ಬೆಂಗಳೂರು – ತಮ್ಮ ಬೇಡಿಕೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲು ರಾಜ್ಯ ಶಿಕ್ಷಕರ ಸಂಘದ ಸದಸ್ಯರು ಹಾಗು ಎಲ್ಲ ಶಿಕ್ಷಕರು ಇದೇ ದಿ. ೧೨ ರಂದು ಸೋಮವಾರ ಬೆಂಗಳೂರು ಚಲೋ ಕಾರ್ಯಕ್ರಮ ಹಮ್ಮಿಕೊಂಡಿದ್ದು ಎಲ್ಲರಿಗೂ ತಿಳಿದ ವಿಷಯ.
ಆದರೆ ರಾಜ್ಯ ಶಿಕ್ಷಣ ಇಲಾಖೆಯು ಈ ಸಂಬಂಧ ಸುತ್ತೋಲೆಯೊಂದನ್ನು ಹೊರಡಿಸಿದ್ದು ಅಂದು ರಾಜ್ಯದ ಶಿಕ್ಷಕರು ಶಾಲೆಗೆ ರಜೆ ನೀಡಬಾರದು ಎಂದು ಸೂಚನೆ ನೀಡಿದೆ.
ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆಯಲ್ಲಿ,ಕರ್ನಾಟಕ ರಾಜ್ಯ ಸಿವಿಲ್ ಸೇವೆ ( ನಡತೆ) ಯ ನಿಯಮಗಳು- ೨೦೨೧ ರ ಪ್ರಕಾರ ನೌಕರರು ಮುಷ್ಕರದಲ್ಲಿ ಪಾಲ್ಗೊಳ್ಳುವುದು ನಡತೆಯ ಉಲ್ಲಂಘನೆ ಯಾಗುವುದರಿಂದ ದಿ.೧೨ ರಂದು ಶಾಲೆಗಳನ್ನು ಮುಚ್ಚಿ ಭಾಗವಹಿಸಲು ಅಥವಾ ಪಾಠಗಳನ್ನು ನಡೆಸಲು ಅಡಚಣಿ ಮಾಡಲು ಅವಕಾಶವಿರುವದಿಲ್ಲ ಎಂದು ತಿಳಿಸಿದ್ದಾರೆ
ಈ ಬಗ್ಗೆ ಜಿಲ್ಲಾ ಹಂತದಲ್ಲಿ ಉಪನಿರ್ದೇಶಕರು(ಆಡಳಿತ) ತಮ್ಮ ವ್ಯಾಪ್ತಿಯ ಎಲ್ಲಾ ಶಾಲೆಗಳ ಮುಖ್ಯೋಪಾಧ್ಯಾಯರಿಗೆ ತಿಳಿಸಿ ಶಾಲೆಗಳಲ್ಲಿ ಪಾಠ ಪ್ರವಚನಗಳು ನಡೆಯುವಂತೆ ಕ್ರಮ ಕೈಗೊಳ್ಳಬೇಕು. ನಿಯಮ ಮೀರಿ ಕರ್ತವ್ಯ ಬಿಟ್ಟು ಮುಷ್ಕರದಲ್ಲಿ ಪಾಲ್ಗೊಂಡರೆ ಅಂಥ ಶಿಕ್ಷಕ/ಮುಖ್ಯ ಶಿಕ್ಷಕರ ವಿರುದ್ಧ ಅಗತ್ಯ ಕ್ರಮ ಜರುಗಿಸಬೇಕು ಎಂದು ಇಲಾಖೆಯ ಮುಖ್ಯಸ್ಥರು ಸೂಚನೆ ನೀಡಿದ್ದಾರೆ.