ಡಿ.21 ರಂದು ಉಪ್ಪಾರ ಸಮಾಜದಿಂದ ಸತ್ಯಾಗ್ರಹ

Must Read

 

ಮೂಡಲಗಿ: ರಾಜ್ಯದಲ್ಲಿ ಉಪ್ಪಾರ ಸಮಾಜಕ್ಕೆ ಪರಿಶಿಷ್ಟ ಜಾತಿ (ಎಸ್‍ಸಿ) ಪರಿಶಿಷ್ಟ ಪಂಗಡದ (ಎಸ್.ಟಿ) ಮೀಸಲಾತಿ ನೀಡುವಂತೆ ಆಗ್ರಹಿಸಿ ಮಂಗಳವಾರ ಡಿ.21 ರಂದು ಮುಂಜಾನೆ 10 ಗಂಟೆಗೆ ಬೆಳಗಾವಿಯ ಸುವರ್ಣ ಸೌಧ ಮುಂದೆ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದ್ದು, ಉಪ್ಪಾರ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾದ ರಾಜ್ಯಾಧ್ಯಕ್ಷ ವಿಷ್ಣು ಲಾತೂರ ಮತ್ತು ಜಿಲ್ಲಾಧ್ಯಕ್ಷ ಮಂಜುನಾಥ ರಾಜಪ್ಪನವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಕರ್ನಾಟಕ ರಾಜ್ಯದಲ್ಲಿ ಸುಮಾರು 50 ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಉಪ್ಪಾರ ಸಮಾಜವು ಅತೀ ಹಿಂದುಳಿದ ಸಮಾಜವಾಗಿದ್ದು, ಇಲ್ಲಿಯವರೆಗೆ ಯಾವ ಸರ್ಕಾರಗಳು ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಮತ್ತು ಔದ್ಯೋಗಿಕವಾಗಿ ಮೀಸಲಾತಿ ನೀಡಿ ಮುಂಚೂಣಿಯಲ್ಲಿ ತರುವ ಪ್ರಯತ್ನ ಮಾಡಿರುವದಿಲ್ಲ.

1975 ರ ಹಾವನೂರ ಆಯೋಗದ ವರದಿ, 1986 ರ ವೆಂಕಟಸ್ವಾಮಿ ಆಯೋಗದ ವರದಿ, 1990 ರ ಚಿನ್ನಪ್ಪ ರಡ್ಡಿ ಆಯೋಗದ ವರದಿಗಳ ಪ್ರಕಾರ ಉಪ್ಪಾರ ಜಾತಿಯು ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಮತ್ತು ಔದ್ಯೋಗಿಕವಾಗಿ ಅತೀ ಹಿಂದುಳಿದ ಜಾತಿಯಾಗಿದೆ ಎಂದು ನಮೂದಿಸಲಾಗಿದೆ.

ಆದರೆ, ಸುಮಾರು ದಶಕಗಳು ಕಳೆದರೂ ಉಪ್ಪಾರ ಸಮಾಜಕ್ಕೆ ಯಾವುದೇ ಮೀಸಲಾತಿ ಸಿಗದೇ ಇರುವುದು ತುಂಬಾ ಅನ್ಯಾಯದ ಸಂಗತಿ. ಕಾರಣ ಉಪ್ಪಾರ ಸಮಾಜಕ್ಕೆ ಪರಿಶಿಷ್ಟ ಜಾತಿ (ಎಸ್‍ಸಿ) ಪರಿಶಿಷ್ಟ ಪಂಗಡದ (ಎಸ್.ಟಿ) ನೀಡುವಂತೆ  ಆಗ್ರಹಿಸಿ ಡಿ.21 ರಂದು ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶದ ವೇಳೆ ಮೀಸಲಾತಿ ನೀಡುವಂತೆ ಆಗ್ರಹಿಸಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಆದರಿಂದ ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸರಕಾರ ಎಚ್ಚರಿಸುವ ಈ ಹೋರಾಟಕ್ಕೆ ಬೆಂಬಂಸಬೇಕೆಂದು ರಾಜ್ಯ ಉಪಾಧ್ಯಕ್ಷ ಅರಣು ಸಂವತಿಕಾಯಿ ತಿಳಿಸಿದ್ದಾರೆ.

Latest News

ಸಿಂದಗಿ : ಕ್ರೀಡಾಕೂಟದ ಸಿದ್ಧತೆ ಪರಿಶೀಲಿಸಿದ ಶಾಸಕ ಮನಗೂಳಿ

ಸಿಂದಗಿ; ನಶಿಸಿ ಹೋಗುತ್ತಿರುವ ದೇಶಿಯ ಕ್ರೀಡೆಗಳ ಉತ್ತೇಜನಕ್ಕಾಗಿ ಶಿಕ್ಷಣ ಇಲಾಖೆಗೆ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಇದೇ ಅ. ೨೩,೨೪,೨೫ ರಂದು ಪದವಿಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕುಸ್ತಿ...

More Articles Like This

error: Content is protected !!
Join WhatsApp Group