ಶಿಕ್ಷಕರು ಮತ್ತು ಇಲಾಖೆಯ ಸಂಪರ್ಕದ ಕೊಂಡಿಯಾಗಿ ಶಿಕ್ಷಕರ ಸಂಘ ಶ್ರಮಿಸಲಿ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

Must Read

25 ಸಾವಿರ ಮತಗಳಿಂದ ಬಿಜೆಪಿ ಗೆಲ್ಲುತ್ತದೆ – ಜೊಲ್ಲೆ ವಿಶ್ವಾಸ

ಸಿಂದಗಿ: ಎರಡು ಬಾರಿ ಚುನಾಯಿತರಾದ ರಮೇಶ ಭೂಸನೂರ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲಿ ಭಾಜಪ ಅಧಿಕಾರದಲ್ಲಿದೆ ಕ್ಷೇತ್ರದ ಅಭಿವೃದ್ಧಿ ದಿಸೆಯಲ್ಲಿ...

“ಕಲಾಸೃಷ್ಟಿ” ಆರ್ಟ್ ವರ್ಕ್ ಗೆ ಚಾಲನೆ ನೀಡಿದ ಲೋಕಲ್ ಲೀಡರ್ ನಟ ಕಲ್ಮೇಶ್

ಬಾಗಲಕೋಟೆ: ಇದೆ ಅಕ್ಟೋಬರ್ ೧೫ ರಂದು, ಗದ್ದನಕೇರಿಯಲ್ಲಿ "ಕಲಾಸೃಷ್ಟಿ" ಆರ್ಟ್ ವರ್ಕ್ ಪ್ರಾರಂಭವಾಯಿತು. ಇದನ್ನು ನಟ ಕಲ್ಮೇಶ್, ಬಾಗಲಕೋಟೆಯ ನಟಿ ಅಂಕಿತಾ ನಾಯ್ಡು ಹಾಗೂ ಸಹ...

ಗೋವಿಂದಹಳ್ಳಿಯ ಪಂಚಲಿಂಗೇಶ್ವರ ; ಐದು ಶಿಖರಗಳ ಅಪರೂಪದ ಗುಡಿ

ಸ್ಥಳದ ಬಗ್ಗೆ ಕಿರು ಪರಿಚಯ: ಪ್ರಖ್ಯಾತ ಪ್ರವಾಸಿ ತಾಣವಾದ ಗೋವಿಂದನಹಳ್ಳಿಯ ಬ್ರಹ್ಮಲಿಂಗೇಶ್ವರ ಗುಡಿಯಿರುವುದು ಮಂಡ್ಯದಿಂದ 52 ಕಿ.ಮೀ ಹಾಗೂ ಕೃಷ್ಣರಾಜಪೇಟೆಯಿಂದ 20 ಕಿ.ಮೀ ಹಾಗು ಕಿಕ್ಕೇರಿಯಿಂದ...

ಗೋಕಾಕ: ಶಿಕ್ಷಕರು ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯ ನಡುವಿನ ಕೊಂಡಿಯಾಗಿ ಶಿಕ್ಷಕರ ಸಂಘದ ಪ್ರತಿನಿಧಿಗಳು ಕರ್ತವ್ಯನಿರ್ವಹಿಸುವಂತೆ ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.

ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದ ಆವರಣದಲ್ಲಿ ರವಿವಾರ ಸಂಜೆ ಮೂಡಲಗಿ ತಾಲೂಕು ಶಿಕ್ಷಕರ ಸಂಘಕ್ಕೆ ನೂತನವಾಗಿ ಆಯ್ಕೆಯಾದ ನಿರ್ದೇಶಕರುಗಳನ್ನು ಅಭಿನಂದಿಸಿ ಮಾತನಾಡಿದ ಅವರು, ಸಮನ್ವಯತೆಯ ಆಧಾರದಲ್ಲಿ ಕರ್ತವ್ಯ ನಿರ್ವಹಿಸಿ ಯಶಸ್ವಿಯಾಗುವಂತೆ ಶುಭ ಕೋರಿದರು.

ಮೂಡಲಗಿ ತಾಲೂಕು ಘಟಕಕ್ಕೆ ಶಿಕ್ಷಕರ ಸಂಘಕ್ಕೆ ಅವಿರೋಧವಾಗಿ ಆಯ್ಕೆಯಾಗಿರುವುದು ಶಿಕ್ಷಕರಲ್ಲಿರುವ ಒಗ್ಗಟ್ಟನ್ನು ಪ್ರದರ್ಶಿಸಿದೆ. ಇದಕ್ಕಾಗಿ ವಲಯದ ಎಲ್ಲ ಶಿಕ್ಷಕರನ್ನು ಅಭಿನಂದಿಸುತ್ತೇನೆ. ಎಲ್ಲ ಸಮುದಾಯದಿಂದ ಶಿಕ್ಷಕರು ಪ್ರತಿನಿಧಿಸಿದ್ದಾರೆ.

- Advertisement -

12ನೇ ಶತಮಾನದಲ್ಲಿ ಬಸವಣ್ಣನವರು ಅನುಭವ ಮಂಟಪ ಸ್ಥಾಪಿಸಿ ಸಾಮಾಜಿಕ ನ್ಯಾಯ ತತ್ವವನ್ನು ಜಾರಿಗೊಳಿಸಿದ್ದರು. ಅದರ ಮಾದರಿಯಲ್ಲಿಯೇ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹಿಂದಿನ ಮಹಾನ್ ಪುರುಷರ ತತ್ವಾದರ್ಶದಲ್ಲಿ ಕೆಲಸ ನಿರ್ವಹಿಸುವಂತೆ ಅವರು ಹೇಳಿದರು.

ಸಮಾಜದಲ್ಲಿ ಬದಲಾವಣೆಯನ್ನು ತಂದು ಎಲ್ಲ ಸಮುದಾಯದ ಮಕ್ಕಳ ಜೊತೆಗೆ ಬೆರೆಯಬೇಕು. ಇಂದಿನ ಮಕ್ಕಳನ್ನು ನಾಳಿನ ಸತ್ಪ್ರಜೆಗಳನ್ನಾಗಿ ಮಾಡುವ ಹೊಣೆಗಾರಿಕೆ ಶಿಕ್ಷಕರ ಮೇಲಿದೆ. ಶಿಕ್ಷಣದಿಂದ ಮಾತ್ರ ಸಮಾಜದಲ್ಲಿ ಪರಿವರ್ತನೆ ಹೊಂದಲು ಸಾಧ್ಯವೆಂದು ಅವರು ಹೇಳಿದರು.

ಶಿಕ್ಷಕರ ಸೇವಾ ಸೌಲಭ್ಯಗಳು, ಶಿಕ್ಷಕರ ವೇತನ ಸೌಲಭ್ಯಗಳು, ಸಾರ್ವಜನಿಕ ಶಿಕ್ಷಣ ಇಲಾಖೆಯ ಕಛೇರಿಯ ಜೊತೆಗೆ ಸತತ ಸಂಪರ್ಕ ಸಾಧಿಸುವ ನಿಟ್ಟಿನಲ್ಲಿ ನೂತನ ನಿರ್ದೇಶಕರುಗಳು ಒಗ್ಗಟ್ಟಿನಿಂದ ಕೆಲಸ ನಿರ್ವಹಿಸಬೇಕು. ಶಿಕ್ಷಕರು ಮನಸ್ಸು ಗೆಲ್ಲುವ ರೀತಿಯಲ್ಲಿ ಕಾರ್ಯನಿರ್ವಹಿಸಿ ಅವರಿಂದ ಮೆಚ್ಚುಗೆ ಗಳಿಸಬೇಕು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ಅಗತ್ಯವಿರುವ ಎಲ್ಲ ಸವಲತ್ತುಗಳನ್ನು ದೊರಕಿಸಿಕೊಡಲು ಪ್ರಯತ್ನಿಸಲಾಗುವುದು. ಸಂಘಕ್ಕೆ ಎಲ್ಲ 20 ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆಯಾದಂತೆ ಸಂಘಕ್ಕೆ ಅಧ್ಯಕ್ಷರೂ ಸೇರಿದಂತೆ ಇನ್ನೂಳಿದ ಪದಾಧಿಕಾರಿಗಳನ್ನು ಸಹ ಅವಿರೋಧವಾಗಿ ಆಯ್ಕೆ ಮಾಡುವಂತೆ ಸಂಘದ ಪದಾಧಿಕಾರಿಗಳಿಗೆ ಸೂಚಿಸಿದರು.

ಇದೇ ಸಂದರ್ಭದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು 2020-2025ನೇ ಸಾಲಿಗೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮೂಡಲಗಿ ತಾಲೂಕಾ ಘಟಕದ ನೂತನ ದಿಗ್ಧರ್ಶಕ ಮಂಡಳಿಯವರನ್ನು ಹೂ-ಮಾಲೆ ಹಾಕಿ ಅಭಿನಂದಿಸಿದರು.

ಮೂಡಲಗಿ ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ ಪ್ರಾಸ್ತಾವಿಕವಾಗಿ ಮಾತನಾಡಿ, ಶಿಕ್ಷಕರ ಸಂಘದ ಧ್ಯೇಯೋದ್ಧೇಶಗಳನ್ನು ವಿವರಿಸಿದರು. ಹೊಸ ಮಂಡಳಿಯವರನ್ನು ಅಭಿನಂದಿಸಿದರು.

ಹೊಸ ನಿರ್ದೇಶಕ ಮಂಡಳಿಯ ಸದಸ್ಯರು : ಎಸ್.ಎಂ. ಲೋಕನ್ನವರ, ಎಂ.ವಾಯ್. ಸಣ್ಣಕ್ಕಿ, ಬಿ.ಬಿ. ಕೇವಟಿ, ಆರ್.ಎಂ. ಮಹಾಲಿಂಗಪೂರ, ಎ.ಪಿ. ಪರಸನ್ನವರ, ಎಂ.ಜಿ. ಮಾವಿನಗಿಡದ, ಎಲ್.ಎಂ. ಬಡಕಲ್, ಕೆ.ಎಲ್. ಮೀಸಿ, ಎಲ್.ಎಂ. ಭೂಮನ್ನವರ, ವಾಯ್.ಡಿ. ಝಲ್ಲಿ, ಬಿ.ಎಲ್. ನಾಯಿಕ, ಬಿ.ಎ. ಡಾಂಗೆ, ಎಸ್.ಎಂ. ಕುರಣಗಿ, ಎಂ.ಎಂ. ಕಳಸನ್ನವರ, ಸುನೀತಾ ಎಸ್, ಲಕ್ಷ್ಮೀ ಹೆಬ್ಬಾಳ, ಎಲ್.ಎಸ್. ಯಲಿಗಾರ, ವ್ಹಿ.ಎಂ. ಪೂಜೇರಿ, ಆರ್.ಎಂ. ಹುಣಶ್ಯಾಳಕರ, ಎಸ್.ಜಿ. ರಾಮದುರ್ಗ.
ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರನ್ನು ಶಿಕ್ಷಕರ ಸಂಘದ ನಿರ್ದೇಶಕರುಗಳು ಸತ್ಕರಿಸಿದರು.

- Advertisement -
- Advertisement -

Latest News

25 ಸಾವಿರ ಮತಗಳಿಂದ ಬಿಜೆಪಿ ಗೆಲ್ಲುತ್ತದೆ – ಜೊಲ್ಲೆ ವಿಶ್ವಾಸ

ಸಿಂದಗಿ: ಎರಡು ಬಾರಿ ಚುನಾಯಿತರಾದ ರಮೇಶ ಭೂಸನೂರ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲಿ ಭಾಜಪ ಅಧಿಕಾರದಲ್ಲಿದೆ ಕ್ಷೇತ್ರದ ಅಭಿವೃದ್ಧಿ ದಿಸೆಯಲ್ಲಿ...
- Advertisement -

More Articles Like This

- Advertisement -
close
error: Content is protected !!