ಸಿಂದಗಿ: 2021 ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶ್ರೀ ಪದ್ಮರಾಜ ಮಹಿಳಾ ಸ್ವತಂತ್ರ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದ ಕಲಾ ವಿಭಾಗದಿಂದ ಪರೀಕ್ಷೆಗೆ ಹಾಜರಾದ ಒಟ್ಟು 129 ಜನ ವಿದ್ಯಾರ್ಥಿನಿಯರಲ್ಲಿ 13 ವಿದ್ಯಾರ್ಥಿನಿಯರು ಅತ್ಯುನ್ನತ ಶ್ರೇಣಿ, 95 ವಿದ್ಯಾರ್ಥಿನಿಯರು ಪ್ರಥಮ ಶ್ರೇಣಿ, 21 ವಿದ್ಯಾರ್ಥಿನಿಯರು ದ್ವಿತೀಯ ಶ್ರೇಣಿ, ವಾಣಿಜ್ಯ ವಿಭಾಗದಿಂದ ಪರೀಕ್ಷೆಗೆ ಹಾಜರಾದ ಒಟ್ಟು 40 ವಿದ್ಯಾರ್ಥಿನಿಯರಲ್ಲಿ 06 ಅತ್ಯುನ್ನತ ಶ್ರೇಣಿ, 30 ವಿದ್ಯಾರ್ಥಿನಿಯರು ಪ್ರಥಮ ಶ್ರೇಣಿ, 04 ವಿದ್ಯಾರ್ಥಿನಿಯರು ದ್ವಿತೀಯ ಶ್ರೇಣಿ, ವಿಜ್ಞಾನ ಭಾಗದಿಂದ ಪರೀಕ್ಷೆಗೆ ಹಾಜರಾದ ಒಟ್ಟು 2 ವಿದ್ಯಾರ್ಥಿನಿಯರಲ್ಲಿ 02 ಪ್ರಥಮ ಶ್ರೇಣಿಯಲ್ಲಿ ತೆರ್ಗಡೆಯಾಗಿದ್ದಾರೆ. ಕಾಲೇಜಿನ ಒಟ್ಟು ಫಲಿತಾಂಶ 100% ಕ್ಕೆ 100% ರಷ್ಟಾಗಿರುತ್ತದೆ.
ವಿದ್ಯಾರ್ಥಿನಿಯರ ಈ ಸಾಧನೆಗೆ ಸಂಸ್ಥೆಯ ಚೇರಮನ್ನರು ಆಡಳಿತ ಮಂಡಳಿಯ ಸದಸ್ಯರು, ಪ್ರಾಚಾರ್ಯರು ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯವರು ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.