಅಲ್ಲ, ಸಾಧನೆಯ ಕೀಲಿ ಕೈ ಆಗಿದೆಯಲ್ಲ ಹೃದಯದಿಂದ ಹೊಮ್ಮುವ ಶಕ್ತಿ ಎಲ್ಲ ಕಣ್ಣಿಗೆ ಕಾಣದ ಅದ್ಭುತ ಅನುಭವದ ಬೆಲ್ಲ ಹೆಜ್ಜೆಗೆ ದಿಕ್ಕು ತೋರುವ ಬೆಳಕ ಸಾಧನೆಯ ಹಾದಿಯ...

More Articles Like This

error: Content is protected !!
Join WhatsApp Group