ಬೆಳಗಾವಿ ಉಪಕದನ ಕಣಕ್ಕೆ ಜಗದೀಶ ಶೆಟ್ಟರ?

Must Read

ಜಿಲ್ಲಾ ಲೇಖಕಿಯರ ಸಂಘದ ವತಿಯಿಂದ ದತ್ತಿನಿಧಿ ಕಾರ್ಯಕ್ರಮ

ಇದೇ ದಿ. 9 ರಂದು ಗುರುವಾರ ಮಧ್ಯಾಹ್ನ 3 ಗಂಟೆಗೆ ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಬೆಳಗಾವಿ ಜಿಲ್ಲಾ ಲೇಖಕಿಯರ ವತಿಯಿಂದ ಶ್ರೀಮತಿ ಸುಮಿತ್ರಾ ಚರಂತಿಮಠ,ದಿ....

ಕೇಂದ್ರ ಸಚಿವ ಭಗವಂತ ಖೂಬಾ ಗುಪ್ತ ಸಭೆ: ಸಭೆಯ ಕೇಂದ್ರ ಬಿಂದು ನಾಯಕ ಯಾರು?

ಬೀದರ - ಗಡಿ ಜಿಲ್ಲೆ ಬೀದರ್ ನಲ್ಲಿ ವಿಧಾನ ಪರಿಷತ್ ಚುನಾವಣೆ ಕಾವು ದಿನೇ ದಿಏ ರಂಗೇರುತ್ತಿದೆ ಅಲ್ಲದೆ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಇಂದು ಕೇಂದ್ರ ಸಚಿವ...

ಸ್ಮಾರ್ಟ್ ಸಿಟಿ ಯೋಜನೆಗೆ ಕೇಂದ್ರದಿಂದ ಹಣ – ಕಡಾಡಿ ಮಾಹಿತಿ

ಮೂಡಲಗಿ: ಬೆಳಗಾವಿ ಸ್ಮಾಟ್ ಸಿಟಿ ಮಿಷನ್ ಯೋಜನೆಗೆ ನಗರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಕೇಂದ್ರ ಸರ್ಕಾರ 392 ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿದ್ದು, ಈಗಾಗಲೇ 294...

ಬೆಳಗಾವಿ ಲೋಕಸಭಾ ಚುನಾವಣೆಯ ದಿನಾಂಕ ಇಷ್ಟರಲ್ಲಿಯೇ ಘೋಷಣೆಯಾಗುವ ನಿರೀಕ್ಷೆಯಿದ್ದು ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಬೆಳಗಾವಿ ಕ್ಷೇತ್ರಕ್ಕೆ ಮಾಜಿ ಸಿಎಮ್, ಹಾಲಿ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ ಹೆಸರನ್ನು ಪಕ್ಷ ಬಹಿರಂಗಪಡಿಸಿದೆಯೆನ್ನಲಾಗಿದೆ.

ರೈಲ್ವೇ ಸಚಿವರಾಗಿದ್ದ ಸುರೇಶ ಅಂಗಡಿಯವರ ನಿಧನದಿಂದ ತೆರವಾಗಿದ್ಧ ಸಂಸದ ಸ್ಥಾನಕ್ಕೆ ಈಗ ಉಪಚುನಾವಣೆ ನಡೆಯಬೇಕಿದ್ದು ಭಾರತೀಯ ಜನತಾ ಪಕ್ಷವು ಇಷ್ಟು ದಿನ ಅಳೆದು ತೂಗಿ ಈಗ ಮಾಜಿ ಸಿಎಂ ಜಗದೀಶ ಶೆಟ್ಟರ ಅವರನ್ನು ಚುನಾವಣೆಗೆ ನಿಲ್ಲಿಸಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಬೆಳಗಾವಿ ಸಂಸದ ಸ್ಥಾನಕ್ಕೆ ಜಗದೀಶ ಶೆಟ್ಟರೇ ಯಾಕೆ ಎಂಬ ಪ್ರಶ್ನೆಗೆ ಅವರೊಬ್ಬ ಪ್ರಭಾವಿ ಉತ್ತರ ಕರ್ನಾಟಕದ ಮುಖಂಡರು, ಅಂಗಡಿಯವರ ನೆಂಟರು ಎಂಬ ಅಂಶಗಳು ಪ್ರಮುಖವಾಗಿದ್ದು, ಶೆಟ್ಟರ ಅವರಿಂದ ಈ ಭಾಗದ ಲಿಂಗಾಯತ ಸಮಯದಾಯಕ್ಕೆ ಸೂಕ್ತ ನ್ಯಾಯ ಕಲ್ಪಿಸಿದಂತಾಗುತ್ತದೆ ಎಂಬ ತಂತ್ರಗಾರಿಕೆಯಲ್ಲಿ ಬಿಜೆಪಿ ತೊಡಗಿದೆ.

ಇತ್ತ ಕಾಂಗ್ರೆಸ್ ಪಾಳಯದಲ್ಲಿಯೂ ಪಕ್ಷದ ಅಭ್ಯರ್ಥಿ ಕುರಿತಂತೆ ಸಾಕಷ್ಟು ಚರ್ಚೆಗಳು ನಡೆದಿವೆಯಾದರೂ ಇನ್ನೂ ಯಾವುದೇ ನಿರ್ಧಾರಕ್ಕೆ ಬರಲಾಗಿಲ್ಲ. ಆದರೂ ಅಭ್ಯರ್ಥಿ ಆಯ್ಕೆಯ ಚೆಂಡು ಲಕ್ಷ್ಮಿ ಹೆಬ್ಬಾಳಕರ ಹಾಗೂ ಸತೀಶ ಜಾರಕಿಹೊಳಿಯವರ ಅಂಗಳದಲ್ಲಿದೆಯೆಂದು ಹೇಳಲಾಗುತ್ತಿದೆ.

- Advertisement -
- Advertisement -

Latest News

ಜಿಲ್ಲಾ ಲೇಖಕಿಯರ ಸಂಘದ ವತಿಯಿಂದ ದತ್ತಿನಿಧಿ ಕಾರ್ಯಕ್ರಮ

ಇದೇ ದಿ. 9 ರಂದು ಗುರುವಾರ ಮಧ್ಯಾಹ್ನ 3 ಗಂಟೆಗೆ ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಬೆಳಗಾವಿ ಜಿಲ್ಲಾ ಲೇಖಕಿಯರ ವತಿಯಿಂದ ಶ್ರೀಮತಿ ಸುಮಿತ್ರಾ ಚರಂತಿಮಠ,ದಿ....
- Advertisement -

More Articles Like This

- Advertisement -
close
error: Content is protected !!