ಬೀದಿ ನಾಯಿಗಳ ಹಾವಳಿ ; ಪುರಸಭೆಯ ನಿರ್ಲಕ್ಷ್ಯ

Must Read

ಮೂಡಲಗಿ : ಪಟ್ಟಣದ ನಾನಾ ಕಡೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು,ಜನಸಾಮಾನ್ಯರು ಒಬ್ಬಂಟಿಯಾಗಿ ಓಡಾಡುವುದು ಕಷ್ಟಕರವಾಗಿದೆ.

ಗಲ್ಲಿ ಗಲ್ಲಿಗಳಲ್ಲಿ ತಿರುಗಾಡುತ್ತಿರುವ ಬೀದಿ ನಾಯಿಗಳ ಹಿಂಡು ವಾಹನ ಸವಾರರ ಮೇಲೆ ದಾಳಿ ಮಾಡುತ್ತವೆ. ಕೆಲ ನಾಯಿಗಳು ಬೈಕ್‌, ಕಾರುಗಳ ಹಿಂದೆ ಓಡಿ ಬರುತ್ತಿರುವ ಪರಿಣಾಮ ವಾಹನ ಸವಾರರು ಆತಂಕ ಪಡಬೇಕಾಗಿದೆ. ರಸ್ತೆಯಲ್ಲಿ ಚಿಕ್ಕ ಮಕ್ಕಳು, ವಯೋವೃದ್ಧರು ಸಂಚಾರ ಮಾಡಲು ಹಿಂದೇಟು ಹಾಕುವಂತಾಗಿದೆ. ರಾತ್ರಿ ವೇಳೆ ವಾರ್ಡ್‌, ಕಾಲೊನಿ ನಿವಾಸಿಗಳ ನಿದ್ದೆಗೆಡಿಸುತ್ತಿರುವ ಬಿಡಾಡಿ ನಾಯಿಗಳ ಉಪಟಳ ಹೆಚ್ಚಾಗಿದೆ.

ಹಿಡಿಶಾಪ: ಬೀದಿ ನಾಯಿಗಳ ಹಾವಳಿ ತಪ್ಪಿಸುವಂತೆ ಪುರಸಭೆಗೆ ಅನೇಕ ಸಲ ಪತ್ರಿಕೆಗಳ ಮೂಲಕ ಪ್ರಕಟಣೆ ಮಾಡಿದ್ದರು ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದ ಪರಿಣಾಮ ಸಾರ್ವಜನರು ಪುರಸಭೆಗೆ ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ

ಪಟ್ಟಣದ ಬಸ್‌ ನಿಲ್ದಾಣ ರಸ್ತೆ, ಬಸವೇಶ್ವರ ವೃತ್ತ, ಅಂಬೇಡ್ಕರ್ ನಗರ, ಮಹಾತ್ಮ ಗಾಂಧಿ ವೃತ್ತ, ಹೀಗೆ ಪಟ್ಟಣದ ರಸ್ತೆಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ.

ಪುರಸಭೆಯ ದಿವ್ಯ ನಿರ್ಲಕ್ಷ್ಯದಿಂದಾಗಿ ಸಾರ್ವಜನಿಕರು ಜೀವ ಕೈಯಲ್ಲಿ ಹಿಡಿದು ಓಡಾಡುವಂತಾಗಿದ್ದು ಈ ನಾಯಿಗಳ ಹಾವಳಿ ಕಡಿಮೆಗೊಳಿಸಲು ಇನ್ನಾದರೂ ಪುರಸಭಾ ಅಧಿಕಾರಿಗಳು ಮನಸು ಮಾಡಬೇಕು ಎಂದು ಆಗ್ರಹಿಸುತ್ತಿದ್ದಾರೆ.

ಸಚಿನ್ ಪತ್ತಾರ ಪತ್ರಕರ್ತರು:ಪ್ರತಿದಿನ ಬೆಳಗ್ಗೆ ಪತ್ರಿಕೆಗಳನ್ನು ಹಂಚುವಾಗ ಅನೇಕ ಬಾರಿ ನಾಯಿಗಳು ನನ್ನನ್ನು ಅಟ್ಟಿಸಿಕೊಂಡು ಬಂದು ಕಚ್ಚಿವೆ, ಇದರ ಬಗ್ಗೆ ಸಾಕಷ್ಟು ಸಾರಿ ಪುರಸಭೆ ಅಧಿಕಾರಿಗಳಿಗೆ ಹೇಳಿದರೂ ಬೀದಿನಾಯಿಗಳ ನಿಯಂತ್ರಣ ಮಾಡಲು ಪುರಸಭೆ ಅಧಿಕಾರಿಗಳು ಯಾವುದೇ ತರದ ಕ್ರಮಕೈಗೊಳ್ಳಲು ವಿಫಲರಾಗಿದ್ದಾರೆ.”

ವರದಿ : ಮಲ್ಲು ಬೋಳನವರ

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group