ಮಾಸ್ಕ್ ಧರಿಸದೇ ನಿಯಮ ಉಲ್ಲಂಘನೆ: 45 ಲಕ್ಷ ದಂಡ ಸಂಗ್ರಹಿಸಿದ ಮುಂಬೈ ಪೊಲೀಸರು!

Must Read

ಆಹಾರ ಧಾನ್ಯದ ಕಿಟ್ ವಿತರಣೆ

ಸವದತ್ತಿ - ಕೋರೋನಾ ರೋಗ ಹರಡದಂತೆ ನೋಡಿಕೊಳ್ಳಲು ಸರಕಾರ ಲಾಕ್ ಡೌನ ಮಾಡಿದ್ದರಿಂದ ನಮ್ಮ ಬ್ರಾಹ್ಮಣ ಸಮಾಜದ ಕುಟುಂಬದವರಿಗೆ ಜೀವನ ಸಾಗಿಸಲು ತುಂಬಾ ಕಷ್ಟವಾಗಿದ್ದು ಆದ್ದರಿಂದ...

ಅಧ್ಯಾತ್ಮ ವಿದ್ಯೆ ಮಕ್ಕಳ ಮೂಲ ಶಿಕ್ಷಣವಾಗಬೇಕು

ಭೂಮಿಯ ಮೇಲಿರುವ ಮಾಯೆ ಎಲ್ಲರಿಗೂ ಮಂಕು ಮಾಡುತ್ತದೆ ಎನ್ನುವುದಕ್ಕೆ ನಮ್ಮ ಅನುಭವವೇ ಸಾಕ್ಷಿ. ಇಲ್ಲಿ ಯಾರೋ ಹಿಂದೆ ಅನುಭವಿಸಿ, ಹೇಳಿ, ಬರೆದಿಟ್ಟ ಸತ್ಯವನ್ನು ನಾವು ಬಹಳ...

ಅರುಣ ಕಿರಣ ಪ್ರತಿದಿನ

. . .🕉. . . . || ಶ್ರೀ ಗುರುಭ್ಯೋ ನಮಃ || || ಓ೦ ಗ೦ ಗಣಪತಯೇ ನಮಃ || 🙏ಶುಭೋದಯ🙏 16: 06: 2021 ಬುಧವಾರ ಕಲಿಯುಗಾಬ್ದ...

ಮುಂಬೈ: ಮಹಾರಾಷ್ಟ್ರ ಮತ್ತು ಕೇರಳ ರಾಜ್ಯದಲ್ಲಿ  ಮತ್ತೆ ಕೋವಿಡ್ ಸೋಂಕು ಪ್ರಕರಣ ಹೆಚ್ಚಳವಾಗುತ್ತಿದ್ದು, ಮಹರಾಷ್ಟ್ರದ ಮುಂಬೈ ನಗರವೊಂದರಲ್ಲಿ ಮಾಸ್ಕ್ ಧರಿಸದೇ  ನಿಯಮ ಉಲ್ಲಂಘನೆ ಮಾಡಿದವರಿಂದ ಪೊಲೀಸರು ಸುಮಾರು 45 ಲಕ್ಷ ರೂ. ದಂಡ ವಸೂಲಿ ಮಾಡಿದ್ದಾರೆ.

ಸೋಮವಾರ ಪೊಲೀಸರು ದಂಡ ಸಂಗ್ರಹದ ಮಾಹಿತಿ ನೀಡಿದ್ದು,  ಬಿಎಂಸಿ, ಪಶ್ಚಿಮ ರೈಲ್ವೆ ಮತ್ತು ಕೇಂದ್ರ ರೈಲ್ವೆಯು ಮಾಸ್ಕ್‌ ಧರಿಸದ 22,976 ಜನರಿಂದ ಸುಮಾರು 45 ಲಕ್ಷ ರೂ. ದಂಡ ಸಂಗ್ರಹಿಸಿದೆ. ರವಿವಾರ 14,100 ಜನರಿಗೆ ಒಟ್ಟು 28 ಲಕ್ಷ ರೂ.ಗಳ ದಂಡ ವಿಧಿಸಲಾಗಿದ್ದು, ಶನಿವಾರ 16,154 ಮಾಸ್ಕ್‌ ಧರಿಸದ ವ್ಯಕ್ತಿಗಳಿಂದ 32 ಲಕ್ಷ ರೂ. ಸಂಗ್ರಹಿಸಲಾಗಿದೆ ಎಂದು ತಿಳಿದು ಬಂದಿದೆ.

ವಾರಾಂತ್ಯದಲ್ಲಿ ಕೇವಲ ಬಿಎಂಸಿಯು 60 ಲಕ್ಷ ರೂ. ದಂಡವನ್ನು ಸಂಗ್ರಹಿಸಿದೆ. ಮಾರ್ಚ್ 2020 ರಿಂದ, ಇದುವರೆಗೆ 15 ಲಕ್ಷಕ್ಕೂ ಹೆಚ್ಚು ಮಾಸ್ಕ್‌ ಧರಿಸದ ಮುಂಬೈ ನಾಗರಿಕರನ್ನು ಪೊಲೀಸರು ಪತ್ತೆಹಚ್ಚಿ ದಂಡ ವಿಧಿಸಿದ್ದಾರೆ ಮತ್ತು 30.5 ಕೋಟಿ ರೂ. ದಂಡವನ್ನು ಪಾವತಿಸಲಾಗಿದೆ.ದಂಡ ಪಾವತಿಸಲು ಸಾಧ್ಯವಾಗದಿದ್ದರೆ ರಸ್ತೆ ಗುಡಿಸುವಂತಹ ಸಮುದಾಯ ಸೇವೆಗಳನ್ನು ಸಹ ಮಾಡಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -
- Advertisement -
- Advertisement -

Latest News

ಆಹಾರ ಧಾನ್ಯದ ಕಿಟ್ ವಿತರಣೆ

ಸವದತ್ತಿ - ಕೋರೋನಾ ರೋಗ ಹರಡದಂತೆ ನೋಡಿಕೊಳ್ಳಲು ಸರಕಾರ ಲಾಕ್ ಡೌನ ಮಾಡಿದ್ದರಿಂದ ನಮ್ಮ ಬ್ರಾಹ್ಮಣ ಸಮಾಜದ ಕುಟುಂಬದವರಿಗೆ ಜೀವನ ಸಾಗಿಸಲು ತುಂಬಾ ಕಷ್ಟವಾಗಿದ್ದು ಆದ್ದರಿಂದ...
- Advertisement -

More Articles Like This

- Advertisement -
close
error: Content is protected !!