ಸಿಂದಗಿ: ಪ್ರಪ್ರಜೆಗಳು ಪ್ರಜೆಗಳಾಗಿ ಆಳುವ ದೇಶ ಕಟ್ಟುವಲ್ಲಿ ಶ್ರಮಿಸಿದ ರಾಷ್ಟ್ರನಾಯಕರನ್ನು ನಾವೆಲ್ಲರೂ ಸ್ಮರಿಸೋಣ ಎಂದು ಮಕ್ಕಳ ಕಲ್ಯಾಣ ಪ್ರತಿಷ್ಠಾನದ ಕಾರ್ಯದರ್ಶಿ ಡಾ.ಜ್ಯೋತಿ ಪೂಜಾರ ಹೇಳಿದರು.
ಪಟ್ಟಣದ ಕ್ರಿಯೇಟಿವ್ ಕಿಡ್ಸ್ ಹೋಮ್ನಲ್ಲಿ ರವಿವಾರ ಜರುಗಿದ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ವಿವಿಧ ವೇಷಭೂಷಣದೊಂದಿಗೆ ಭಾಗವಹಿಸಿದ್ದರು. ಡಾ.ಚೇತನ ಪೂಜಾರಿ ಧ್ವಜಾರೋಹಣ ನೆರವೇರಿಸಿದರು. ಸುನೀಲ ಪೂಜಾರಿ, ವಿದ್ಯಾ ಪೂಜಾರಿ ಅಧ್ಯಕ್ಷ ರಮೇಶ ಪೂಜಾರ, ಶಿಕ್ಷಕಿಯರಾದ ಅಶ್ವಿನಿ ಲೋಣಿ, ಮಂಗಲಾ ಬಮ್ಮಣ್ಣಿ, ಸಾಧನಾ ಇಮಡೆ, ಪ್ರೀಯಾ ಪವಾಡೆ, ರೇವತಿ ಬಳೂಂಡಗಿ, ಸಿಬ್ಬಂಧಿ ಶ್ರೀಶೈಲ ಹೂಗಾರ, ಅಂಬಿಕಾ ಕರಿವಿನಶೆಟ್ಟಿ, ಹೇಮಾ ಬಡಿಗೇರ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

