ಜ.13ರಂದು ಪಂಚಮಸಾಲಿಗೆ ಮೀಸಲಾತಿಗಾಗಿ ಮುಖ್ಯಮಂತ್ರಿ ಮನೆ ಮುಂದೆ ಸತ್ಯಾಗ್ರಹ- ಫಿರೋಜಿ

0
217

ಮೂಡಲಗಿ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಕಲ್ಪಿಸುವ ಉದ್ದೇಶದಿಂದ ಕೂಡಲಸಂಗಮದ ಬಸವಜಯ ಮೃತ್ಯುಂಜಯ ಮಹಾಸ್ವಾಮಿಗಳ ನೇತೃತ್ವದಲ್ಲಿ ಜ.13 ರಂದು ಶಿಗ್ಗಾವಿಯ ಸಿಎಂ ಬಸವರಾಜ ಬೊಮ್ಮಾಯಿ ಅವರ ಮನೆ ಮುಂದೆ ಹಮ್ಮಿಕೊಂಡಿರುವ ಧರಣಿ ಸತ್ಯಾಗ್ರಹದಲ್ಲಿ ಬೆಳಗಾವಿ ಜಿಲ್ಲೆ ಪಂಚಮಸಾಲಿ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಪಂಚಮಸಾಲಿ ಸಂಘಟನೆಯ ಬೆಳಗಾವಿ ಜಿಲ್ಲಾಕಾರ್ಯಾಧ್ಯಕ್ಷ ನಿಂಗಪ್ಪ ಪಿರೋಜಿ ಹೇಳಿದರು.

ಬುಧವಾರದಂದು ಪಟ್ಟಣದ ಪತ್ರಿಕಾ ಕಾರ್ಯಾಲದಲ್ಲಿ ಜರುಗಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು. ಪಂಚಮಸಾಲಿ ಸಮಾಜಕ್ಕೆ 2ಎ ಮಿಸಲಾತಿಗಾಗಿ ಬೃಹತ್ ಪಾದಯಾತ್ರೆ ಮೂಲಕ ಆರಂಭವಾದ ಹೋರಾಟ ಅನೇಕ ರೀತಿಯಲ್ಲಿ ಸಾಕಷ್ಟು ಹೋರಾಟಗಳನ್ನು ಹಮ್ಮಿಕೊಳ್ಳಲಾಗಿತ್ತು.

ಆದರೆ ಸಿಎಂ ಬಸವರಾಜ ಬೊಮ್ಮಾಯಿ ಅವರು ತಮ್ಮ ತಾಯಿ ಮೇಲೆ ಆಣೆ ಮಾಡಿ ಭರವಸೆ ನೀಡಿದ ಹಿನ್ನೆಲೆ ಸಮಾಜಕ್ಕೆ 2ಡಿ ಮೀಸಲಾತಿ ನೀಡಿರುವ ಹೇಳಿಕೆಯಲ್ಲಿ ಗೊಂದಲವುಂಟಾಗಿದು, ಸಮಾಜಕ್ಕೆ 2ಎ ಮೀಸಲಾತಿ ಕಲ್ಪಿಸಬೇಕು ಇಲ್ಲದೆ ಹೋದರೆ ಬಿಜೆಪಿ ಪಕ್ಷಕ್ಕೆ ಮುಂಬರುವ ವಿಧಾನ ಸಭೆಯ ಸಾರ್ವತ್ರಿಕ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಾಗುವುದು, ನಾನು ಒಬ್ಬ ಬಿಜೆಪಿ ಪಕ್ಷದಲ್ಲಿ ಬೆಳಗಾವಿ ಉಪಾಧ್ಯಕ್ಷನಾಗಿ, ಅರಭಾಂವಿ ಮಂಡಲ ಅಧ್ಯಕ್ಷನಾಗಿ ಮತ್ತು ನಿಷ್ಠಾವಂತ ಕಾರ್ಯಕರ್ತನಾಗಿ ಕಾರ್ಯ ನಿರ್ವಹಿಸಿದ್ದು,ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಕಲ್ಪಿಸದಿದ್ದಲ್ಲಿ ಚುನಾವಣೆಯಲ್ಲಿ ವಿರೋಧ ವ್ಯಕ್ತ ಪಡಿಸುವದಾಗಿ ಹೇಳಿದರು.

ಈ ಸಂದರ್ಭದಲ್ಲಿ ಮೂಡಲಗಿ ತಾಲೂಕಾ ಯುವ ಘಟಕ ಅಧ್ಯಕ್ಷ ಸಂಗಮೇಶ ಕೌಜಲಗಿ, ಸಮಾಜದ  ಅರಭಾವಿ ಮತಕ್ಷೇತ್ರದ ಕಾರ್ಯಾಧ್ಯಕ್ಷ ಡಾ.ಕೆ.ಎಚ್.ನಾಗರಾಳ ಮತ್ತು ಮಹಾದೇವ ಗೋಕಾಕ, ಪ್ರಶಾಂತ ನೀಡಗುಂದಿ, ಶೀವಾನಂದ ಎಡಿತ್ತಿನ್ನವರ, ಈರಪ್ಪ ಕುಡಚಿ, ಸುರೇಶ ಸಕ್ರೆಪ್ಪಗೋಳ ಇದ್ದರು.