spot_img
spot_img

ಮೂಡಲಗಿ ಪಿಕೆಪಿಎಸ್ ಅಮೃತ ಮಹೋತ್ಸವ ಸಮಾರಂಭ

Must Read

- Advertisement -

ಮೂಡಲಗಿ – ಸ್ಥಳೀಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ೭೫ ನೇ ವರ್ಷದ ಸಂದರ್ಭದಲ್ಲಿ ಅಮೃತ ಮಹೋತ್ಸವ ಸಮಾರಂಭವನ್ನು ದಿ. ೨೭ ರಂದು ನಗರದ ಬಸವ ರಂಗ ಮಂಟಪದಲ್ಲಿ ಸಾಯಂಕಾಲ ೪ ಗಂಟೆಗೆ ಹಮ್ಮಿಕೊಳ್ಳಲಾಗಿದೆ.

ಸಮಾರಂಭದ ದಿವ್ಯ ಸಾನ್ನಿಧ್ಯವನ್ನು ಶ್ರೀ ದತ್ತಾತ್ರಯ ಬೋಧ ಸ್ವಾಮೀಜಿ, ಕೊಪ್ಪಳದ ಶ್ರೀ ಅಭಿನವ ಗವಿಸಿದ್ಧೇಶ್ವರ ಮಹಾಸ್ವಾಮೀಜಿ, ಸುಣಧೋಳಿಯ ಶ್ರೀ ಶಿವಾನಂದ ಮಹಾಸ್ವಾಮೀಜಿ, ಭಾಗೋಜಿಕೊಪ್ಪದ ಡಾ. ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯರು ಹಾಗೂ ಅಥಣಿಯ ಶ್ರೀ ಚನ್ನಬಸವ ಮಹಾಸ್ವಾಮೀಜಿ ವಹಿಸುವರು.

ಉದ್ಘಾಟನೆಯನ್ನು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ನೆರವೇರಿಸುವರು.

- Advertisement -

ಸಮಾರಂಭದ ಅಧ್ಯಕ್ಷತೆಯನ್ನು ಪಿಕೆಪಿಎಸ ಅಧ್ಯಕ್ಷ ಸಂದೀಪ ಸೋನವಾಲಕರ ವಹಿಸುವರು.

ಮುಖ್ಯ ಅತಿಥಿಗಳಾಗಿ ಸಹಕಾರ ಸಚಿವ ಎಸ್ ಟಿ ಸೋಮಶೇಖರ, ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, ಸಂಸದೆ ಶ್ರೀಮತಿ ಮಂಗಳಾ ಅಂಗಡಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಆಗಮಿಸಲಿದ್ದಾರೆ.

ಸಮಾರಂಭದ ಸವಿ ನೆನಪಿನ ಕೃತಿ ‘ ಮೂಡಲ ಬೆಳಕು ‘ ಕೃತಿಯನ್ನು ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ ವಿ. ಕತ್ತಿ ಬಿಡುಗಡೆ ಮಾಡಲಿದ್ದಾರೆ.

- Advertisement -

ಅತಿಥಿಗಳಾಗಿ ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎಸ್ ಜಿ ಢವಳೇಶ್ವರ,ಪುರಸಭಾ ಅಧ್ಯಕ್ಷ ಹನುಮಂತ ಗುಡ್ಲಮನಿ ಸೇರಿದಂತೆ ಸಹಕಾರ ಸಂಘಗಳ ಅಧಿಕಾರಿಗಳು, ಬ್ಯಾಂಕ್ ಸದಸ್ಯರು ಆಗಮಿಸಲಿದ್ದಾರೆ.

- Advertisement -
- Advertisement -

Latest News

ದಿನಕ್ಕೊಬ್ಬ ಶರಣ ಮಾಲಿಕೆ

ಕಿನ್ನರಿ ಬ್ರಹ್ಮಯ್ಯ ........................................... 12ನೇ ಶತಮಾನದ ಬಸವಾದಿ ಶಿವಶರಣರ ಕೀರ್ತಿವಾರ್ತೆಯನ್ನು ಕೇಳಿ ಪ್ರಭಾವಿತರಾಗಿ ನಾಡು ಹೊರನಾಡಿನಿಂದ ಅನೇಕ ಜನ ಶರಣರು ಕಲ್ಯಾಣಕ್ಕೆ ಬರಹತ್ತಿದರು. ಬಸವಣ್ಣನವರ ಸಮಕಾಲೀನರಾಗಿದ್ದ ಶರಣರಾದ ಗುಜರಾತದಿಂದ...
- Advertisement -

More Articles Like This

- Advertisement -
close
error: Content is protected !!
Join WhatsApp Group