ಸಿಂದಗಿ: ವರಕವಿ ದ.ರಾ ಬೇಂದ್ರೆ ರವರ ಜನ್ಮ ದಿನದ ಪ್ರಯುಕ್ತ ಕರ್ನಾಟಕ ರಾಜ್ಯ ಶಿಕ್ಷಕರ ಸಾಹಿತ್ಯ ಪರಿಷತ್ತು (ರಿ) ಬೆಂಗಳೂರು, ಸ್ವರ್ಣಭೂಮಿ ಫೌಂಡೇಶನ್ ಕರ್ನಾಟಕ ಹಾಗೂ ಇಂಚರ ಸಾಹಿತ್ಯ ಕುಟೀರ, ಕೋಲಾರ ಜಿಲ್ಲೆ ಇವರ ಸಂಯುಕ್ತಾಶ್ರಯದಲ್ಲಿ ಫೆ. 05 ರಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತು ಸಭಾಂಗಣದಲ್ಲಿ ನಡೆಯಲಿರುವ ಬೇಂದ್ರೆ ಹಾಗೂ ಗುರುಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ರಾಜ್ಯ ಮಟ್ಟದ ಕವಿಗೋಷ್ಠಿ ಕಾರ್ಯಕ್ರಮದಲ್ಲಿ ತಾಲೂಕಿನ ಬೋರಗಿ ಗ್ರಾಮದ ಆರಕ್ಷಕ ಮುಖ್ಯಪೇದೆ ಮೌಲಾಲಿ ಕೆ. ಆಲಗೂರ ಇವರಿಗೆ ಸಾಹಿತ್ಯ ಸೇವೆಯನ್ನು ಗುರುತಿಸಿ ಬೇಂದ್ರೆ ಸಾಹಿತ್ಯ ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದು ಕರ್ನಾಟಕ ರಾಜ್ಯ ಶಿಕ್ಷಕರ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಬಿ.ಶಿವಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
More Articles Like This
- Advertisement -