- Advertisement -
ಮೂಡಲಗಿ: ಖ್ಯಾತ ಪತ್ರಕರ್ತ, ಸಾಹಿತಿ, ಲೇಖಕ, ಅಕ್ಷರ ಮಾಂತ್ರಿಕ ಹಾಯ್ ಬೆಂಗಳೂರ ವಾರ ಪತ್ರಿಕೆಯ ರವಿ ಬೆಳಗೆರೆ ಅವರ ನಿಧನಕ್ಕೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ತೀವ್ರ ಶೋಕ ವ್ಯಕ್ತಪಡಿಸಿದರು.
ಶುಕ್ರವಾರ ನ. 13 ಕಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಅವರು, ನಾಡಿನ ಅನೇಕ ಪತ್ರಿಕೆಯಲ್ಲಿ ಕೆಲಸ ಮಾಡಿರುವ ಅವರು ಅಪಾರ ಓದುಗರನ್ನು, ಅಭಿಮಾನಿಗಳನ್ನು ಸಂಪಾದಿಸಿದ ಬೆಳಗೆರೆ ಅವರು ನೇರ, ದಿಟ್ಟ ವ್ಯಕ್ತಿತ್ವಕ್ಕೆ ಹೆಸರುವಾಸಿಯಾಗಿದ್ದರು.
ಅವರ ನಿಧನದಿಂದ ಅವರ ಕುಟುಂಬದಲ್ಲಾದ ದುಃಖದಲ್ಲಿ ನಾವು ಸಹಭಾಗಿಯಾಗಿ ಅವರ ಆತ್ಮಕ್ಕೆ ಭಗವಂತನು ಚಿರಶಾಂತಿ ನೀಡಲೆಂದು ಪ್ರಾರ್ಥಿಸೋಣ ಎಂದರು.