spot_img
spot_img

ವಿದ್ಯಾರ್ಥಿಗಳನ್ನು ತಿದ್ದುವ ಅಧಿಕಾರ ಶಿಕ್ಷಕರಿಗಿದೆ – ಆನಂದ ಚಂ. ಮಾಮನಿ, ಶಾಸಕರು

Must Read

spot_img

ಸವದತ್ತಿ: ತರಗತಿಯಲ್ಲಿ ಶಿಕ್ಷಕರು ಬೋಧಿಸುವ ಪಾಠಗಳನ್ನು ವಿದ್ಯಾರ್ಥಿಗಳು ಮನಃಪೂರ್ವಕವಾಗಿ ಕಲಿಯಬೇಕು. ಶಿಕ್ಷಣವೇ ಮಾನವನ ಬದುಕಿಗೆ ಶಕ್ತಿಯನ್ನು ನೀಡಬಲ್ಲದು. ಅದಕ್ಕಾಗಿ ಕಲಿಕೆಯ ಹಂತದಲ್ಲಿ ವಿದ್ಯಾರ್ಥಿಗಳು ಗಂಭೀರವಾಗಿ ಪರಿಶ್ರಮಪಟ್ಟು ಕಲಿಯಬೇಕು ಎಂದು ಕರ್ನಾಟಕ ವಿಧಾನಸಭೆಯ ಉಪ ಸಭಾಧ್ಯಕ್ಷರೂ, ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರೂ ಹಾಗೂ ಯಲ್ಲಮ್ಮನ ಸವದತ್ತಿ ಕ್ಷೇತ್ರದ ಶಾಸಕರಾದ ಆನಂದ ಚಂದ್ರಶೇಖರ ಮಾಮನಿ ನುಡಿದರು.

ಅವರು ಪಟ್ಟಣದ ಕೆ.ಎಲ್.ಇ.ಸಂಸ್ಥೆಯ ಎಸ್.ವಿ.ಎಸ್. ಬೆಳ್ಳುಬ್ಬಿ ಮಹಾವಿದ್ಯಾಲಯ ಮತ್ತು ಹಳೆಯ ವಿದ್ಯಾರ್ಥಿಗಳ ಸಂಘದ ಸಹಯೋಗದಲ್ಲಿ ಏರ್ಪಡಿಸಿದ “ ಸನ್ಮಾನ ಸಮಾರಂಭ ” ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಮಗುವಿಗೆ ಮೊದಲ ಗುರುವಾಗಿ ತಾಯಿ, ನಂತರದ ಗುರುವಾಗಿ ಶಾಲೆಯಲ್ಲಿ ಶಿಕ್ಷಕರು ಮಕ್ಕಳ ಭವಿಷ್ಯವನ್ನು ರೂಪಿಸುತ್ತಾರೆ.

ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ದೊಡ್ಡದು. ಒಂದೆಡೆ ಸ್ವಾಮೀಜಿಗಳು ಸಮಾಜದ ಓರೆಕೋರೆಗಳನ್ನು ತಿದ್ದಿದರೆ, ಶಿಕ್ಷಕರು ಶಾಲೆಯಲ್ಲಿ ವಿದ್ಯಾರ್ಥಿಗಳನ್ನು ತಿದ್ದುವರು, ಆ ಅಧಿಕಾರ ಶಿಕ್ಷಕರಿಗಿದೆ. ಈ ವಿಚಾರವನ್ನು ಎಲ್ಲ ವಿದ್ಯಾರ್ಥಿಗಳು ನೆನಪಿನಲ್ಲಿಟ್ಟುಕೊಳ್ಳಬೇಕು.

ಇಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಮೊಬೈಲ್ ಮತ್ತು ಟಿ.ವಿ.ಯ ಚಟಕ್ಕೆ ದಾಸರಾಗುತ್ತಿದ್ದಾರೆ. ಈ ಮಾಧ್ಯಮಗಳನ್ನು ಸದುಪಯೋಗಪಡಿಸಿಕೊಳ್ಳುವಲ್ಲಿ ವಿದ್ಯಾರ್ಥಿಗಳ ಜವಾಬ್ದಾರಿ ಹೆಚ್ಚಿದೆ. ಅವಶ್ಯವಿದ್ದಷ್ಟು ಮಾತ್ರ ಮೊಬೈಲ್ ಬಳಕೆ ಮಾಡಿಕೊಳ್ಳಿ ಎಂದು ಕಿವಿ ಮಾತು ಹೇಳಿದರು.

ನಾವು ಶಾಲೆ ಕಲಿಯುವಾಗ ಬಹಳಷ್ಟು ಅನುಕೂಲತೆಗಳಿರಲಿಲ್ಲ. ಆಗ ನಮ್ಮ ಗುರುಗಳು ನಮಗೆ ವಿದ್ಯೆಯ ಜೊತೆಗೆ ಬುದ್ಧಿಯನ್ನು ಹೇಳುತ್ತಿದ್ದರು. ಗುರುಗಳು ಹೇಳುವ ಬುದ್ಧಿ ಮಾತನ್ನು ವಿದ್ಯಾರ್ಥಿಗಳು ಅರ್ಥೈಸಿಕೊಂಡು ಉತ್ತಮ ಪ್ರಜೆಯಾಗುವ ಪ್ರಯತ್ನ ಮಾಡಬೇಕು. ತಂದೆ ತಾಯಿಗಳಿಗೆ ಮತ್ತು ಗುರುಗಳಿಗೆ ನಮ್ಮ ಉಸಿರಿರುವತನಕ ಗೌರವ ಕೊಡುವದನ್ನು ರೂಢಿಸಿಕೊಳ್ಳಬೇಕು ಎಂದು ಹೇಳುತ್ತಾ ತಮಗೆ ಕಲಿಸಿದ ಎಲ್ಲ ಗುರುಗಳನ್ನು ಈ ಸಂದರ್ಭದಲ್ಲಿ ಸ್ಮರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಾವಿದ್ಯಾಲಯದ ಸ್ಥಾನಿಕ ಮಂಡಳಿಯ ಹಿರಿಯ ಸದಸ್ಯರಾದ ಬಿ.ವಿ.ಮಲಗೌಡರ್ ವಹಿಸಿದ್ದರು, ಶಾಂಭವಿ ಬಡಿಗೇರ ಪ್ರಾರ್ಥಿಸಿದರು, ಎಸ್.ಎಂ.ವಾರೆಪ್ಪನವರ್ ಸ್ವಾಗತಿಸಿದರು, ವೇದಿಕೆ ಮೇಲೆ ಹಳೆಯ ವಿದ್ಯಾರ್ಥಿಗಳ ಸಂಘದ ಉಪಾಧ್ಯಕ್ಷರಾದ ಶ್ರೀ ಬಸವರಾಜ ಪುಟ್ಟಿ ಉಪಸ್ಥಿತರಿದ್ದರು. ಪ್ರಾಚಾರ್ಯ ಮಾರುತಿ ಎ. ಡೊಂಬರ ವಂದಿಸಿದರು, ಪ್ರೊ. ಕೆ. ರಾಮರೆಡ್ಡಿ ಕಾರ್ಯಕ್ರಮ ನಿರ್ವಹಣೆ ಮಾಡಿದರು. ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ವಿದ್ಯಾರ್ಥಿಗಳು, ಪ್ರಾಧ್ಯಾಪಕರು ಹಾಗೂ ಹಳೆಯ ವಿದ್ಯಾರ್ಥಿಗಳ ಸಂಘದ ಸದಸ್ಯರು ಉಪಸ್ಥಿತರಿದ್ದರು.

- Advertisement -
- Advertisement -

Latest News

ಸೈನಿಕರಂತೆ ಸದಾ ಸೇವೆ ಸಲ್ಲಿಸುವ ಪೊಲೀಸರ ಕಾರ್ಯ ಸ್ತುತ್ಯರ್ಹ- ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ಸಾರ್ವಜನಿಕರ ನೆಮ್ಮದಿ ಬದುಕಿಗೆ ಪೊಲೀಸರು ರಕ್ಷಕರಾಗಿ ಸೇವೆ ಸಲ್ಲಿಸುತ್ತಿರುವುದು ಸ್ತುತ್ಯರ್ಹವೆಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ ವ್ಯಕ್ತಪಡಿಸಿದರು. ರವಿವಾರದಂದು ತಾಲೂಕಿನ ಕುಲಗೋಡ...
- Advertisement -

More Articles Like This

- Advertisement -
close
error: Content is protected !!