ಸವದತ್ತಿ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಬೆಳಗಾವಿ ಮತ್ತು ತಾಲೂಕಾ ಶಾಖೆ ಸವದತ್ತಿ ಹಾಗೂ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಜಿಲ್ಲಾ ಘಟಕ ಬೆಳಗಾವಿ ಮತ್ತು ತಾಲೂಕಾ ಘಟಕ ಸವದತ್ತಿ ಇವರ ಸಂಯುಕ್ತಾಶ್ರಯದಲ್ಲಿ ರಾಜ್ಯ ಮತ್ತು ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಹಾಗೂ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ದಿನಾಂಕ 21.3.2021 ರವಿವಾರ ರಂದು ಮುಂಜಾನೆ 10.ಘಂಟೆಗೆ ಸ್ಥಳೀಯ ಮಾಮನಿ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ
ಶಾಸಕ ಹಾಗೂ ವಿಧಾನಸಭೆ ಉಪ ಸಭಾದ್ಯಕ್ಷ ಆನಂದ ಚ ಮಾಮನಿಯವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯಾದ್ಯಕ್ಷರಾದ ಸಿ ಎಸ್ ಷಡಕ್ಷರಿ ಪ್ರತಿಭಾ ಪುರಸ್ಕಾರ ವಿತರಿಸಲಿದ್ದಾರೆ.
ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಜಗದೀಶ ಗೌಡಪ್ಪ ಪಾಟೀಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಹುಬ್ಬಳ್ಳಿ ಹೆಸ್ಕಾಂ ವ್ಯವಸ್ಥಾಪಕ ನಿರ್ದೆಶಕರಾದ ಭಾರತಿ ಡಿ. ಕರ್ನಾಟಕ ಲೋಕಾಯುಕ್ತ ಬೆಳಗಾವಿ ಪೋಲಿಸ್ ಅಧೀಕ್ಷಕರಾದ ಯಶೋಧಾ ವಂಟಗೂಡಿ. ಸ್ಥಳೀಯ ರೇಣುಕಾ ಯಲ್ಲಮ್ಮಾ ಶಿಕ್ಷಣ ಸಂಸ್ಥೆ ಕಾರ್ಯದರ್ಶಿಗಳಾದ ರತ್ನಾ ಆನಂದ ಮಾಮನಿ. ಬೆಳಗಾವಿ ಪ್ರಾದೇಶಿಕ ಆಯುಕ್ತರಾದ ನಜ್ಮಾ ಪೀರಜಾದೆ.ಆರ್ ಎಫ್ ಓ ಸವದತ್ತಿಯ ಸುನಿತಾ ನಿಂಬರಗಿ. ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಾಂಚನಾ ಅಮಠೆ. ಕ.ರಾ.ಪ್ರಾ.ಶಾ.ಶಿ ಸಂಘ ರಾಜ್ಯ ಸಂಘಟನಾ ಕಾರ್ಯದರ್ಶಿ ಗಳಾದ ಪ್ರಮಿಳಾ ಟಿ ಕಾಮನಹಳ್ಳಿ.ಬೆಳಗಾವಿ ಕ.ರಾ.ಪ್ರಾ.ಶಾ.ಶಿ ಸಂಘದ ಜಿಲ್ಲಾ ಅಧ್ಯಕ್ಷರಾದ ಜಯಕುಮಾರ ಹೆಬಳಿ ವೇದಿಕೆ ಮೇಲೆ ಉಪಸ್ಥಿತರಿರುವರು.
ಇದೇ ಸಂದರ್ಭದಲ್ಲಿ ಮಹಿಳಾ ಸಬಲೀಕರಣ ಕುರಿತು ಸಾಹಿತಿ ಆಶಾ ಯಮಕನಮರಡಿ ಯವರು ಉಪನ್ಯಾಸ ನೀಡಲಿದ್ದಾರೆ ಎಂದು ಸವದತ್ತಿ ತಾಲೂಕ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸುರೇಶ ಬೆಳವಡಿ ಪ್ರಕಟಣೆಯಲ್ಲಿ ತಿಳಿಸಿದರು.
ಅವರು ಮಾಮನಿ ಕಲ್ಯಾಣ ಮಂಟಪದಲ್ಲಿ ಕಾರ್ಯಕ್ರಮದ ಪೂರ್ವ ಸಿದ್ದತೆಯನ್ನು ವೀಕ್ಷಿಸಿ ಪದಾಧಿಕಾರಿಗಳೊಂದಿಗೆ ಜರುಗಿಸಿದ ಸಭೆಯಲ್ಲಿ ಮಾತನಾಡಿದರು.ಈ ಸಂದರ್ಭದಲ್ಲಿ ರಾಜ್ಯ ಸರಕಾರಿ ನೌಕರರ ಸಂಘದ ತಾಲೂಕ ಘಟಕದ ಅಧ್ಯಕ್ಷ ಆನಂದಕುಮಾರ ಮುಗಬಸವ ಹಾಗೂ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕಾ ಜಿಲ್ಲಾ ಅಧ್ಯಕ್ಷ ಜಯಕುಮಾರ ಹೆಬಳಿ ಜಿಲ್ಲಾ ಸಂಘಟನಾ ಕಾರ್ಯದರ್ಶಿಗಳಾದ ನಾಗರಾಜ ಮೆಳವಂಕಿ. ಜಿಲ್ಲಾ ನೌಕರರ ಸಂಘದ ಖಜಾಂಚಿ ವೈ.ಬಿ.ಪೂಜೇರ.ತಾಲೂಕ ನೌಕರರ ಸಂಘದ ಕಾರ್ಯದರ್ಶಿ ಅಮೃತ ಸಾಣಿಕೊಪ್ಪ.ತಾಲೂಕ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಎಫ್.ಜಿ.ನವಲಗುಂದ. ಸಂಘಟನಾ ಕಾರ್ಯದರ್ಶಿ ಜಿ.ವಿ.ಕುರಿ. ಆಯ್.ಎಸ್.ಕಲಗೌಡರ. ಶಿಕ್ಷಕರ ಸಂಘದ ಪ್ರತಿನಿಧಿಗಳಾದ ಡಿ.ವಿ.ಮೇಟಿ.ಎಚ್.ಆರ್.ಪೆಟ್ಲೂರ.ಸಿ.ವಿ.ಬಾರ್ಕಿ.ಎಂ.ಎಸ್.ಹೊಂಗಲ.ಎಚ್.ಆರ್.ರೂಗಿ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿಗಳಾದ ಬಿ.ಎನ್.ಹೊಸೂರ.ನೌಕರರ ಸಂಘದ ಪ್ರತಿನಿಧಿಗಳಾದ ಎಂ.ವ್ಹಿ.ಕಾರದಗಿ ಮೊದಲಾದವರು ಉಪಸ್ಥಿತರಿದ್ದರು.