spot_img
spot_img

ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಲು ಕ್ರಮ- ಶಾಸಕ ಬಾಲಚಂದ್ರ ಜಾರಕಿಹೊಳಿ

Must Read

- Advertisement -

ಯಾದವಾಡದಲ್ಲಿ ಪಿ.ಎಚ್.ಸಿ ನೂತನ ಕಟ್ಟಡದ ಉದ್ಘಾಟನೆ

 

ಮೂಡಲಗಿ: ಯಾದವಾಡ ಹಾಗೂ ಸುತ್ತಮುತ್ತಲಿನ ಬಡರೋಗಿಗಳಿಗೆ ಅನುಕೂಲವಾಗಲು ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡವನ್ನು ಸಾರ್ವಜನಿಕರಿಗೆ ಅರ್ಪಿಸಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಸಾರ್ವಜನಿಕರ ಮನವಿ ಮೇರೆಗೆ ಈ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುವುದಾಗಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.

- Advertisement -

ತಾಲೂಕಿನ ಯಾದವಾಡ ಗ್ರಾಮದಲ್ಲಿ ಸೋಮವಾರ ಸಂಜೆ ಶಾಸಕ ಬಾಲಚಂದ್ರ ಜಾರಕಿಹೊಳಿ, ದಾಲ್ಮೀಯಾ ಸಿಮೆಂಟ್ (ಭಾರತ) ಲಿಮಿಟೆಡ್ ಹಾಗೂ ಮೂಡಲಗಿ ತಾಲೂಕು ಪಂಚಾಯತಿ ಇವರುಗಳ ವಿಶೇಷ ಅನುದಾನದಲ್ಲಿ ಸುಮಾರು 70 ಲಕ್ಷ ರೂಗಳ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೆ ಏರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆಂದು ಹೇಳಿದರು.

ಕೋವಿಡ್ ಸಂದರ್ಭದಲ್ಲಿ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡಲು ಈ ಭಾಗದಲ್ಲಿ ಶಿಥಿಲಗೊಂಡಿದ್ದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಪುನ:ಶ್ಚೇತನ ನೀಡಲು ಹೊಸ ಕಟ್ಟಡವನ್ನು ನಿರ್ಮಿಸಲು ಯೋಜಿಸಿದ್ದೇವು. ಅದರಂತೆ ಸಾರ್ವಜನಿಕರ ಹಿತವನ್ನು ಗಮನದಲ್ಲಿಟ್ಟು ನಾನು, ದಾಲ್ಮೀಯಾ ಸಿಮೆಂಟ್ ಕಾರ್ಖಾನೆ ಹಾಗೂ ತಾಲೂಕು ಪಂಚಾಯತಿದವರು ಇದಕ್ಕಾಗಿ ಅನುದಾನವನ್ನು ನೀಡಿದ್ದೇವೆ. ಅದಕ್ಕಾಗಿ ಸಾಮಾಜಿಕ ಕಾರ್ಯಗಳಿಗೆ ಹೆಸರುವಾಸಿಯಾದ ದಾಲ್ಮೀಯಾ ಕಾರ್ಖಾನೆಗೆ ಕೃತಜ್ಞತೆ ಸಲ್ಲಿಸುವುದಾಗಿ ಅವರು ತಿಳಿಸಿದರು.

ಯಾದವಾಡ ಗ್ರಾಮವು ದಿನದಿಂದ ದಿನಕ್ಕೆ ಬೆಳೆಯುತ್ತಾ ಅಭಿವೃದ್ದಿಯಾಗುತ್ತಿದೆ. ಇಲ್ಲಿ ಸಕ್ಕರೆ ಹಾಗೂ ಸಿಮೆಂಟ್ ಕಾರ್ಖಾನೆಗಳು ತಲೆಯೆತ್ತಿವೆ. ರಸ್ತೆ ಸಂಚಾರವು ಕೂಡಾ ಜನದಟ್ಟನೆಯಿಂದ ಕೂಡಿದೆ. ಯಾದವಾಡಕ್ಕೆ ಹೊಂದಿಕೊಂಡಿರುವ ಅಕ್ಕಪಕ್ಕದ ಮುಧೋಳ, ರಾಮದುರ್ಗ, ಲೋಕಾಪೂರಕ್ಕೆ ಹೋಗುವ ರಸ್ತೆಗಳನ್ನು ಅಭಿವೃದ್ದಿಪಡಿಸಲಾಗುವುದು. ಅರಭಾವಿ ಕ್ಷೇತ್ರದಲ್ಲಿ ರಸ್ತೆ ದುರಸ್ತಿ ಕಾಮಗಾರಿಗಳನ್ನು ಕೈಗೊಂಡು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವಂತೆ ಈಗಾಗಲೇ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರಲ್ಲಿ ಮನವಿ ಮಾಡಲಾಗಿದೆ. ಗ್ರಾಮದೊಳಗಿನ ರಸ್ತೆಗಳನ್ನು ಸ್ಥಳೀಯ ಗ್ರಾಮ ಪಂಚಾಯತಿ ಸಮಿತಿಯವರು ಕೈಗೊಳ್ಳಲು ಶಾಸಕರು ಸಲಹೆ ನೀಡಿದರು.

- Advertisement -

ಅರಭಾವಿ ಕ್ಷೇತ್ರದಲ್ಲಿ ಎಲ್ಲ ಸಮಾಜಗಳ ಬಾಂಧವರು ಅಣ್ಣ-ತಮ್ಮಂದಿರರಂತೆ ಬಾಳುತ್ತಿದ್ದಾರೆ. ಪರಸ್ಪರ ಸಹೋದರತ್ವ ಮನೋಭಾವನೆಯಿಂದ ಬದುಕುತ್ತಿದ್ದೇವೆ. ಗ್ರಾಮಾಭಿವೃದ್ದಿಗೆ ಎಲ್ಲರೂ ಒಂದಾಗಿ ಒಗ್ಗಟ್ಟಿನಿಂದ ದುಡಿಯಬೇಕು. ಅಂದಾಗ ಮಾತ್ರ ಅಭಿವೃದ್ದಿ ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.

ವೇದಿಕೆಯಲ್ಲಿ ದಾಲ್ಮೀಯಾ ಸಿಮೆಂಟ್(ಭಾರತ) ಲಿ. ಯಾದವಾಡ ಘಟಕದ ಮುಖ್ಯಸ್ಥ ಪ್ರಭಾತಕುಮಾರ ಸಿಂಗ್, ಗ್ರಾ.ಪಂ ಅಧ್ಯಕ್ಷ ಬಸವರಾಜ ಭೂತಾಳಿ, ಮೂಡಲಗಿ ತಾ.ಪಂ ಇಓ ಎಫ್.ಜಿ.ಚಿನ್ನನ್ನವರ, ಎಡಿಎಚ್‍ಓ ಡಾ|| ಈಶ್ವರ ಗಡೇದ, ತಾಲೂಕಾ ಆರೋಗ್ಯಾಧಿಕಾರಿ ಡಾ|| ಮುತ್ತಣ್ಣ ಕೊಪ್ಪದ, ತಜ್ಞವೈದ್ಯ ಡಾ|| ಆರ್.ಎಸ್.ಬೆಣಚಿನಮರಡಿ, ಮೂಡಲಗಿ ಬಿಇಓ ಅಜೀತ ಮನ್ನಿಕೇರಿ ಅವರು ಉಪಸ್ಥಿತರಿದ್ದರು.

- Advertisement -
- Advertisement -

Latest News

ತತ್ವಬೋಧನೆಗೆ ಮಠಗಳು ಸಿದ್ಧವಾಗಬೇಕು – ಬಿಇಓ ಯಡ್ರಾಮಿ

ಸಿಂದಗಿ: ಆರ್ಥಿಕ ಸಬಲತೆಯ ಮಠಗಳಾಗದೇ ತತ್ವಭೋಧನೆಗೆ ಮಠಗಳು ಸಿದ್ಧವಾಗಬೇಕು. ಶಾಲೆಗಳಲ್ಲಿ ಶಿಸ್ತು ಮತ್ತು ಶಿಕ್ಷಣ ಕಲಿಯಬಹುದು ಮಠಗಳಿಂದ ಆಧ್ಯಾತ್ಮಿಕತೆ ಮತ್ತು ಸಂಸ್ಕಾರ ಸಿಗುವುದು ಅಲ್ಲದೆ ವಿದೇಶಗಳಲ್ಲಿ...
- Advertisement -

More Articles Like This

- Advertisement -
close
error: Content is protected !!
Join WhatsApp Group