ಶಿವಾಜಿ ಪಟ್ಟಾಭಿಷೇಕ ದಿನ ಈವತ್ತು

Must Read

ಭಾರತ ದೇಶಕ್ಕೆ ಸ್ವಾಭಿಮಾನದ ಗಣಿಯಾಗಿ ಗೋಚರಿಸಿದ ಹಿಂದೂ ಹೃದಯ ಸಾಮ್ರಾಟನೆನಿಸಿಕೊಂಡ ಮಹಾರಾಜ ಛತ್ರಪತಿ ಶಿವಾಜಿಯವರ ಪಟ್ಟಾಭಿಷೇಕದ ದಿನ ಇಂದು. ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ – ಏಪ್ರಿಲ್ ೩, ೧೬೮೦) ಮರಾಠಾ ರಾಜ್ಯದ ಸ್ಥಾಪಕರು.

ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು. ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು. ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ.

ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು. ಅಪ್ರತಿಮ ಯೋಧರೆನ್ನಿಸಿಕೊಂಡು ಹದಿಹರೆಯದಲ್ಲಿಯೇ ಯುದ್ಧಭೂಮಿಯಲ್ಲಿ ಪರಾಕ್ರಮ ಪ್ರದರ್ಶಿಸಿ ಮರಾಠ ರಾಜ್ಯ ಸ್ಥಾಪಿಸಿದ ಶಿವಾಜಿ ಮಹಾರಾಜ ಸ್ವಾಭಿಮಾನಿ ರಾಷ್ಟ್ರ ನಿರ್ಮಾಣದ ಕನಸು ಕಂಡವರು.

ಮಹಾರಾಷ್ಟ್ರದ ಅಸ್ಮಿತೆ ಶಿವಾಜಿ ಭೋಂಸ್ಲೆ ಅವರ ಕುಟುಂಬದ ತಾಯಿಬೇರು ಕನ್ನಡನಾಡಿನಲ್ಲಿದೆ. ಇದರ ವಾಸ್ತವಾಂಶಗಳೇನೇ ಇದ್ದರೂ ಶಿವಾಜಿಗೆ ಕನ್ನಡ ಭೂಮಿ ಪ್ರೇರಣಾ ಸ್ಥಳವಾಗಿತ್ತೆಂಬುದು ನಿಜ. ಕರ್ನಾಟಕಕ್ಕೂ ಮರಾಠರಿಗೂ ರಾಜಕೀಯ ಒಡನಾಟ ಆರಂಭವಾಗಿದ್ದು 17ನೇ ಶತಮಾನದ ಮೊದಲರ್ಧದಲ್ಲಿ. ರಾಜ್ಯ ವಿಸ್ತರಣೆಯಲ್ಲಿ ಮೊಗಲರಿಗೂ ವಿಜಾಪುರದ ಆದಿಲ್ ಶಾಹಿಗಳಿಗೂ ಕರಾರು ಏರ್ಪಟ್ಟು(1636) ಕರ್ನಾಟಕದ ದಕ್ಷಿಣ ಭಾಗ ಹಾಗೂ ತಮಿಳುನಾಡಿನ ಕೆಲವು ಭಾಗಗಳ ಮೇಲೆ ಹಿಡಿತ ಸಾಧಿಸಲು ಹವಣಿಸುತ್ತಿದ್ದರು. ಇದರಿಂದಾಗಿ ವಿಜಾಪುರದ ಸುಲ್ತಾನರು ಈ ಪ್ರದೇಶಗಳಲ್ಲಿ ಆಗಿಂದ್ದಾಗ್ಗೆ ದಂಡಯಾತ್ರೆಗಳನ್ನು ನಡೆಸುತ್ತಲೇ ಇದ್ದರು. ಇಂತಹ ದಂಡಯಾತ್ರೆಗಳಲ್ಲಿ ಮರಾಠಿ ಸರದಾರರು ಮುಂಚೂಣಿಯಲ್ಲಿದ್ದು ಬಹುತೇಕ ಗೆಲುವುಗಳಿಗೆ ಕಾರಣರಾಗಿದ್ದರು. ಇಂತಹ ಧೈರ್ಯಶಾಲಿ ಮರಾಠಿ ಸರದಾರರದಲ್ಲಿ ಮಾಲೋಜಿ ಭೋಂಸ್ಲೆಯ ಮಗ ಶಹಾಜಿ ಭೋಂಸ್ಲೆ ಅವರೂ ಒಬ್ಬರು. ವಿಜಾಪುರದ ಅಣತಿಯಂತೆ ಸೈನ್ಯ ಮುನ್ನಡೆಸುತ್ತಿದ್ದ ಶಹಾಜಿ ಹಾಗೂ ರಣದುಲ್ಲಾ ಖಾನ್​ರು ಬೆಂಗಳೂರು ಕೆಂಪೇಗೌಡರ ಸೈನ್ಯದೊಡನೆ ಮುಖಾಮುಖಿಯಾಗಿದ್ದು 1638ರ ಡಿಸೆಂಬರ್ ಮಾಹೆಯಲ್ಲಿ. ಜೋರು ಕಾಳಗದ ಬಳಿಕ ಸಂಧಿ ಏರ್ಪಟ್ಟು ಕೆಂಪೇಗೌಡ ತನ್ನ ರಾಜಧಾನಿಯನ್ನು ಮಾಗಡಿಗೆ ಸ್ಥಳಾಂತರಿಸಿದಾಗ ಬೆಂಗಳೂರು ಕೋಟೆ ವಿಜಾಪುರ ಸುಲ್ತಾನರ ಕೈವಶವಾಯಿತು. ಆಗ ಬೆಂಗಳೂರನ್ನು ಮಹಮ್ಮದ್ ಆದಿಲ್ ಷಾನಿಂದ ಜಹಗೀರು ಪಡೆದರು ಶಹಾಜಿ ಭೋಂಸ್ಲೆ.

1674ರಲ್ಲಿ ರಾಯಘಡದಲ್ಲಿ ಕಿರೀಟಧಾರಣೆಯ ಬಳಿಕ ಛತ್ರಪತಿ ಶಿವಾಜಿ ಮಹಾರಾಜ್ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಶಿವಾಜಿ 1680ರಲ್ಲಿ ಕಾಲವಾದರೂ ಅವರು ಸ್ಥಾಪಿಸಿದ ಮರಾಠ ರಾಜ್ಯ 1818ರವರೆಗೆ ಉಜ್ವಲವಾಗಿ ಬೆಳಗಿತು. ( ಮೂಲ: ವಿಕಿಪೀಡಿಯಾ )

Latest News

ಬೆಳ್ಳಿ ಬಂಗಾರ ಕದ್ದ ಖದೀಮರ ಹೆಡೆಮುರಿ ಕಟ್ಟಿದ ಗೋಕಾಕ ಪೋಲಿಸರು

ಗೋಕಾಕ ನಗರದ ಬೀಗ ಹಾಕಿದ್ದ ಮನೆಯೊಂದರ ಕೀಲಿ ಮುರಿದು ಬೆಳ್ಳಿ ಬಂಗಾರ ಸೇರಿದಂತೆ ನಗದು ಹಣ ಕದ್ದು ಪರಾರಿಯಾಗಿದ್ದ ಕುಖ್ಯಾತ ಖದೀಮರನ್ನು ಗೋಕಾಕ ಪೋಲಿಸರು ಬಂಧಿಸುವಲ್ಲಿ...

More Articles Like This

error: Content is protected !!
Join WhatsApp Group