ಬೈಲಹೊಂಗಲ: ತಾಲೂಕಿನ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಿಸಲಾಯಿತು.
ವಿದ್ಯಾರ್ಥಿಗಳು, ಶಿಕ್ಷಕರು ಸೇರಿ ಮಾನವ ಸರಪಳಿ ನಿರ್ಮಿಸುವುದರ ಮೂಲಕ ಜಾಗೃತಿ ಮೂಡಿಸಲಾಯಿತು. ಸಂವಿಧಾನ ಪೀಠಿಕೆಯನ್ನು ಓದಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಮುಖ್ಯಶಿಕ್ಷಕ ಎನ್.ಆರ್.ಠಕ್ಕಾಯಿ ಮಾತನಾಡಿ, ವಿಶ್ವದಲ್ಲಿಯೇ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ದೇಶವಾದ ಭಾರತದ ಪ್ರಜೆಗಳಾದ ನಮಗೆಲ್ಲ ಹೆಮ್ಮೆ ಇರಬೇಕು ಎಂದು ಹೇಳಿದರು.
ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಉತ್ತಮ ನಾಗರಿಕರಾಗಿ ದೇಶದ ಅಭಿವೃದ್ಧಿಯಲ್ಲಿ ಕೈಜೋಡಿಸಬೇಕು. ಸಂವಿಧಾನದ ಆಶೋತ್ತರಗಳನ್ನು ಗೌರವಿಸುವ ಗುಣ ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ವಿಶ್ವ ಪ್ರಜಾಪ್ರಭುತ್ವ ದಿನದ ಇತಿಹಾಸ, ಹಿನ್ನೆಲೆ, ಉದ್ದೇಶ, ಮಹತ್ವದ ಕುರಿತಾಗಿ ವಿದ್ಯಾರ್ಥಿಗಳಾದ ಭಾಗ್ಯಶ್ರೀ ಬಡಿಗೇರ, ರಕ್ಷಾ ಬಾರ್ಕಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಶಿಕ್ಷಕರಾದ ಜಗದೀಶ ನರಿ, ಪ್ರವೀಣ ಗುರುನಗೌಡರ, ರೇಖಾ ಸೊರಟೂರ, ಹೇಮಲತಾ ಪುರಾಣಿಕ, ಮಂಜುಳಾ ಕಾಳಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶ್ರದ್ಧಾ ಹೊಂಗಲ ಸ್ವಾಗತಿಸಿ ನಿರೂಪಿಸಿದರು. ಚೇತನಾ ಗಡಾದ ವಂದಿಸಿದರು.