spot_img
spot_img

ರೈತರು ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡಬೇಕು: ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

Must Read

spot_img
- Advertisement -

ಮೂಡಲಗಿಯಲ್ಲಿ ಕೆ.ಎಂ.ಎಫ್ ದಿಂದ ವಿವಿಧ ಫಲಾನುಭವಿಗಳಿಗೆ ಚೆಕ್ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ರೈತರು ಕೃಷಿಯೊಂದಿಗೆ ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡಿದರೆ ಆರ್ಥಿಕಾಭಿವೃದ್ಧಿ ಹೊಂದಲು ಸಾಧ್ಯವಾಗುವುದು ಎಂದು ಕೆ.ಎಂ.ಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.

ಶುಕ್ರವಾರದಂದು ಪಟ್ಟಣದ ತಮ್ಮ ಕಾರ್ಯಾಲಯದ ಆವರಣದಲ್ಲಿ ಕೆ.ಎಂ.ಎಫ್ ದಿಂದ ನಡೆದ ಸರಳ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ 8.50 ಲಕ್ಷ ರೂ ಮೊತ್ತದ ಚೆಕ್ಕುಗಳನ್ನು ವಿತರಿಸಿ ಅವರು ಮಾತನಾಡಿದರು.

- Advertisement -

ರೈತರ ಆರ್ಥಿಕಾಭಿವೃದ್ಧಿಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಸಾಕಷ್ಟು ರೈತ ಪರ ಯೋಜನೆಗಳನ್ನು ಅನುಷ್ಠಾನಗೊಳಿಸಿವೆ. ಅವುಗಳ ಸೌಲಭ್ಯಗಳನ್ನು ಪಡೆಯುವ ಮೂಲಕ ರೈತರು ಕೃಷಿ ಮತ್ತು ಹೈನುಗಾರಿಕೆಯಲ್ಲಿ ಉತ್ತಮ ಸಾಧನೆಗಳನ್ನು ಮಾಡಬೇಕು. ನಮ್ಮ ದೇಶ ಕೃಷಿ ಪ್ರಧಾನವಾದುದ್ದರಿಂದ ಹೈನುಗಾರಿಕೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹೇಳಿದರು.

ಕೆ.ಎಂ.ಎಫ್ ದಿಂದ ಹಾಲು ಉತ್ಪಾದಕ ಸಹಕಾರಿ ಸಂಘಗಳಿಗೆ ಕಟ್ಟಡ ನಿರ್ಮಾಣಕ್ಕೆ ಅನುದಾನ ನೀಡಲಾಗುತ್ತಿದೆ. ಜೊತೆಗೆ 50 ಸಾವಿರ ರೂ. ಮೊತ್ತದ ರಾಸುಗಳಿಗೆ ವಿಮಾ ಸೌಲಭ್ಯವನ್ನು ಒದಗಿಸಿಕೊಡಲಾಗುತ್ತಿದೆ. ರೈತರ ಆರ್ಥಿಕಾಭಿವೃದ್ಧಿಗೆ ಮತ್ತು ಸ್ವಾಲಂಬಿ ಬದುಕು ಕಲ್ಪಿಸಿಕೊಡಲು ಕೆ.ಎಂ.ಎಫ್ ಬದ್ಧವಿದ್ದು, ಈ ದಿಸೆಯಲ್ಲಿ ರೈತರ ಸೇವೆಯನ್ನು ನಮ್ಮ ಸಂಸ್ಥೆಯು ಮಾಡುತ್ತಿದೆ ಎಂದರು.

- Advertisement -

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಇದೇ ಸಂದರ್ಭದಲ್ಲಿ ಮುನ್ಯಾಳ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ 2.50 ಲಕ್ಷ ರೂ, ನಾಗನೂರ ಹಾಲು ಉತ್ಪಾದಕರ ಸಹಕಾರಿ ಸಂಘದ ಕಟ್ಟಡಕ್ಕಾಗಿ 1.70 ಲಕ್ಷ ರೂ ಗಳ ಅನುದಾನವನ್ನು ಕೆ.ಎಂ.ಎಫ್ ದಿಂದ ವಿತರಿಸಿದರು. ಜಿಲ್ಲಾ ಹಾಲು ಒಕ್ಕೂಟದಿಂದ ಆರು ಜನ ಫಲಾನುಭವಿಗಳಿಗೆ ರಾಸು ವಿಮೆಯ ತಲಾ 50 ಸಾವಿರ ರೂ ಗಳಂತೆ ಮೂರು ಲಕ್ಷ ರೂ ಮೊತ್ತದ ಚೆಕ್ಕುಗಳನ್ನು ವಿತರಿಸಿದರು. ಜಿಲ್ಲಾ ಹಾಲು ಒಕ್ಕೂಟದ ಅಡಿಯಲ್ಲಿ ಕಲ್ಯಾಣ ಸಂಘದಿಂದ 13 ಫಲಾನುಭವಿಗಳಿಗೆ ತಲಾ ಹತ್ತು ಸಾವಿರಗಳಂತೆ 1.30 ಲಕ್ಷ ರೂಗಳ ಚೆಕ್ಕುಗಳನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಹಾಲು ಒಕ್ಕೂಟದ ನಿರ್ದೇಶಕ ಮಲ್ಲು ಪಾಟೀಲ, ಮೂಡಲಗಿ ಉಪಕೇಂದ್ರ ಅಧಿಕಾರಿ ರವಿ ತಳವಾರ, ವಿಸ್ತರಣಾಧಿಕಾರಿ ವಿಠ್ಠಲ ಲೋಕುರಿ, ಹಾಲು ಉತ್ಪಾದಕರ ಸಹಕಾರಿ ಸಂಘಗಳ ನಿರ್ದೇಶಕರು, ಹಲವು ಗಣ್ಯರು ಉಪಸ್ಥಿತರಿದರು.

- Advertisement -
- Advertisement -

Latest News

ಶ್ರೀ ಬಸವೇಶ್ವರ ಸೊಸಾಯಿಟಿಗೆ ರಜತ ಮಹೋತ್ಸವ ಸಂಭ್ರಮ

ಮೂಡಲಗಿ -ಪಟ್ಟಣದ ಶ್ರೀ ಬಸವೇಶ್ವರ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸಾಯಿಟಿಗೆ ೨೫ ವರ್ಷಗಳು ಪೂರೈಸಿದ ಹಿನ್ನೆಲೆಯಲ್ಲಿ ಇದೇ ದಿ. ೨೫ ರಂದು ಸಂಭ್ರಮದ ಬೆಳ್ಳಿ ಮಹೋತ್ಸವ...
- Advertisement -

More Articles Like This

- Advertisement -
close
error: Content is protected !!
Join WhatsApp Group