ಹೆಚ್ಚುತ್ತಿರುವ ಕೊರೋನಾ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಬರುವ ಮೇ. ೨ ರಂದು ನಡೆಯಲಿರುವ ಉಪಚುನಾವಣೆಗಳ ಮತ ಎಣಿಕೆ ಕಾರ್ಯವನ್ನು ಮುಂದೂಡಬೇಕು ಎಂದು ಸಾಮಾಜಿಕ ಕಾರ್ಯಕರ್ತ ಭೀಮಪ್ಪ ಗಡಾದ ರಾಜ್ಯ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಮಾಡಿದ್ದಾರೆ.
ಕೊರೋನಾ ನಿಯಮಗಳನುಸಾರ ಹೆಚ್ಚು ಜನರು ಒಂದೇ ಕಡೆಗೆ ಸೇರುವಂತಿಲ್ಲ ಆದರೆ ಮತ ಎಣಿಕೆ ಸಂದರ್ಭದಲ್ಲಿ ಅಧಿಕಾರಿಗಳು, ಎಜೆಂಟರು, ಜನಪ್ರತಿನಿಧಿಗಳು ಸೇರಿದಂತೆ ೧೫೦ ಜನರು ಒಂದೇ ಕಡೆಗೆ ಸೇರುವುದರಿಂದ ಕೊರೋನಾ ಇನ್ನಷ್ಟು ಹೆಚ್ಚುವ ಭೀತಿ ಇದೆ ಆದಕಾರಣ ಮತ ಎಣಿಕೆ ಪ್ರಕ್ರಿಯೆಯನ್ನು ಮುಂದೂಡಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಅಲ್ಲದೆ ಮತ ಎಣಿಕೆ ಸಂದರ್ಭದಲ್ಲಿ ಜನ ಸೇರುವುದರಿಂದ ಕೊರೋನಾ ಹಬ್ಬಿದರೆ ಅದಕ್ಕೆ ಯಾರು ಹೊಣೆಗಾರರಾಗುತ್ತಾರೆ. ಆದಕಾರಣ ದಿ ೨.೫.೨೧ ರಂದು ನಡೆಯುವ ಮತ ಎಣಿಕೆ ಕಾರ್ಯವನ್ನು ರದ್ದು ಮಾಡಬೇಕು ಇಲ್ಲದಿದ್ದರೆ ಸರ್ಕಾರದ ವಿರುದ್ಧ ಉಚ್ಛ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗುವುದು ಎಂದು ಗಡಾದ ಹೇಳಿದ್ದಾರೆ.