ಮೂಡಲಗಿ : ಬಲಿಷ್ಠ ಪ್ರಜಾಪ್ರಭುತ್ವ ಮೌಲ್ಯ ಗಳಿಗೆ ನಮ್ಮ ದೇಶದ ಶ್ರೇಷ್ಠ ಸಂವಿಧಾನವೇ ಆಧಾರ ಸ್ತಂಭವಾಗಿದೆ. ಪವಿತ್ರ ಸಂವಿಧಾನದ ಮೌಲ್ಯಗಳನ್ನು ಸದಾ ವೈವಿಧ್ಯತೆ ಹಾಗೂ ಅನನ್ಯತೆಗಳನ್ನು ಎತ್ತಿಹಿಡಿಯೋಣ. ಈ ಮೂಲಕ ರಾಷ್ಟ್ರದ ಅಭ್ಯುದಯಕ್ಕೆ ಶ್ರಮಿಸೋಣ ಎಂದು ಬಿಡಿಸಿಸಿ ಬ್ಯಾಂಕ್ ನಿರ್ದೆಶಕ ಸತೀಶ ಕಡಾಡಿ ಹೇಳಿದರು.
ರವಿವಾರ ಜ 26 ರಂದು ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘ ನಿ. ಇದರ ಆಡಳಿತ ಕಛೇರಿಯಲ್ಲಿ76ನೇ ಗಣರಾಜ್ಯೋತ್ಸವದ ನಿಮಿತ್ತ ಭಾರತ ಮಾತೆ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ ಅವರ ಭಾವಚಿತ್ರಕ್ಕೆ ಬಿಡಿಸಿಸಿ ಬ್ಯಾಂಕ್ ನಿರ್ದೆಶಕ ಸತೀಶ ಕಡಾಡಿ ಅವರು ಪೂಜೆ ಸಲ್ಲಿಸಿ, ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದರು.
ಸಹಕಾರಿಯ ಉಪಾಧ್ಯಕ್ಷ ಶ್ರೀಶೈಲ ತುಪ್ಪದ, ನಿರ್ದೇಶಕರಾದ ಪರಪ್ಪ ಮಳವಾಡ, ಶಿವಪ್ಪ ಗೋಸಬಾಳ,ಸೋಮನಿಂಗ ಹಡಗಿನಾಳ, ಸಿದ್ದಪ್ಪ ಹೆಬ್ಬಾಳ, ಸಹದೇವ ಹೆಬ್ಬಾಳ, ಪ್ರಭು ಕಡಾಡಿ, ಅಡಿವೆಪ್ಪ ಕುರಬೇಟ, ಮಲ್ಲಪ್ಪ ಹೆಬ್ಬಾಳ, ಹಿರಿಯ ಶಾಖಾ ವ್ಯವಸ್ಥಾಪಕರಾದ ಹಣಮಂತ ಕಲಕುಟ್ರಿ, ಪರಪ್ಪ ಗಿರೆಣ್ಣವರ, ಶಿವಾನಂದ ಬಡಿಗೇರ, ದೊಡ್ಡಪ್ಪ ಉಜ್ಜಿನಕೊಪ್ಪ ಸೇರಿದಂತೆ ಸದಸ್ಯರು ಹಾಗೂ ಸಿಬ್ಬಂದಿ ವರ್ಗದವರೂ ಉಪಸ್ಥಿತರಿದ್ದರು..