ಭಾರತೀಯ ಜನತಾ ಪಕ್ಷದ ರೈತ ಪರ ನಿಲುವಿನ ವಿರುದ್ಧ ರಾಜಕೀಯ ಪ್ರೇರಿತ ಮಧ್ಯವರ್ತಿಗಳ ಷಡ್ಯಂತ್ರ- ಈರಣ್ಣ ಕಡಾಡಿ

Must Read

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...

ಗಾಣಿಗ ಸಮಾಜ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಸವದತ್ತಿ: ತಾಲೂಕಿನ ಗಾಣಿಗ ಸಮಾಜದ ಎಸ್..ಎಸ್.ಎಲ್.ಸಿ.ಹಾಗೂ ಪಿ.ಯು.ಸಿ .ಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುವುದು ಎಂದು ಸವದತ್ತಿ ತಾಲೂಕಿನ ಗಾಣಿಗ ಸಮಾಜದ ತಾಲೂಕು ಘಟಕದ ಪ್ರಧಾನ...

ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಸಮಾರಂಭ

ಬೆಳಗಾವಿ ಶಿವಬಸವನಗರದ ಶ್ರೀ ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ದಿ. ೨೫ ರಿಂದ ೨೯ ಅಕ್ಟೋಬರ್ ೨೦೨೧ ರವರೆಗೆ ಐದು ದಿನಗಳ...

ನಮ್ಮ ದೇಶದ ಜನಪ್ರಿಯ ಪ್ರಧಾನಿಗಳು ಕೃಷಿ ಕ್ಷೇತ್ರದ ಸುಧಾರಣೆಗಾಗಿ ದೂರದೃಷ್ಟಿಯ ಅನೇಕ ಯೋಜನೆಗಳನ್ನು
ರೂಪಿಸಿದ್ದು, ರೈತರ ಆದಾಯವನ್ನು ೨೦೨೨ ರ ಒಳಗೆ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಕೃಷಿ ಸುಧಾರಣೆಗೆ ಸಂಬಂಧಪಟ್ಟಂತೆ ಕೆಳಗಿನ ಮೂರು ಮಹತ್ವದ ಮಸೂದೆಗಳನ್ನು ಅನುಷ್ಠಾನಕ್ಕೆ ತಂದಿದ್ದಾರೆ ಎಂದು ರೈತ ಮೋರ್ಚಾ ಅಧ್ಯಕ್ಷ, ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ಪತ್ರಿಕಾ ಪ್ರಕಟಣೆಯೊಂದನ್ನು ಹೊರಡಿಸಿರುವ ಅವರು, ಕೇಂದ್ರದ ರೈತ ಪರವಾದ ಕೆಲವು ಅಂಶಗಳನ್ನು ಪ್ರಸ್ತಾಪಿಸಿದ್ದಾರೆ.

 1. ರೈತರ ಉತ್ಪನ್ನ ವ್ಯಾಪಾರ ಮತ್ತು ವಾಣಿಜ್ಯ (ಉತ್ತೇಜನ ಮತ್ತು ಸೌಲಭ್ಯ) ಮಸೂದೆ.
 2. ರೈತರ ಬೆಳೆಗಳಿಗೆ ಬೆಲೆ ಭರವಸೆ ಮತ್ತು ಸೇವಾ ಒಪ್ಪಂದ (ಕಲ್ಯಾಣ ಮತ್ತು ರಕ್ಷಣೆ) ಮಸೂದೆ.
 3. ಅಗತ್ಯ ಸರಕುಗಳ (ತಿದ್ದುಪಡಿ) ಮಸೂದೆಗಳನ್ನು ಕೇಂದ್ರ ಜಾರಿಗೆ ತಂದಿದೆ

ಆದರೆ, ಇದರ ವಿರುದ್ಧ ದಲ್ಲಾಳಿಗಳು ಮತ್ತು ಕಮಿಷನ್ ಏಜೆಂಟರು ರಾಜಕೀಯ ದುರುದ್ಧೇಶದೊಂದಿಗೆ, ರೈತರ
ಮುಖವಾಡ ಧರಿಸಿ ನವದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಡಿಸೆಂಬರ್ ೮ ರ ಮಂಗಳವಾರದಂದು ಅನಗತ್ಯವಾಗಿ
ರೈತರನ್ನು ದಾರಿ ತಪ್ಪಿಸಲು ಭಾರತ ಬಂದ್‌ಗೆ ಕರೆ ನೀಡಿದ್ದಾರೆ.

ರೈತರ ಆದಾಯವನ್ನು ೨೦೨೨ ರೊಳಗೆ ದ್ವಿಗುಣಗೊಳಿಸಲು ಮಾನ್ಯ ಪ್ರಧಾನಮಂತ್ರಿಗಳು ಕೃಷಿ ಮಂತ್ರಾಲಯದ
ಮೂಲಕ ಕೈಗೊಂಡಿರುವ ಕ್ರಮಗಳು.

 • ಬೇವು ಲೇಪಿತ ಯೂರಿಯ. ಇದರಿಂದಾಗಿ ಯೂರಿಯಾ ಗೊಬ್ಬರದ ಕೊರತೆ ನೀಗಿದ್ದು, ಯೂರಿಯ ಗೊಬ್ಬರದ
  ದುರುಪಯೋಗ ಸಂಪೂರ್ಣವಾಗಿ ನಿಂತಿದೆ.
 • ೧೮,೦೦೦ ಹಳ್ಳಿಗಳು ಸ್ವಾತಂತ್ರ ಬಂದ ೭೦ ವರ್ಷಗಳ ನಂತರವೂ ವಿದ್ಯುತ್ ಸಂಪರ್ಕ ಪಡೆದಿರಲಿಲ್ಲ. ಈ ಸಮಸ್ಯೆ ಪರಿಹರಿಸಲಾಗಿದೆ.
 • “ಬೀಜ್ ಸೆ ಬಾಜಾರ್ ತಕ್ – ಬಿತ್ತನೆ ಬೀಜದಿಂದ ಮಾರುಕಟ್ಟೆ ವರೆಗೆ’ ಎನ್ನುವ ಕೃಷಿ ಸುಧಾರಣೆಯ ಘೋಷಣೆಯ ಜೊತೆಗೆ ರೈತರ ಇಳುವರಿಗೆ ಉತ್ತಮ ದರ ನಿಗದಿಪಡಿಸಿ ೨೦೨೨ ರ ವೇಳೆಗೆ ರೈತರ ಆದಾಯ  ದ್ವಿಗುಣಗೊಳಿಸುವ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ.
 • ಕಿಸಾನ್ ಕಾರ್ಡುಗಳ ವಿತರಣೆಯ ಮೂಲಕ ರೈತರಿಗೆ ಬ್ಯಾಂಕ್ ಸೌಲಭ್ಯಗಳ ಅವಕಾಶಗಳ ವಿಸ್ತರಣೆ.
 • ರಸಗೊಬ್ಬರ ಉತ್ಪಾದನೆಯಲ್ಲಿ ಸ್ವಾವಲಂಬನೆ. ಈಗಾಗಲೇ ಆರು ಬೃಹತ್ ರಸಗೊಬ್ಬರ ಉತ್ಪಾದನಾ ಘಟಕಗಳ ಸ್ಥಾಪನೆಗೆ ರೂ. ೪೮,೦೦೦ ಕೋಟಿ ಬಂಡವಾಳ ಹೂಡಲಾಗಿದೆ.
 • ಮಣ್ಣಿನ ಫಲವತ್ತತೆ ಕಾರ್ಡ್ ವಿತರಣೆ ಹಾಗೂ ಮಣ್ಣಿನ ಫಲವತ್ತತೆ ಪರೀಕ್ಷಾ ಪ್ರಯೋಗಾಲಯ ಸ್ಥಾಪನೆ.
 • ಪ್ರಧಾನಮಂತ್ರಿ ಫಸಲ್ ವಿಮಾ ಯೋಜನೆ.
 • ಹೀಗೆ ರೈತರ ಹಿತದಲ್ಲಿ ಕೇಂದ್ರವು ಅನೇಕ ಯೋಜನೆಗಳನ್ನು ಹಾಕಿಕೊಂಡಿದ್ದು ರೈತರು ಅದನ್ನು ಅರ್ಥಮಾಡಿಕೊಂಡು ವಿಪಕ್ಷಗಳ ಪಿತೂರಿಗೆ ಬಲಿಯಾಗಬಾರದು ಎಂದು ಮನವಿ ಮಾಡಿಕೊಂಡಿದ್ದಾರೆ.
- Advertisement -
- Advertisement -
- Advertisement -

Latest News

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...
- Advertisement -

More Articles Like This

- Advertisement -
close
error: Content is protected !!