ಹುಕ್ಕೇರಿ – ತಾಲೂಕ ಪಂಚಾಯತಿ, ಹುಕ್ಕೇರಿ, ಸಮಾಜ ಕಲ್ಯಾಣ ಇಲಾಖೆ, ಹುಕ್ಕೇರಿ ಇವರುಗಳ ಸಹಯೋಗದೊಂದಿಗೆಪ್ರಬುದ್ಧ ಗ್ರಾಮೀಣ ಸೇವಾ ಸಂಸ್ಥೆ (ರಿ) ಗೌಡವಾಡ, ಹುಕ್ಕೇರಿ ಹಾಗೂ ಸಿ,ಇ,ಎಸ್ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯ ಯಮಕನಮರಡಿ ಇವರ ಸಂಯುಕ್ತ ಆಶ್ರಯದಲ್ಲಿ ಮಾರ್ಚ್ ೨ ರಂದು ಸಾಮಾಜಿಕ ಸಮಾನತೆ ಮತ್ತು ಡಾ. ಬಿ_ಆರ್_ಅಂಬೇಡ್ಕರ್ ಅವರ ವಿಚಾರಧಾರೆಗಳು ಹಾಗೂ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಕುರಿತು ವಿಚಾರಗೋಷ್ಠಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು, ಮಹಾವಿದ್ಯಾಲಯದ ಮುಖ್ಯಸ್ಥರು, ಪ್ರಾಚಾರ್ಯರು, ಸಿಬ್ಬಂದಿಗಳು
ಯಮಕನಮರಡಿ ಪೋಲಿಸ್ ಸಿಬ್ಬಂದಿಗಳು, ಗ್ರಾಮ ಪಂಚಾಯತಿ ಯಮಕನಮರಡಿಯ ಅಧ್ಯಕ್ಷರು, ಉಪಾಧ್ಯಕ್ಷರು, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಪ್ರಬುದ್ಧ ಗ್ರಾಮೀಣ ಸೇವಾ ಸಂಸ್ಥೆಯ ಅಧ್ಯಕ್ಷರು, ಸಿಬ್ಬಂದಿಗಳು, ಮಹಾವಿದ್ಯಾಲಯದ ಉಪನ್ಯಾಸಕರು, ವಿದ್ಯಾರ್ಥಿ ವಿಧ್ಯಾರ್ಥಿನಿಯರು, ಭಾಗವಹಿಸಿದರು.
ವಿಚಾರಗೋಷ್ಠಿ ಕಾರ್ಯಕ್ರಮಕ್ಕೆ ವೇದಿಕೆ ಮೇಲಿನ ಎಲ್ಲಾ ಗಣ್ಯಮಾನ್ಯರಿಂದ ಸಂವಿಧಾನ ಪೀಠಿಕೆ ಓದುವುದರ ಮೂಲಕ ಕಾರ್ಯಕ್ರಮ ಯಶಸ್ವಿಯಾಗಿ ಹಮ್ಮಿಕೊಂಡು ಮುಕ್ತಾಯ ಗೊಳಿಸಲಾಯಿತು.