ಸಂಶೋಧನೆಯ ಫಲ ಸಮಾಜಕ್ಕೆ ಪ್ರಯೋಜನಕಾರಿಯಾಗಬೇಕು – ಡಾ. ಎಸ್.ಟಿ. ಬಾಗಲಕೋಟಿ, ಕ.ವಿ.ವಿ. ಅರ್ಥಶಾಸ್ತ್ರ ಪ್ರಾಧ್ಯಾಪಕ

Must Read

ಸಂಚಾರಿ ವಿಜಯ್ ಬ್ರೇನ್ ಡೆಡ್ ; ನಾಳೆ “ನಿಧನ” ರಾಗಲಿರುವ ನಟ. ವಿಚಿತ್ರ ಪರಿಸ್ಥಿತಿ

ಬೆಂಗಳೂರು - ಯುವ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅಪಘಾತದ ಕಾರಣದಿಂದಾಗಿ ಬ್ರೇನ್ ಡೆಡ್ ಆಗಿ ನಿಧನ ಹೊಂದಿದರೆಂದು ಹೇಳುವ ವಿಚಿತ್ರ...

ಜನ ಸಾಮಾನ್ಯರ ತುರ್ತು ಸೇವೆಗಾಗಿ ಅರಭಾವಿ ಕ್ಷೇತ್ರದ ಎಲ್ಲ ಪಿಎಚ್‍ಸಿಗಳಿಗೆ ರಕ್ಷಾ ಕವಚ ವಾಹನ ಸೌಲಭ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿಯಲ್ಲಿ ಟಾಸ್ಕ್ ಫೋರ್ಸ್ ಸಭೆ ಮೂಡಲಗಿ : ಕೋವಿಡ್ ಎರಡನೆಯ ಅಲೆಯ ವಿರುದ್ದ ಹೋರಾಟ ಮಾಡಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿರುವ ಕೊರೋನಾ ವಾರಿಯರ್ಸ್‌ ಗಳ ಕಾರ್ಯ...

ಪುರಸಭೆಯ ಸಾಮಾನ್ಯ ಸಭೆ ಕರೆಯಲು ಮನವಿ

ಸಿಂದಗಿ: ಪಟ್ಟಣದ ಹಲವು ವಾರ್ಡುಗಳಲ್ಲಿ ನೀರಿನ ಸಮಸ್ಯೆ, ಗಟಾರಗಳ ಸಮಸ್ಯೆ ಸೇರಿದಂತೆ ಹಲವಾರು ಸಮಸ್ಯೆಗಳು ಉಲ್ಬಣ ಸೇರಿದಂತೆ ಹಲವಾರು ವಿಷಯಗಳ ಕುರಿತು ಚರ್ಚಿಸಲು ಸಾಮಾನ್ಯ ಸಭೆ...

ಸವದತ್ತಿ: ಸಂಶೋಧಕ ಸಂಶೋಧನೆಯನ್ನು ಆಸಕ್ತಿಯಿಂದ ಮಾಡಬೇಕು. ಆಗ ಮಾತ್ರ ಉತ್ತಮ ಸಂಶೋಧಕನಾಗಿ ರೂಪುಗೊಳ್ಳಬಲ್ಲ. ಸಂಶೋಧಕ ತಾನು ಪಡೆದ ಜ್ಞಾನವನ್ನು ನಿಂತ ನೀರಾಗಿಸದೆ ಹರಿಯುವ ನೀರನ್ನಾಗಿ ಮಾಡಬೇಕು ಆಗ ಮಾತ್ರ ಸಂಶೋಧನೆಯ ಫಲ ಉತ್ಕೃಷ್ಟ ಗುಣಮಟ್ಟದ್ದಾಗಿರುತ್ತದೆ ಎಂದು ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ಪ್ರಾಧ್ಯಾಪಕ ಡಾ.ಎಸ್.ಟಿ.ಬಾಗಲಕೋಟಿ ನುಡಿದರು.

ಅವರು ಪಟ್ಟಣದ ಕೆ.ಎಲ್.ಇ.ಸಂಸ್ಥೆಯ ಎಸ್.ವಿ.ಎಸ್. ಬೆಳ್ಳುಬ್ಬಿ ಮಹಾವಿದ್ಯಾಲಯದ ಸಂಶೋಧನಾ ಘಟಕ ಮತ್ತು ಅರ್ಥಶಾಸ್ತ್ರ ವಿಭಾಗ ಏರ್ಪಡಿಸಿದ ಸಂಶೋಧನಾ ವಿಧಾನ ಎಂಬ ರಾಷ್ಟ್ರ ಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

- Advertisement -

ಸಂಶೋಧಕನು ಸತ್ಯವನ್ನು ಕಂಡುಕೊಳ್ಳಲಿಕ್ಕೆ ನಿಷ್ಠುರತೆ, ಸತ್ಯದ ಪ್ರತಿಪಾದನೆ, ನಿಷ್ಪಕ್ಷಪಾತ, ಪ್ರಾಮಾಣಿಕತೆ ಗುಣಗಳನ್ನು ಹೊಂದುವುದರ ಜೊತೆಗೆ ಸಂಶೋಧನಾ ವಿಧಾನ ಅರಿತಾಗ ಮಾತ್ರ ಉತ್ತಮ ಸಂಶೋಧಕನಾಗಬಲ್ಲ. ಸಂಶೋಧನಾ ಕ್ಷೇತ್ರಕ್ಕೆ ದೇಶದಲ್ಲಿ ನೂರಕ್ಕಿಂತಲೂ ಹೆಚ್ಚು ಸರ್ಕಾರೇತರ ಸಂಸ್ಥೆಗಳು ಅನುದಾನವನ್ನು ನೀಡುತ್ತಿವೆ. ಆ ಅನುದಾನವನ್ನು ಇಂದಿನ ದಿನಗಳಲ್ಲಿ ಸಂಶೋಧಕರು ಸಮರ್ಪಕವಾಗಿ ಬಳಸಿಕೊಳ್ಳಬಹುದಾಗಿದೆ ಎಂದರು.

ನಂತರ ಎರಡು ತಾಂತ್ರಿಕ ಗೋಷ್ಠಿಯಲ್ಲಿ ಸಂಶೋಧನೆ, ಸಂಶೋಧನಾ ವಿಧಾನಗಳು, ಸಂಶೋಧಕನ ಮಿತಿಗಳು, ಸಂಶೋಧನಾ ನಿಯತಕಾಲಿಕಗಳು ಎಂಬ ವಿಷಯಗಳ ಕುರಿತು ವಿಷಯ ಮಂಡನೆ ಮಾಡಿದರು. ಸಂವಾದದಲ್ಲಿ ಪ್ರತಿನಿಧಿಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಚಾರ್ಯ ಪ್ರೊ. ಮಾರುತಿ ಎ. ಡೊಂಬರ ವಹಿಸಿದ್ದರು, ಸೌಮ್ಯಾ ಪರದೇಶಿ ಪ್ರಾರ್ಥಿಸಿದರು, ಪ್ರೊ. ವಿಜಯಕುಮಾರ ಮೀಶಿ ಸ್ವಾಗತಿಸಿದರು, ಪ್ರೊ. ಕೆ. ರಾಮರೆಡ್ಡಿ ಪ್ರಾಸ್ತಾವಿಕ ನುಡಿಗಳನ್ನಾಡಿದರು, ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಎನ್.ಎ.ಕೌಜಗೇರಿ ಅತಿಥಿಗಳನ್ನು ಪರಿಚಯಿಸಿದರು. ವೇದಿಕೆ ಮೇಲೆ ನ್ಯಾಕ್ ಸಂಯೋಜಕರಾದ ಡಾ.ಎನ್.ಆರ್.ಸವತೀಕರ ಉಪಸ್ಥಿತರಿದ್ದರು. ಡಾ.ಅರುಂಧತಿ ಬದಾಮಿ ವಂದಿಸಿದರು, ಪ್ರೊ. ಎ.ಎ.ಹಳ್ಳೂರ ಕಾರ್ಯಕ್ರಮ ನಿರ್ವಹಣೆ ಮಾಡಿದರು.

ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ವಿದ್ಯಾರ್ಥಿಗಳು, ಪ್ರಾಧ್ಯಾಪಕರು, ಬೋಧಕೇತರ ಸಿಬ್ಬಂದಿ ಹಾಗೂ ವಿವಿಧ ಕಾಲೇಜುಗಳಿಂದ ಪ್ರಾಧ್ಯಾಪಕರು, ಸಂಶೋಧನಾರ್ಥಿಗಳು ಉಪಸ್ಥಿತರಿದ್ದರು.

- Advertisement -
- Advertisement -

Latest News

ಸಂಚಾರಿ ವಿಜಯ್ ಬ್ರೇನ್ ಡೆಡ್ ; ನಾಳೆ “ನಿಧನ” ರಾಗಲಿರುವ ನಟ. ವಿಚಿತ್ರ ಪರಿಸ್ಥಿತಿ

ಬೆಂಗಳೂರು - ಯುವ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅಪಘಾತದ ಕಾರಣದಿಂದಾಗಿ ಬ್ರೇನ್ ಡೆಡ್ ಆಗಿ ನಿಧನ ಹೊಂದಿದರೆಂದು ಹೇಳುವ ವಿಚಿತ್ರ...
- Advertisement -

More Articles Like This

- Advertisement -
close
error: Content is protected !!