ಮೂಡಲಗಿ ಅಗ್ನಿ ಶಾಮಕ ಠಾಣೆಗೆ ಅನುಮೋದನೆ

Must Read

ಮೂಡಲಗಿ-ತಾಲೂಕಿನ ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿದ್ದ ಅಗ್ನಿ ಶಾಮಕ ಠಾಣಾ ಕಟ್ಟಡ ನಿರ್ಮಾಣಕ್ಕೆ ಕೇಂದ್ರ ಸರ್ಕಾರದ 15 ನೇ ಹಣಕಾಸು ಯೋಜನೆಯಡಿ 3 ಕೋಟಿ ರೂಪಾಯಿ ಆಡಳಿತಾತ್ಮಕ ಅನುಮೋದನೆಯಾಗಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು.

ಈ ಬಗ್ಗೆ ಹೇಳಿಕೆಯನ್ನು ನೀಡಿರುವ ಅವರು, ಒಟ್ಟು 21 ಅಗ್ನಿಶಾಮಕ ಠಾಣಾ ಕಟ್ಟಡಗಳ ಪೈಕಿ 15 ಅಗ್ನಿ ಶಾಮಕ ಠಾಣೆಗಳ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದ್ದು, ಅದರಲ್ಲಿ ಮೂಡಲಗಿಯು ಸೇರಿದೆ ಎಂದು‌ ಹರ್ಷ ವ್ಯಕ್ತಪಡಿಸಿದರು.

ಇಷ್ಟರಲ್ಲೇ ಅಗ್ನಿಶಾಮಕ ಠಾಣೆಯ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆಯನ್ನು ನೆರವೇರಿಸಲಾಗುವುದು. ಮೂಡಲಗಿ ತಾಲೂಕಿನ ಜನತೆಯ ಬಹುದಿನಗಳ ಬೇಡಿಕೆಯಾಗಿದ್ದು, ಇದು ಪಟ್ಟಣದ ಎಪಿಎಂಸಿ ಬಳಿ ನೂತನ ಕಟ್ಟಡವು ಆರಂಭಗೊಳ್ಳಲಿದೆ ಎಂದು ಬಾಲಚಂದ್ರ ಜಾರಕಿಹೊಳಿಯವರು ಮಾಹಿತಿಯನ್ನು ನೀಡಿದರು.

LEAVE A REPLY

Please enter your comment!
Please enter your name here

Latest News

ಡಾ.ಮಹಾಂತೇಶ ಬೀಳಗಿ ಯುವಕರಿಗೆ ಸ್ಫೂರ್ತಿ – ಮೌಲಾಲಿ ಆಲಗೂರ

ಸಿಂದಗಿ: ಸ್ಪೂರ್ತಿದಾಯಕ ಮಾತುಗಳಿಂದ ಲಕ್ಷಾಂತರ ಸ್ಪರ್ಧಾತ್ಮಕ ಓದುಗರ ಕೀರ್ತಿ ಹೆಚ್ಚಿಸುವಲ್ಲಿ ಮಹತ್ತರ ಪಾತ್ರ ವಹಿಸಿದ್ದ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕ, ಐಎಎಸ್ ಅಧಿಕಾರಿ ಮಹಾಂತೇಶ...

More Articles Like This

error: Content is protected !!
Join WhatsApp Group