ಬೀದರ – ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎಸ್ಐಟಿ ತಂಡವು ಔರಾದ್ ತಾಲೂಕಿನ ಠಾಣಾಕುಶನೂರ ಗ್ರಾಮದ ಇಂಜಿನಿಯರ್ ಒಬ್ಬನನ್ನು ವಶಕ್ಕೆ ಪಡೆದಿದೆ.
ಇಂಟರ್ನೆಟ್ ಕೆಫೆಯಲ್ಲಿ ಕೆಲಸ ಮಾಡುತ್ತಿದ್ದ ಸಾಗರ ಶಿಂಧೆ ಎಂಬ ಯುವಕನನ್ನು ಸಿಟ್ ತಂಡ ವಶಕ್ಕೆ ಪಡೆದು ವಿಚಾರಣೆ ನಡೆಸಿದೆ.
ಯುವಕನನ್ನು ವಶಕ್ಕೆ ಪಡೆಯುತ್ತಿದ್ದಂತೆಯೇ ಆತನ ತಾಯಿ ಹಾಗೂ ಸಂಬಂಧಿಕರು ಕಣ್ಣೀರು ಹಾಕುತ್ತಿದ್ದು ತಮ್ಮ ಮಗ ಅಮಾಯಕನಾಗಿದ್ದು ಯಾರೋ ಮೋಸ ಮಾಡಿ ಆತನನ್ನು ಕರೆದುಕೊಂಡು ಹೋಗಿದ್ದಾರೆ. ಅವನನ್ನು ಬಿಟ್ಟು ಬಿಡಿ ಎಂದು ಗೋಗರೆಯುತ್ತಿದ್ದರು.
ವರದಿ: ನಂದಕುಮಾರ ಕರಂಜೆ
Times of ಕರ್ನಾಟಕ, ಬೀದರ