*ಸಿದ್ಧಗಂಗಾ ಶ್ರೀಗಳಿಗೆ ಭಾರತ ರತ್ನ ನೀಡಬೇಕು- ವಾಟಾಳ್ ನಾಗರಾಜ್*

Must Read

25 ಸಾವಿರ ಮತಗಳಿಂದ ಬಿಜೆಪಿ ಗೆಲ್ಲುತ್ತದೆ – ಜೊಲ್ಲೆ ವಿಶ್ವಾಸ

ಸಿಂದಗಿ: ಎರಡು ಬಾರಿ ಚುನಾಯಿತರಾದ ರಮೇಶ ಭೂಸನೂರ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲಿ ಭಾಜಪ ಅಧಿಕಾರದಲ್ಲಿದೆ ಕ್ಷೇತ್ರದ ಅಭಿವೃದ್ಧಿ ದಿಸೆಯಲ್ಲಿ...

“ಕಲಾಸೃಷ್ಟಿ” ಆರ್ಟ್ ವರ್ಕ್ ಗೆ ಚಾಲನೆ ನೀಡಿದ ಲೋಕಲ್ ಲೀಡರ್ ನಟ ಕಲ್ಮೇಶ್

ಬಾಗಲಕೋಟೆ: ಇದೆ ಅಕ್ಟೋಬರ್ ೧೫ ರಂದು, ಗದ್ದನಕೇರಿಯಲ್ಲಿ "ಕಲಾಸೃಷ್ಟಿ" ಆರ್ಟ್ ವರ್ಕ್ ಪ್ರಾರಂಭವಾಯಿತು. ಇದನ್ನು ನಟ ಕಲ್ಮೇಶ್, ಬಾಗಲಕೋಟೆಯ ನಟಿ ಅಂಕಿತಾ ನಾಯ್ಡು ಹಾಗೂ ಸಹ...

ಗೋವಿಂದಹಳ್ಳಿಯ ಪಂಚಲಿಂಗೇಶ್ವರ ; ಐದು ಶಿಖರಗಳ ಅಪರೂಪದ ಗುಡಿ

ಸ್ಥಳದ ಬಗ್ಗೆ ಕಿರು ಪರಿಚಯ: ಪ್ರಖ್ಯಾತ ಪ್ರವಾಸಿ ತಾಣವಾದ ಗೋವಿಂದನಹಳ್ಳಿಯ ಬ್ರಹ್ಮಲಿಂಗೇಶ್ವರ ಗುಡಿಯಿರುವುದು ಮಂಡ್ಯದಿಂದ 52 ಕಿ.ಮೀ ಹಾಗೂ ಕೃಷ್ಣರಾಜಪೇಟೆಯಿಂದ 20 ಕಿ.ಮೀ ಹಾಗು ಕಿಕ್ಕೇರಿಯಿಂದ...

ಸಿದ್ದಗಂಗಾ ಮಠದ ಲಿಂಗೈಕ್ಯ ಶ್ರೀಗಳು ದೇಶ ಕಂಡಂಥ ಅದ್ಭುತವಾದಂತಹ ವ್ಯಕ್ತಿತ್ವವುಳ್ಳವರು. ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಈ ಮೂರು ರಾಜಕೀಯ ಪಕ್ಷಗಳವರು ಅಧಿಕಾರಕ್ಕಾಗಿ, ರಾಜಕೀಯಕ್ಕಾಗಿ ಶ್ರೀಗಳ ಪ್ರಭಾವವನ್ನು ಬಳಸಿಕೊಂಡಿದ್ದಾರೆ. ಆದರೆ ಶ್ರೀಗಳಿಗೆ ಭಾರತ ರತ್ನ ಕೊಡಿಸುವ ಬಗ್ಗೆ ಯಾರೂ ಪ್ರಾಮಾಣಿಕ ಪ್ರಯತ್ನ ಮಾಡಲಿಲ್ಲ ಎಂದು ಕನ್ನಡ ಚಳವಳಿ ಪಕ್ಷದ ವಾಟಾಳ್ ನಾಗರಾಜ್ ದೂರಿದ್ದಾರೆ.

ಶ್ರೀಗಳಿಗೆ ಭಾರತ ರತ್ನ ನೀಡಬೇಕೆಂದು ಆಗ್ರಹಿಸಿ ತುಮಕೂರು ನಗರದ ಕ್ಯಾತ್ಸಂದ್ರದ ರೇಲ್ವೇ ಹಳಿಯ ಮೇಲೆ ಕುಳಿತು ಪ್ರತಿಭಟನೆ ನಡೆಸುತ್ತ ಅವರು ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿಯವರು ಸಿದ್ದಗಂಗಾ ಮಠಕ್ಕೆ ಬಂದು ಹೋಗಿದ್ದಾರೆ. ಆದರೂ ಭಾರತ ರತ್ನ ಪ್ರಶಸ್ತಿ ನೀಡುವ ಕುರಿತು ಯಾವುದೇ ಚಕಾರ ಎತ್ತಿಲ್ಲ. ಹಾಗೆಯೇ ಯಡಿಯೂರಪ್ಪನವರು ಸಿದ್ದಗಂಗಾ ಮಠದಿಂದಲೇ ಮುಖ್ಯಮಂತ್ರಿಯಾದರು ಎಂಬುದು ಸತ್ಯ. ಆದರೂ ಶ್ರೀಗಳ ಸೇವೆಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾಗ ಭಾರತ ರತ್ನ ಕೊಡಿಸಲು ಅವರೂ ಕೂಡ ಮುಂದಾಗ ಲಿಲ್ಲ. ಯಡಿಯೂರಪ್ಪನವರು ಪ್ರಾಮಾಣಿಕ ಪ್ರಯತ್ನ ಮಾಡಿದ್ದರೆ ಶ್ರೀಗಳಿಗೆ ಪ್ರಶಸ್ತಿ ಕೊಡಿಸಬಹುದಿತ್ತು ಎಂದರು.

- Advertisement -

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸಹ ನಮ್ಮ ಸರಕಾರ ಬಂದರೆ ಶ್ರೀಗಳಿಗೆ ಮೊದಲು ಭಾರತ ರತ್ನ ಪ್ರಶಸ್ತಿ ಕೊಡಿಸು ತ್ತೇವೆ ಎಂದು ಹೇಳಿದ್ದರು. ಆದರೆ ಅಧಿಕಾರಕ್ಕೆ ಬಂದ ಮೇಲೆ ಹೇಳಿದ ಮಾತನ್ನು ಅವರೂ ಮರೆತು ಬಿಟ್ಟರು ಎಂದರು.

ರಾಜ್ಯದಲ್ಲಿ ಮರಾಠಾ ಪ್ರಾಧಿಕಾರ ರಚನೆಯ ನಿರ್ಧಾರವನ್ನು ಸರ್ಕಾರ ಕೂಡಲೇ ಕೈ ಬಿಡಬೇಕು. ಇಲ್ಲವಾದರೆ ಎರಡನೇ ಹಂತದ ಹೋರಾಟವನ್ನು ಜ. 9 ರಂದು ರಾಜ್ಯದ ಉದ್ದಗಲಕ್ಕೂ ರೈಲು ಹಳಿಯ ಮೇಲೆ ಸತ್ಯಾಗ್ರಹ ನಡೆಸಲಾಗುವುದು ಎಂದು ವಾಟಾಳ್ ಹೇಳಿದರು.

ಜ. 9 ರಂದು ರಾಜ್ಯದ ಸುಮಾರು 500 ಕಡೆ ರೈಲ್ವೆ ಹಳಿಗಳ ಮೇಲೆ ಸತ್ಯಾಗ್ರಹ ನಡೆಸಲಾಗುವುದು. ಈ ಸತ್ಯಾಗ್ರಹದಲ್ಲಿ ಸುಮಾರು 10 ಸಾವಿರ ಜನ ಭಾಗವಹಿಸಲಿದ್ದು, ಮೆರವಣಿಗೆಯಲ್ಲಿ 1 ಲಕ್ಷಕ್ಕೂ ಅಧಿಕ ಜನ ಪಾಲ್ಗೊಳ್ಳಲಿದ್ದಾರೆ ಎಂದು ಅವರು ಹೇಳಿದರು.

ಅಂದು ರೈಲು ಸಂಚಾರ ಬಂದ್ ಆಗಲಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ರೈಲ್ವೆ ನಿಲ್ದಾಣಕ್ಕೆ ಬರಬಾರದು ಎಂದು ಮನವಿಯನ್ನೂ ಅವರು ಮಾಡಿದರು.

ಮರಾಠ ಅಭಿವೃದ್ಧಿ ಪ್ರಾಧಿಕಾರ ವಿರೋಧಿಸಿ ನಾವು ಕೈಗೊಂಡಿದ್ದ ಮೊದಲ ಹೋರಾಟಕ್ಕೆ ಜನರ ಅಭೂತಪೂರ್ವ ಬೆಂಬಲ ವ್ಯಕ್ತವಾಯಿತು. ಮುಖ್ಯಮಂತ್ರಿ ಯಡಿಯೂರಪ್ಪನವರು ಸರ್ವಾಧಿಕಾರ ಧೋರಣೆ ತಾಳಿ ಹಿಟ್ಲರ್ ರೀತಿ ಆಡಳಿತ ನಡೆಸುತ್ತಾ ನಮ್ಮ ಹೋರಾಟವನ್ನು ತಡೆಯಲು ಪೊಲೀಸರ ಮೂಲಕ ನಮ್ಮ ಮೇಲೆ ದಾಳಿ ಮಾಡಿಸಿದರು. ಆದರೆ ನಮ್ಮ ಹೋರಾಟವೇನು ವಿಫಲವಾಗಲಿಲ್ಲ ಎಂದವರು ನುಡಿದರು.

ಹಲವು ಹೋರಾಟಗಾರರು ಈ ಸಂದರ್ಭದಲ್ಲಿ ಹಾಜರಿದ್ದರು.

- Advertisement -
- Advertisement -

Latest News

25 ಸಾವಿರ ಮತಗಳಿಂದ ಬಿಜೆಪಿ ಗೆಲ್ಲುತ್ತದೆ – ಜೊಲ್ಲೆ ವಿಶ್ವಾಸ

ಸಿಂದಗಿ: ಎರಡು ಬಾರಿ ಚುನಾಯಿತರಾದ ರಮೇಶ ಭೂಸನೂರ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲಿ ಭಾಜಪ ಅಧಿಕಾರದಲ್ಲಿದೆ ಕ್ಷೇತ್ರದ ಅಭಿವೃದ್ಧಿ ದಿಸೆಯಲ್ಲಿ...
- Advertisement -

More Articles Like This

- Advertisement -
close
error: Content is protected !!