ನಾಡೋಜ ಪ್ರಶಸ್ತಿ ಪುರಸ್ಕೃತ ಡಾ.ವೂಡೇ ಪಿ. ಕೃಷ್ಣರವರಿಗೆ ಅಭಿನಂದನೆ

Must Read

ಬೆಂಗಳೂರಿನ ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ, ಹಿರಿಯ ಶಿಕ್ಷಣ ತಜ್ಞ, ಶೇಷಾದ್ರಿಪುರಂ ಶಿಕ್ಷಣ ಸಂಸ್ಥೆಯ ಗೌ|| ಪ್ರಧಾನ ಕಾರ್ಯದರ್ಶಿ ಡಾ. ವೂಡೇ ಪಿ. ಕೃಷ್ಣರವರು ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ 28ನೇ ನುಡಿಹಬ್ಬದಲ್ಲಿ ನೀಡುವ ಪ್ರತಿಷ್ಠಿತ ನಾಡೋಜ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಅನೇಕ ಗೌರವ ಸನ್ಮಾನ ಪುರಸ್ಕೃತರಾದ ಡಾ.ವೂಡೇ ಪಿ. ಕೃಷ್ಣ ಈ ನಾಡು ಕಂಡ ಅಪರೂಪದ ವ್ಯಕ್ತಿತ್ವ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇತ್ತೀಚೆಗೆ ಇವರ ಬದುಕು-ಬರಹ ಸಾಧನೆಗಳನ್ನು ಒಳಗೊಂಡ ಸಾಕ್ಷ್ಯಚಿತ್ರ ರೂಪಿಸಿದೆ.

ನ.10ರಂದು ಹಂಪಿ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ನಡೆಯುವ ಘಟಿಕೋತ್ಸವದಲ್ಲಿ ವಿವಿ ಕುಲಾಧಿಪತಿಗಳಾದ ರಾಜ್ಯಪಾಲ ವಾಜುಭಾಯ್ ವಾಲಾರವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಈ ಸಂದರ್ಭದಲ್ಲಿ ಗಾಂಧಿ ಶಾಂತಿ ಪ್ರತಿಷ್ಠಾನದ ಅಧ್ಯಕ್ಷ ಹಾಗು ಅಮರ ಬಾಪು ಚಿಂತನ ಪತ್ರಿಕೆಯ ಸಂಪಾದಕ ಶ್ರೀ ಜೀರಿಗೆ ಲೋಕೇಶ್ ಅಭಿನಂದಿಸಿದರು. ಶ್ರೀಯುತರ ಸೇವೆ ರಾಜ್ಯ-ರಾಷ್ಟ್ರ ಮಟ್ಟದಲ್ಲಿ ದೊರೆಯಲಿ ಎಂದು ಅಭಿನಂದನೆ ಸಲ್ಲಿಸಿದ ಜೀರಿಗೆ ಲೋಕೇಶ್ ತಿಳಿಸಿದ್ದಾರೆ ಜೊತೆಯಲ್ಲಿ ಖಜಾಂಚಿ ಪ್ರೊ. ಪ್ರತಾಪ್ ಲಿಂಗಯ್ಯ ಇದ್ದಾರೆ.

Latest News

ಬೆಳ್ಳಿ ಬಂಗಾರ ಕದ್ದ ಖದೀಮರ ಹೆಡೆಮುರಿ ಕಟ್ಟಿದ ಗೋಕಾಕ ಪೋಲಿಸರು

ಗೋಕಾಕ ನಗರದ ಬೀಗ ಹಾಕಿದ್ದ ಮನೆಯೊಂದರ ಕೀಲಿ ಮುರಿದು ಬೆಳ್ಳಿ ಬಂಗಾರ ಸೇರಿದಂತೆ ನಗದು ಹಣ ಕದ್ದು ಪರಾರಿಯಾಗಿದ್ದ ಕುಖ್ಯಾತ ಖದೀಮರನ್ನು ಗೋಕಾಕ ಪೋಲಿಸರು ಬಂಧಿಸುವಲ್ಲಿ...

More Articles Like This

error: Content is protected !!
Join WhatsApp Group