spot_img
spot_img

ವಿವಾದಿತ ಸಿಡಿ ಪ್ರಕರಣ ತನಿಖೆಗೆ ಆಗ್ರಹಿಸಿ ಕೌಜಲಗಿಯಲ್ಲಿ ಪ್ರತಿಭಟನೆ

Must Read

ರಮೇಶ ಜಾರಕಿಹೊಳಿ ಅಭಿಮಾನಿಗಳು ಹಾಗೂ ಬೆಂಬಲಿಗರಿಂದ ರಸ್ತೆ ತಡೆ, ಟೈರ್‍ಗೆ ಬೆಂಕಿ ಹಚ್ಚಿ ಪ್ರತಿಭಟನೆ.

ಗೋಕಾಕ: ರಮೇಶ ಜಾರಕಿಹೊಳಿ ಅವರ ಕೌಜಲಗಿ ಗ್ರಾಮದ ಅಭಿಮಾನಿ ಬಳಗ ಹಾಗೂ ಬೆಂಬಲಿಗರು ಗುರುವಾರದಂದು ವಿವಾದಿತ ಸಿಡಿ ಪ್ರಕರಣದ ತನಿಖೆಯನ್ನು ಸಿಬಿಐ ಅಥವಾ ಸಿಐಡಿಗೆ ವಹಿಸಬೇಕೆಂದು ಆಗ್ರಹಿಸಿ ಕಂದಾಯ ನಿರೀಕ್ಷಕ ಎಮ್.ಆಯ್.ಮಠ ಅವರ ಮುಖಾಂತರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಮನವಿ ಸಲ್ಲಿಸಿದರು.
ಗ್ರಾಮದ ರವಿವರ್ಮ ಚೌಕದಲ್ಲಿ ಸೇರಿದ ರಮೇಶ ಜಾರಕಿಹೊಳಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿ, ಟೈರ್ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿ, ನಕಲಿ ಸಿಡಿ ಸೃಷ್ಟಿಕರ್ತ ದಿನೇಶ ಕಲ್ಲಹಳ್ಳಿ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.ನಂತರ ನಾಡಕಚೇರಿಗೆ ತೆರಳಿ ಕಂದಾಯ ನಿರೀಕ್ಷಕರಿಗೆ ಮನವಿ ಅರ್ಪಿಸಿದರು.

ರಮೇಶ ಜಾರಕಿಹೊಳಿ ಅವರ ಏಳ್ಗೆಯನ್ನು ಸಹಿಸದೇ ಕೆಲ ಕುತಂತ್ರಿಗಳು ಅವರಿಗೆ ಹೆಸರಿಗೆ ಮಸಿ ಬಳಿಯುವ ಕಾರ್ಯವನ್ನು ಮಾಡುತ್ತಿದ್ದಾರೆ. ಮಾಧ್ಯಮಗಳಲ್ಲಿ ಬಿತ್ತರಗೊಳ್ಳುತ್ತಿರುವ ಸಿಡಿಯು ನಕಲಿಯಾಗಿದೆ. ರಮೇಶ ಅವರ ಪ್ರಭಾವ ಕುಗ್ಗಿಸಲು ಸೆಕ್ಸ್ ಸಿಡಿಯನ್ನು ಎಡಿಟ್ ಮಾಡಿ ವರ್ಚಸ್ಸಿಗೆ ಧಕ್ಕೆಯನ್ನು ತರಲಾಗಿದ್ದು, ಅವರ ಜನಪ್ರಿಯತೆಯನ್ನು ಅರಗಿಸಿಕೊಳ್ಳಲಾಗದೇ ಪ್ರಭಾವಿ ವ್ಯಕ್ತಿಗಳು ಷಡ್ಯಂತ್ರ ರೂಪಿಸಿದ್ದು ಸಿಡಿಯ ಬಗ್ಗೆ ಸತ್ಯ ಸಂಗತಿ ಹೊರಬರಬೇಕು. ಈ ಪ್ರಕರಣದ ತನಿಖೆಯನ್ನು ಸಿಬಿಐ ಅಥವಾ ಸಿಐಡಿಗೆ ವಹಿಸಿದಾಗ ನೈಜ ಸಂಗತಿ ಹೊರಬಿಳಲಿದ್ದು ನ್ಯಾಯ ಸಿಗುವ ವಿಶ್ವಾಸವಿದೆ ಎಂದು ಮನವಿ ಪತ್ರದಲ್ಲಿ ತಿಳಿಸಲಾಗಿದೆ.

ಈ ಸಂದರ್ಭದಲ್ಲಿ ಜಿ.ಪಂ ಮಾಜಿ ಸದಸ್ಯರಾದ ಡಾ: ರಾಜೇಂದ್ರ ಸಣ್ಣಕ್ಕಿ, ಪರಮೇಶ್ವರ ಹೊಸಮನಿ, ತಾ.ಪಂ ಸದಸ್ಯ ಎಸ್.ವಾಯ್.ಹಿರೇಮೇತ್ರಿ, ಮುಖಂಡರಾದ ಎ.ಎಲ್.ದಳವಾಯಿ, ಎಸ್.ಬಿ.ಕೌಜಲಗಿ, ಶಿವು ಲೋಕನ್ನವರ, ಎಮ್.ಆಯ್.ಪಟ್ಟಣಶೆಟ್ಟಿ, ಎಮ್.ಎನ್.ಶಿವನಮಾರಿ, ಜಗದೀಶ ಭೋವಿ, ನೀಲಪ್ಪ ಕೇವಟಿ, ರಾಯಪ್ಪ ಬಳೋಲದಾರ, ವೆಂಕಟೇಶ ದಳವಾಯಿ, ರಾಮಪ್ಪ ಈಟಿ, ಬಸು ಜೋಗಿ, ಸಿದ್ದಪ್ಪ ಹಳ್ಳೂರ, ಯಲ್ಲಪ್ಪ ದಾನನ್ನವರ, ಅಶೋಕ ಪೂಜೇರಿ ಅಶೋಕ ಹೊಸಮನಿ, ಸೈದುಸಾಬ ನಾಗರಾರ್ಚಿ ಭೀಮಶಿ ಉದ್ದಪ್ಪನವರ, ಈರಪಣ್ಣಾ ಬಿಸಗುಪ್ಪಿ, ರಮೇಶ ದಳವಾಯಿ ಸೇರಿದಂತೆ ಗ್ರಾ.ಪಂ ಸದಸ್ಯರು, ಪಿಕೆಪಿಎಸ್ ಸದಸ್ಯರು ಸೇರಿದಂತೆ ಅನೇಕರು ಇದ್ದರು.

- Advertisement -
- Advertisement -

Latest News

ಸುಣಧೋಳಿ ಮಹಿಳಾ ಕ್ರೆಡಿಟ್ ಸೌಹಾರ್ದಗೆ ೭೬.೦೭ ಲಕ್ಷ ರೂ ಲಾಭ

ಮೂಡಲಗಿ: ಸುಣಧೋಳಿ ಮಹಿಳಾ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ೨೦೨೩ರ ಮಾರ್ಚ ಅಂತ್ಯಕ್ಕೆ ರೂ.೭೬.೦೭ ಲಕ್ಷ ಲಾಭವನ್ನು ಗಳಿಸಿ ಪ್ರಗತಿಯಲ್ಲಿ  ಸಾಗುತ್ತಿದೆ ಎಂದು ಸಹಕಾರಿಯ ಅಧ್ಯಕ್ಷೆ...
- Advertisement -

More Articles Like This

- Advertisement -
close
error: Content is protected !!