ಬೆಳಗಾವಿ – ಅಖಿಲಭಾರತ ವೀರಶೈವ ಮಹಾಸಭಾ ಬೆಳಗಾವಿ ಜಿಲ್ಲಾ ಘಟಕದಿಂದ ಗುರುವಾರ ಸಂಜೆ 5 ಗಂಟೆಗೆ ಶಿವಬಸವ ನಗರದ ಲಿಂಗಾಯತ ಭವನದಲ್ಲಿ ಅಮಾವಾಸ್ಯೆ ಸತ್ಸಂಗ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕಾರಂಜಿಮಠದ ಪೂಜ್ಯ ಶ್ರೀ ಗುರುಸಿದ್ದ ಮಹಾಸ್ವಾಮಿಗಳು ದಿವ್ಯ ಸಾನ್ನಿಧ್ಯ ವಹಿಸುವರು. ಬೈಲಹೊಂಗಲದ ಶರಣೆ ಪ್ರೇಮಕ್ಕ ಅಂಗಡಿಯವರು ಉಪನ್ಯಾಸ ನೀಡುವರು.
ಶರಣೆ ರತ್ನಪ್ರಭಾ ಬೆಲ್ಲದ ಅಧ್ಯಕ್ಷತೆ ವಹಿಸುವರು.ಶರಣ ವೀರಭದ್ರ ಅಂಗಡಿಯವರು ಕಾರ್ಯಕ್ರಮ ನಿರೂಪಣೆ ಮಾಡುವರು.
ಶರಣೆ ಮಂಗಲಾ ಮಠದ ಹಾಗು ಸಂಗಡಿಗರಿಂದ ವಚನ ಗಾಯನ ನಡೆಯಲಿದೆ.ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕಾರ್ಯದರ್ಶಿ ಎ.ಬಿ. ಕೊರಬು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.