ಖ್ಯಾತ ಬಾಲಿವುಡ್ ನಟ ಅಮಿತಾಭ ಬಚ್ಚನ್ ಅವರನ್ನು ಮುಂಬೈನ ನಾನಾವತಿ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ವರದಿಯಾಗಿದೆ.
ಸಂಜೆಗೆ ತಮಗೆ ಕೊರೋನಾ ಇರುವುದಾಗಿ ಬಿಗ್ ಬಿ ಟ್ವಿಟ್ಟರ್ ನಲ್ಲಿ ಬರೆದುಕೊಂಡಿರುವುದರಿಂದ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.ಎಪ್ರಿಲ್ ನಲ್ಲಿ ಅವರೇ ಒಂದು ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ದೃಷ್ಟಿ ಮಂಜಾಗಿರುವ ಬಗ್ಗೆ ಬರೆದುಕೊಂಡಿದ್ದರು. ಆದರೆ ನಾನೇನು ಕುರುಡನಾಗಿಲ್ಲ ಎಂದು ಹೇಳಿದ್ದರು. ಆದರೆ ಅಮಿತಾಭ ಅವರು, ತಮಗೆ ಕೊರೋನಾ ಇರುವುದನ್ನು ಟ್ವೀಟ್ ಮೂಲಕ ತಿಳಿಸಿರುವುದರಿಂದ ಅವರನ್ನು ಪ್ರತಿಷ್ಠಿತ ನಾನವತಿ ಆಸ್ಪತ್ರೆಗೆ ಸೇರಿಸಲಾಗಿದೆಯೆಂದು ತಿಳಿದು ಬಂದಿದೆ.